ಬಿಎಂಟಿಸಿ | ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ₹11.81 ಕೋಟಿ ಹಗರಣ; ಮುಖ್ಯ ಲೆಕ್ಕಾಧಿಕಾರಿ ಬಂಧನ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ₹11.81 ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಸಂಸ್ಥೆಯ ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ.

ಬಿಎಂಟಿಸಿ ಅಸಿಸ್ಟೆಂಟ್ ಸೆಕ್ಯುರಿಟಿ ಮತ್ತು ವಿಜಿಲೆನ್ಸ್ ಅಧಿಕಾರಿ ರಮ್ಯಾ ಅವರು ಹಗರಣ ನಡೆದಿರುವ ಬಗ್ಗೆ ದೂರು ನೀಡಿದ್ದರು. ಅವರ ದೂರಿನನ್ವಯ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಫೆಬ್ರುವರಿ 3ರಂದು ಸಂಸ್ಥೆಯ ಮುಖ್ಯ ಲೆಕ್ಕಾಧಿಕಾರಿ ಆಗಿದ್ದ ಅಬ್ದುಲ್‌ ಖುದ್ದುಸ್ ಅವರನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಎರಡು ಪ್ರತ್ಯೇಕ ಅಪಘಾತ: ಐದು ಮಂದಿ ಸಾವು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಂಸ್ಥೆಯ ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ಬರೋಬ್ಬರಿ ₹11.81 ಕೋಟಿ ಹಗರಣ ನಡೆದಿತ್ತು. ಜನವರಿ 19 ರಂದು ಅಬ್ದುಲ್ ಖುದ್ದುಸ್ ಅವರನ್ನು ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕರು ಅಮಾನತು ಮಾಡಿ ಆದೇಶಿಸಿದ್ದರು. ಈ ವಂಚನೆಯಲ್ಲಿ ಶಾಮೀಲಾದ ಇತರರ ಬಗ್ಗೆಯೂ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ರೋಬೋಟಿಕ್ ತಂತ್ರಜ್ಞಾನದ ಮೂಲಕ ಜಲಮಂಡಳಿ ಕೊಳವೆ ಬಾವಿಗಳ ನಿರ್ವಹಣೆಗೆ ಸೂಚನೆ: ಜಲಮಂಡಳಿ ಅಧ್ಯಕ್ಷ

ಯುದ್ದೋಪಾದಿಯಲ್ಲಿ ಕೊಳವೆ ಬಾವಿಗಳ ದುರಸ್ತಿ ಕಾರ್ಯ ಮುಗಿಸಿಸಲು ಸೂಚನೆ ಬತ್ತಿಹೋಗಿರುವ...

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿನ ಸಣ್ಣಪುಟ್ಟ ವ್ಯತ್ಯಾಸ ಸುಖಾಂತ್ಯ ಆಗಲಿದೆ: ವಿಜಯೇಂದ್ರ

ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ...

ಬೆಂಗಳೂರು | ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಆವರಣದಲ್ಲಿ ಸ್ಫೋಟಕಗಳು ಪತ್ತೆ; ಆತಂಕ ಸೃಷ್ಟಿ

ರಾಜ್ಯ ರಾಜಧಾನಿ ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ...

ತುಮಕೂರು | ಅಸಮರ್ಪಕ ವಿದ್ಯುತ್‌ ಪೂರೈಕೆ; ಸಂಕಷ್ಟದಲ್ಲೂ ಸಿಬ್ಬಂದಿ ಬೇರೆಡೆ ನಿಯೋಜನೆ; ರೈತರ ಆಕ್ರೋಶ

ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ...