ಬೀದರ್ | ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗೆ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚನೆ

Date:

ಆಗಸ್ಟ್ 15ರ ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳು ಮತ್ತು ಕಛೇರಿಗಳಲ್ಲಿ ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಗುರುವಾರ ಅಧಿಕಾರಿಗಳೊಂದಿಗೆ ನಡೆದ ಸ್ವಾತಂತ್ರ‍್ಯೊತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ವರು ಮಾತನಾಡಿದರು. “ಪ್ರತಿ ವರ್ಷದಂತೆ ಈ ವರ್ಷವು ಸ್ವಾತಂತ್ರ‍್ಯೊತ್ಸವ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಲಾಗುತ್ತದೆ. ಅಂದು ಅದಕ್ಕೂ ಮುಂಚಿತವಾಗಿ ವಿವಿಧ ಇಲಾಖೆ ಹಾಗೂ ಶಾಲಾ, ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸಿ 9 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಲ್ಲರೂ ಬರಬೇಕು” ಎಂದರು.

“ಕಳೆದ ವರ್ಷ ‘ಆಜಾದಿಕಾ ಅಮೃತ ಮಹೋತ್ಸವ’ ಕಾರ್ಯಕ್ರಮ ಇದ್ದುದ್ದರಿಂದ ಅದ್ದೂರಿಯಾಗಿ ಆಚರಿಸಲಾಯಿತು. ಈ ವರ್ಷವೂ ಸರ್ಕಾರಿ ಕಛೇರಿ ಮತ್ತು ನಗರದ ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಹಾಗೂ ಇತರೆ ವೃತ್ತಗಳಲ್ಲಿ ಆಗಸ್ಟ್ 13 ರಿಂದ 15 ರವರೆಗೆ ದೀಪಾಲಂಕಾರ ಮಾಡಿ, ಅದ್ದೂರಿಯಾಗಿ ಆಚರಿಸಬೇಕು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾರ್ಯಕ್ರಮಕ್ಕೆ ಬರುವ ಶಾಲಾ ಮಕ್ಕಳಿಗೆ ನೀರು ಮತ್ತು ಅಲ್ಪ ಉಪಹಾರದ ವ್ಯವಸ್ಥೆ ಮಾಡಬೇಕು. ಪ್ಲಾಸ್ಟಿಕ್ ಧ್ವಜಗಳನ್ನು ಜಿಲ್ಲೆಯಲ್ಲಿ ಯಾರು ಬಳಸಬಾರದು” ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೆಶಕರಾದ ಸುರೇಖಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕರಾದ ಚಂದ್ರಕಾಂತ ಶಾಬಾದಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣಪತಿ ಡಿ.ಕೆ., ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ, ವಿರುಪಾಕ್ಷ ಗಾದಗಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮನರೇಗಾ ಯೋಜನೆಯ ಲಾಭ ಬಡವರಿಗೆ ದೊರಕಲಿ: ಬಸವರಾಜ ಗಿರಿತಿಮ್ಮಣ್ಣವರ 

ಮನರೇಗಾ ಯೋಜನೆಯಡಿ ಈ ಬಾರಿ ಸಮುದಾಯ ಕಾಮಗಾರಿಗಳನ್ನು ಸಮರ್ಪಕವಾಗಿ ಕಾರ್ಯ ರೂಪಕ್ಕೆ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...