ಪ್ರತಿಭಟನೆ ವೇಳೆ ರಸ್ತೆ ತಡೆ: ಸಿಎಂ ಸಿದ್ದರಾಮಯ್ಯನವರಿಗೆ ದಂಡ ವಿಧಿಸಿದ ಹೈಕೋರ್ಟ್‌

Date:

ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಕಾರಣವೊಡ್ಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ 10 ಸಾವಿರ ರೂಪಾಯಿ ದಂಡ ವಿಧಿಸಿದೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಮಾಜಿ ಸಚಿವ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಕಾರಣ ಎಂದು ಆರೋಪಿಸಿ ಕಾಂಗ್ರೆಸ್‌ ನಾಯಕರು 2022ರ ಏಪ್ರಿಲ್‌ನಲ್ಲಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು. ಈ ವೇಳೆ ರಸ್ತೆ ತಡೆ ಉಂಟಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಜನಸಾಮಾನ್ಯರ ಸಂಚಾರಕ್ಕೆ ತೊಂದರೆಯುಂಟಾಗಿತ್ತು.

ಹೀಗಾಗಿ ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ ಎಂದು ಆರೋಪಿಸಿ ಆಗಿನ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ? ಉತ್ತರಾಖಂಡ | ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಿದ ಸಿಎಂ ಪುಷ್ಕರ್ ಸಿಂಗ್ ಧಾಮಿ

ಅರ್ಜಿಯ ವಿಚಾರಣೆ ನಡೆಸಿ ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಅಲ್ಲದೇ, ಮಾರ್ಚ್ 7ರಂದು ಸಚಿವ ರಾಮಲಿಂಗಾರೆಡ್ಡಿ, ಮಾರ್ಚ್ 11ರಂದು ರಣದೀಪ್ ಸಿಂಗ್ ಸುರ್ಜೇವಾಲಾ, ಮಾರ್ಚ್ 15 ರಂದು ಎಂ.ಬಿ.ಪಾಟೀಲ್ ಅವರನ್ನು ಹಾಜರಾಗುವಂತೆ ನಿರ್ದೇಶನ ನೀಡಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...