ಮಂಡ್ಯ | ಯತ್ನಾಳ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Date:

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ದ ಪಕ್ಷದ ವರಿಷ್ಟರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಂಗಳವಾರ ಮಂಡ್ಯದ ಅಂಚೆ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ಅಂಚೆ ಮೂಲಕ ಪ್ರತಿಭಟನಾಕಾರರು ಪತ್ರ ಕಳಿಸಿದ್ದಾರೆ. “ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಶಕುನಿ ಎಂದು ಟೀಕೆ ಮಾಡಿರುವ ಯತ್ನಾಳ್‌ಗೆ ಪಕ್ಷದ ವರಿಷ್ಠರು ತಿಳುವಳಿಕೆ ಹೇಳಬೇಕು. ಇಲ್ಲದಿದ್ದರೆ ಯತ್ನಾಳ್ ಅವರನ್ನು ಸರಿದಾರಿಗೆ ತರಲು ಯಡಿಯೂರಪ್ಪರ ಅನುಯಾಯಿಗಳಿಗೆ ಅವಕಾಶ ನೀಡಬೇಕು” ಎಂದಿದ್ದಾರೆ.

ಯತ್ನಾಳ್ ವರ್ತನೆಯಿಂದ ಲೋಕಸಭಾ ಚುನಾವಣೆ ಮೇಲೆ ಹೊಡೆತ ಬೀಳಲಿದೆ, ಆದ್ದರಿಂದ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ಮುಖಂಡರಾದ ಎಸ್. ಶಿವಕುಮಾರ್ ಆರಾಧ್ಯ, ಸಾತನೂರು ಯೋಗೇಶ್, ಎಂ.ಎಸ್ ನಂದೀಶ್, ಹೊಸಹಳ್ಳಿ ಶಿವು, ಎಚ್ ಕೆ ಮಂಜುನಾಥ್, ಸಿ.ಎಂ.ವಿಜಯಕುಮಾರ್, ಎಸ್ ಕೆ ನಾಗರಾಜು, ರೇವ ನಂಜುಂಡಸ್ವಾಮಿ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...