ಎಲ್ಗಾರ್ ಪರಿಷತ್ ಪ್ರಕರಣ: ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಬಾಂಬೆ ಹೈಕೋರ್ಟ್ ಜಾಮೀನು

Date:

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಲ್ಲಿ ಬಂಧನಕ್ಕೊಳಗಾಗಿದ್ದ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಸ್ತುತ ಗೌತಮ್ ನವ್ಲಾಖಾ ಗೃಹಬಂಧನದಲ್ಲಿದ್ದಾರೆ.

2017 ರ ಡಿಸೆಂಬರ್‌ನಲ್ಲಿ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನವ್ಲಾಖಾ ಅವರ ಸಹ ಆರೋಪಿ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ ಮತ್ತು ಮಹೇಶ್ ರಾವುತ್ ಅವರ ಜಾಮೀನು ಷರತ್ತುಗಳಂತೆಯೇ ಗೌತಮ್ ನವ್ಲಾಖಾ ಅವರಿಗೂ ಅನ್ವಯಿಸುತ್ತದೆ.

2017 ರ ಡಿಸೆಂಬರ್‌ನಲ್ಲಿ ಪುಣೆಯಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದ ಪ್ರೇರೇಪಣೆಯಿಂದ ಮರುದಿನ ಪಶ್ಚಿಮ ಮಹಾರಾಷ್ಟ್ರ ನಗರದ ಭೀಮಾ ಕೋರೆಗಾಂವ್‌ನಲ್ಲಿ ಗಲಭೆ ನಡೆದಿತ್ತು ಎಂದು ಪೊಲೀಸರ ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ, ಈ ಆದೇಶದ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗುವಂತೆ ಹೈಕೋರ್ಟ್ ಆದೇಶಕ್ಕೆ 3 ವಾರಗಳ ತಡೆ ನೀಡಿದೆ.

ಈ ವರ್ಷದ ಏಪ್ರಿಲ್‌ನಲ್ಲಿ, ವಿಶೇಷ ನ್ಯಾಯಾಲಯವು ನವ್ಲಾಖಾಗೆ ಜಾಮೀನು ನಿರಾಕರಿಸಿತ್ತು. ಆರೋಪಿಯು ನಿಷೇಧಿತ ಸಂಘಟನೆಯಾದ ಸಿಪಿಐ (ಮಾವೋವಾದಿ)ನ ಸಕ್ರಿಯ ಸದಸ್ಯ ಎಂದು ತೋರಿಸಲು ಪ್ರಾಥಮಿಕ ಸಾಕ್ಷಿಗಳಿವೆ ಎಂದು ಸೂಚಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

ಎಲ್ಗಾರ್ ಪರಿಷತ್ ಕಾರ್ಯಕ್ರಮವು ಭಾರತ ಸರ್ಕಾರದ ವಿರುದ್ಧದ ದೊಡ್ಡ ಮಾವೋವಾದಿಗಳ ಪಿತೂರಿಯ ಭಾಗವಾಗಿದೆ ಎಂದು ಎನ್ಐಎ ಆರೋಪಿಸಿದೆ.

ನವ್ಲಾಖಾ ಅವರು ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನ ಮೊರೆ ಹೋಗಿದ್ದರು. ಅವರನ್ನು ಆಗಸ್ಟ್ 2018 ರಲ್ಲಿ ಬಂಧಿಸಲಾಯಿತು ಮತ್ತು ತಲೋಜಾ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ನವೆಂಬರ್, 2022 ರಲ್ಲಿ ಅವರ ಆರೋಗ್ಯ ಹದಗೆಟ್ಟ ಕಾರಣ ಸುಪ್ರೀಂ ಕೋರ್ಟ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸಲು ಅನುಮತಿ ನೀಡಿತು.

ನವ್ಲಾಖಾ ಅವರ ಹಿಂದಿನ ಜಾಮೀನು ಅರ್ಜಿಯನ್ನು ವಿರೋಧಿಸಿದ ಎನ್‌ಐಎ, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಜನರಲ್‌ ಅವರೊಂದಿಗೆ ಸಂಬಂಧವಿದೆ ಎಂದು ಹೇಳಿಕೊಂಡಿದೆ. ಆದ್ದರಿಂದ ಇದು ಐಎಸ್‌ಐನೊಂದಿಗೆ ಆರೋಪಿಯ ಸಂಪರ್ಕವನ್ನು ಸೂಚಿಸುತ್ತದೆ ಎಂದು ಎನ್‌ಐಎ ಹೇಳಿಕೊಂಡಿದೆ.

ಬಂಧಿತ 16 ಕಾರ್ಯಕರ್ತರಲ್ಲಿ ಜಾಮೀನು ಪಡೆದ ಏಳನೇ ಆರೋಪಿ ನವ್ಲಾಖಾ ಅವರಾಗಿದ್ದಾರೆ.

ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ, ಕವಿ ವರವರ ರಾವ್, ವಕೀಲೆ ಸುಧಾ ಭಾರದ್ವಾಜ್, ವೆರ್ನಾನ್ ಗೊನ್ಸಾಲ್ವಿಸ್, ಅರುಣ್ ಫೆರಿರಾ ಮತ್ತು ಮಹೇಶ್ ರಾವುತ್ ಸಾಮಾನ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ವರವರ ರಾವ್ ಅವರಿಗೆ ಆರೋಗ್ಯದ ಕಾರಣದಿಂದ ಜಾಮೀನು ನೀಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...

ʼಈ ದಿನʼ ಸಮೀಕ್ಷೆ | “ನಾ ಖಾವೂಂಗ, ಖಾನೇದೂಂಗ” ಎನ್ನುತ್ತಲೇ ಭ್ರಷ್ಟಾಚಾರ ಮಾಡಿದ ಮೋದಿ ಸರ್ಕಾರ

ಮೋದಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಲಿದೆ ಎಂದು ಭಾವಿಸಿ ಮತ ಹಾಕಿದ್ದ...

ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ: ರಾಮ್‌ದೇವ್‌ಗೆ ಸುಪ್ರೀಂ ತರಾಟೆ

ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ...

ಸಕ್ಕರೆ ಪ್ರಮಾಣ ಹೆಚ್ಚಳ: ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ ಎಂದ ತಿಹಾರ್ ಜೈಲಿನ ಅಧಿಕಾರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕವಾದ...