ಮಧ್ಯಪ್ರದೇಶ | ಪ್ರೇಮಿಗಳಿಗೆ ಗುಂಡು ಹಾರಿಸಿ ಮೊಸಳೆಯಿರುವ ನದಿಗೆ ಎಸೆದ ಹೆತ್ತವರು

Date:

ವಿರೋಧದ ನಡುವೆಯೂ ಪ್ರೀತಿ ಮುಂದುವರೆಸಿದ ಪ್ರೇಮಿಗಳನ್ನು ಗುಂಡಿಕ್ಕಿ ಕೊಂದ ಪೋಷಕರು ಮೊಸಳೆಯಿರುವ ನದಿಗೆ ಎಸೆದ ಆಘಾತಕಾರಿ ಘಟನೆ ಮಧ್ಯ ಪ್ರದೇಶ ದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ.

ಪ್ರಕರಣ ಸಂಬಂಧಿಸಿದಂತೆ ಮಧ್ಯ ಪ್ರದೇಶ ರಾಜ್ಯದ ಮೊರೆನಾ ಜಿಲ್ಲೆಯ ಅಂಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎರಡು ವಾರಗಳ ಹಿಂದೆ ಯುವತಿಯ ಪೋಷಕರು ಈ ಕೃತ್ಯ ಎಸಗಿದ್ದು, ಯುವತಿಯ ಪೋಷಕರಿಗೆ ಅವರ ಕೆಲವು ಸಂಬಂಧಿಕರೂ ಸಹಾಯ ಮಾಡಿದ್ದರು ಎಂಬ ವಿಚಾರ ಬಯಲಾಗಿದೆ.

ಮಧ್ಯ ಪ್ರದೇಶ ದ ಮೊರೆನಾ ಜಿಲ್ಲೆಯ ರತ್ನಬಸೈ ಗ್ರಾಮದ 18 ವರ್ಷ ವಯಸ್ಸಿನ ಯುವತಿ ಶಿವಾನಿ ತೋಮರ್, ತಮ್ಮ ಪಕ್ಕದ ಗ್ರಾಮವಾದ ಬಲುಪುರ ನಿವಾಸಿ 21 ವರ್ಷದ ರಾಧೆಶ್ಯಾಂ ತೋಮರ್ ಎಂಬಾತನನ್ನು ಪ್ರೀತಿಸುತ್ತಿದ್ದರು. ಒಂದೇ ಜಾತಿಯವರಾಗಿದ್ದರೂ ಇಬ್ಬರ ಪ್ರೀತಿಗೆ ಕುಟುಂಬಸ್ಥರು ಒಪ್ಪಿಗೆ ಕೊಟ್ಟಿರಲಿಲ್ಲ. ಇಷ್ಟಾದರೂ ಹೆತ್ತವರ ಮಾತು ಕೇಳದೆ ಪ್ರೇಮಿಗಳು ತಮ್ಮ ಪ್ರೇಮ ಮುಂದುವರೆಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಖುಷ್ಬು ವಿರುದ್ಧ ‘ಹಳೆಯ ಪಾತ್ರೆ’ ಹೇಳಿಕೆ; ಡಿಎಂಕೆ ವಕ್ತಾರ ಉಚ್ಚಾಟನೆ

ಇದರಿಂದ ಆಕ್ರೋಶಗೊಂಡ ಯುವತಿಯ ಪೋಷಕರು ಯುವಕ ಮತ್ತು ಯುವತಿ ಇಬ್ಬರು ಒಟ್ಟಿಗೆ ಇದ್ದಾಗ ಅವರನ್ನು ಸೆರೆ ಹಿಡಿದು ಇಬ್ಬರ ಮೇಲೂ ಗುಂಡು ಹಾರಿಸಿ ಕೊಂದಿದ್ದಾರೆ. ಬಳಿಕ ಇಬ್ಬರ ಶವಕ್ಕೂ ಭಾರವಾದ ಕಲ್ಲುಗಳನ್ನು ಕಟ್ಟಿ, ಮೊಸಳೆಗಳು ಹೆಚ್ಚಾಗಿರುವ ಚಂಬಲ್ ನದಿಯಲ್ಲಿ ಶವಗಳನ್ನು ಎಸೆದಿದ್ದಾರೆ. ಈ ವಿಷಯವನ್ನು ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ಧಾರೆ.

ಈ ನದಿಯಲ್ಲಿ ಮೊಸಳೆಗಳ ಓಡಾಟ ವಿಪರೀತ ಇರುವ ಕಾರಣ, ಶವಗಳನ್ನು ಮೊಸಳೆಗಳು ತಿನ್ನಲಿ ಎಂದು ಆರೋಪಿಗಳು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರ ವಿಚಾರಣೆಯಿಂದ ತಿಳಿದು ಬಂದಿದೆ.

2 ವಾರಗಳ ಬಳಿಕ ಈ ಕೊಲೆ ಕೃತ್ಯ ಬೆಳಕಿಗೆ ಬಂದ ಕೂಡಲೇ ಮಧ್ಯ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಈಜುಗಾರರನ್ನು ಸಂಪರ್ಕ ಮಾಡಿದ ಪೊಲೀಸರು, ಇಬ್ಬರ ಮೃತದೇಹವನ್ನು ಪತ್ತೆ ಮಾಡಬೇಕೆಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೂನ್ 3 ರಿಂದ ಇಬ್ಬರು ನಾಪತ್ತೆಯಾಗಿದ್ದರು. ಯುವಕ ರಾಧೆಶ್ಯಾಂ ತೋಮರ್‌ನ ಕುಟುಂಬಸ್ಥರು ಶಿವಾನಿ ತೋಮರ್‌ ಪೋಷಕರ ವಿರುದ್ಧ ದೂರು ನೀಡಿದ್ದರು. ಈ ಸಂದರ್ಭದಲ್ಲಿ ಶಿವಾನಿ ತೋಮರ್ ಕುಟುಂಬಸ್ಥರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ ವೇಳೆ ಅಮಾನುಷ ಕೃತ್ಯ ಬಯಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...