40% ಕಮಿಷನ್ | ತನಿಖೆಗೆ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿ ರಚನೆ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್‌ ನೀಡುವಾಗ 40% ಕಮಿಷನ್‌ ಪಡೆಯುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಆರೋಪಿಸಿದ್ದರು. ಕಮಿಷನ್‌ ಭ್ರಷ್ಟಾಚಾರದ ತನಿಖೆ ನಡೆಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ.

ತನಿಖಾ ಸಮಿತಿ ರಚನೆ ಮಾಡಿ ಗುರುವಾರ ಆದೇಶ ಹೋರಡಿಸಿರುವ ಸರ್ಕಾರ, “ಕಾಮಗಾರಿಗಳ ಟೆಂಡರ್‌, ಪುನರ್‌ ಅಂದಾಜು, ಬಾಕಿ ಮೊತ್ತ ಬಿಡುಗಡೆ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಬೇಕು. ಪ್ರಕರಣಗಳಿಗೆ ಸಂಬಂಧಿಸಿದ ಸ್ಥಳ, ದಾಖಲಾತಿಗಳನ್ನು ಪರಿಶೀಲಿಸಬೇಕು. ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಶಿಫಾರಸ್ಸುಗಳೊಂದಿಗೆ ಸಂಪೂರ್ಣ ವರದಿಯನ್ನು 30 ದಿನಗಳ ಒಳಗೆ ಸಲ್ಲಿಸಬೇಕು” ಎಂದು ಹೇಳಿದೆ.

“ತನಿಖೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನೆರವು ನೀಡಬೇಕು. ತನಿಖಾ ಸಮಿತಿ ಕೇಳುವ ಅಗತ್ಯ ದಾಖಲೆಗಳು, ಮಾಹಿತಿಗಳು, ಕಡತಗಳನ್ನು ಅಧಿಕಾರಿಗಳು ಒದಗಿಸಬೇಕು. ಸಮಿತಿಯು ತನಿಖೆಗಾಗಿ ತಾಂತ್ರಿಕ ಸಲಹೆಗಾರರು, ಆರ್ಥಿಕ ಸಲಹೆಗಾರರು ಮತ್ತು ಆಡಳಿತಾತ್ಮಕ ಸಲಹೆಗಾರರನ್ನು ನೇಮಿಸಿಕೊಳ್ಳಬಹುದು” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಟೆಂಡರ್‌ ಪ್ರಕ್ರಿಯೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಮತ್ತು ದೂರುಗಳು ಬಂದಿದ್ದರೂ, ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದೇ ತನಿಖೆ ಆಗಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಜಾರಿಗೊಳಿಸುವ ಉದ್ದೇಶದಿಂದ ತನಿಖಾ ಸಮಿತಿ ರಚಿಸಲಾಗಿದೆ” ಎಂದು ಆದೇಶದಲ್ಲಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ರೌಡಿಶೀಟರ್, ಸುಪಾರಿ ಕಿಲ್ಲರ್ ದಿನೇಶ್ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ರೌಡಿಶೀಟರ್‌ ಹಾಗೂ ಸುಪಾರಿ ಕಿಲ್ಲರ್‌ನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ...

ಧಾರವಾಡ ಕ್ಷೇತ್ರ | ಪ್ರಲ್ಹಾದ್ ಜೋಶಿ ಬದಲಾವಣೆಗೆ ಮಠಾಧೀಶರಿಂದ ಹಕ್ಕೊತ್ತಾಯ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಅವರನ್ನು ಬದಲಿಸಬೇಕು...

ಕನ್ನಡಿಗರ ಎದುರು ಚರ್ಚೆಗೆ ಬನ್ನಿ; ನಿರ್ಮಲಾ ಸೀತಾರಾಮನ್‌ಗೆ ಸಿದ್ದರಾಮಯ್ಯ ಪಂಥಾಹ್ವಾನ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬಹಿರಂಗ ಚರ್ಚೆಗೆ ಸಿಎಂ ಸಿದ್ದರಾಮಯ್ಯ...

ಬೆಂಗಳೂರು | ರಜಾ ದಿನಗಳಂದು ಬೆಸ್ಕಾಂ ಕ್ಯಾಶ್‌ ಕೌಂಟರ್‌ಗಳಲ್ಲಿ ಸೇವೆ

ವಿದ್ಯುತ್‌ ಬಿಲ್‌ ಪಾವತಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಸಲುವಾಗಿ ಬೆಂಗಳೂರು ವಿದ್ಯುತ್...