ಬೆಂಗಳೂರು| ಮಹಿಳೆಯ ಮೇಲೆ ಹಲ್ಲೆ ಎಸಗಿದ ಪ್ರಕರಣ; ಬಿಎಂಟಿಸಿ ಕಂಡಕ್ಟರ್ ಅಮಾನತು

Date:

ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್‌ ಓರ್ವ ಹಿಗ್ಗಾಮುಗ್ಗಾ ಹಲ್ಲೆ ಎಸಗಿದ ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರ್ ಅವರನ್ನು ಅಮಾನತು ಮಾಡಲಾಗಿದೆ.

ಮಾರ್ಚ್ 26ರಂದು ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುತ್ತಿದ್ದ ಹೊರ ರಾಜ್ಯದ ಓರ್ವ ಮಹಿಳಾ ಪ್ರಯಾಣಿಕರೊಬ್ಬರಿಗೆ ಟಿಕೆಟ್ ಪಡೆಯುವ / ನೀಡುವ ವಿಚಾರವಾಗಿ ಪ್ರಯಾಣಿಕರು ಮತ್ತು ನಿರ್ವಾಹಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಆ ಸಂದರ್ಭದಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರನ್ನು ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವಿಡಿಯೋ ಆಧಾರದಲ್ಲಿ ಕಂಡಕ್ಟರ್ ಮೇಲೆ ಶಿಸ್ತು ಕ್ರಮವನ್ನು ಕಾಯ್ದಿರಿಸಿ ಈ ಕೂಡಲೇ ಜಾರಿಗೆ ಬರುವಂತೆ “ವಿಚಾರಣಾ ಇತ್ಯರ್ಥ ಪೂರ್ವ ಅಮಾನತು ಮಾಡಲಾಗಿದೆ” ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರು | ಮಹಿಳೆಯ ಮೇಲೆ ಹಿಗ್ಗಾಮುಗ್ಗಾ ಹಲ್ಲೈಗೈದ @BMTC_BENGALURU ಕಂಡಕ್ಟರ್; ವಿಡಿಯೋ ವೈರಲ್

ಬಸ್ ನಲ್ಲಿಯೇ ಹಲ್ಲೆ ಮಾಡಿ ಅಟ್ಟಹಾಸ. ಟಿಕೆಟ್ ವಿಚಾರವಾಗಿ ಹಲ್ಲೆ: ಇಂದು ಬೆಳಗ್ಗೆ 10 ಗಂಟೆಗೆ ನಡೆದ ಕೃತ್ಯ. ಘಟನೆಯ ದೃಶ್ಯ ಮೊಬೈಲ್ ನಲ್ಲಿ ಸೆರೆ.

ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ FIR@zoo_bear @CPBlr @BlrCityPolice pic.twitter.com/9XKI3W0gBd
— eedina.com (@eedinanews) March 26, 2024

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ ಶಿವಾಜಿನಗರಕ್ಕೆ ಹೋಗುವ ಬಸ್‌ನಲ್ಲಿ ಬೆಳಿಗ್ಗೆ ಸುಮಾರು 10:00 ಗಂಟೆ ಸಮಯದಲ್ಲಿ ಹೊರ ರಾಜ್ಯದ ಓರ್ವ ಮಹಿಳಾ ಪ್ರಯಾಣಿಕರು ಬಿಳೇಕಳ್ಳಿಯಿಂದ ಶಿವಾಜಿನಗರಕ್ಕೆ ಪ್ರಯಾಣಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಹಾಗೂ ವಾಹನದ ನಿರ್ವಾಹಕರ ನಡುವೆ ಟಿಕೆಟ್ ಪಡೆಯುವ / ನೀಡುವ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿದೆ.

ಇದನ್ನು ಓದಿದ್ದೀರಾ?   ಬೆಂಗಳೂರು | ಮಹಿಳೆಯ ಮೇಲೆ ಹಿಗ್ಗಾಮುಗ್ಗಾ ಹಲ್ಲೆಗೈದ ಬಿಎಂಟಿಸಿ ಕಂಡಕ್ಟರ್; ವಿಡಿಯೋ ವೈರಲ್

ಆ ಸಂದರ್ಭದಲ್ಲಿ ನಿರ್ವಾಹಕರು ಮಹಿಳಾ ಪ್ರಯಾಣಿಕರನ್ನು ಹೊಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂಬಂಧ, ಮಹಿಳಾ ಪ್ರಯಾಣಿಕರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವಿಚಾರಣೆ ನಡೆಯುತ್ತಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಮಹಿಳಾ ಪ್ರಯಾಣಿಕರ ಸುರಕ್ಷಿತಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಸಂಸ್ಥೆಯು ಮಹಿಳೆಯರಿಗಾಗಿ ಬಸ್‌ಗಳಲ್ಲಿ ಪ್ರತ್ಯೇಕ ಆಸನ, ಪ್ರತ್ಯೇಕ ಬಾಗಿಲು, ಪ್ಯಾನಿಕ್ ಬಟನ್ ಅಳವಡಿಕೆ, ಸಿ.ಸಿ.ಟಿ.ವಿ., ಮಾಹಿತಿ ಫಲಕಗಳ ಅಳವಡಿಕೆ, ಪ್ರಮುಖ ಬಸ್ ನಿಲ್ದಾಣಗಳಲ್ಲಿ ಮಹಿಳಾ ವಿಶ್ರಾಂತಿ ಕೊಠಡಿ, ಸಹಾಯವಾಣಿಯಂತಹ ಕ್ರಮಗಳನ್ನು ಕೈಗೊಂಡಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಿಳಾ ಪ್ರಯಾಣಿಕರು ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಸುವುದು ಸುರಕ್ಷಿತ ಎನ್ನುವ ಭಾವನೆ ಉಂಟಾಗಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ. ಮಹಿಳಾ ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಸುಲಲಿತ ಪ್ರಯಾಣದ ಭಾವನೆಯನ್ನು ಮೂಡಿಸುವ ಸಲುವಾಗಿ ಎಲ್ಲಾ 27,000 ಚಾಲನಾ ಸಿಬ್ಬಂದಿಗಳಿಗೆ ಲಿಂಗ ಸಂವೇದನಾ (Gender Sensitization) ತರಬೇತಿ ನೀಡಲಾಗುತ್ತಿದೆ. ಸಂಸ್ಥೆಯು ಮಹಿಳಾ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿದ್ದು, ಮಹಿಳಾ ಪ್ರಯಾಣಿಕರ ಮೇಲೆ ಯಾವುದೇ ತರಹದ ದೌರ್ಜನ್ಯ, ಅಸಭ್ಯ ವರ್ತನೆ ಮತ್ತು ಅಹಿತಕರ ಘಟನೆಗಳು ಕಂಡುಬಂದಲ್ಲಿ ತಪ್ಪಿತಸ್ಥರ ಮೇಲೆ ಕಠಿಣ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಬಿಎಂಟಿಸಿ ಹೇಳಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...

ಬೆಂಗಳೂರು | ರೈಲಿಗೆ ಸಿಲುಕಿ ಮೂವರು ಯುವಕರು ದುರ್ಮರಣ

ರೈಲಿಗೆ ಸಿಲುಕಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು...