ಮುತ್ತಪ್ಪ ರೈ ಪುತ್ರನ ಮೇಲೆ ಉದ್ಯಮಿ ನಾಯ್ಡು ಹಲ್ಲೆ : ದೂರು ದಾಖಲು

Date:

  • ಊಟಕ್ಕೆಂದು ಖಾಜಿ ಬಾರ್ ಆಂಡ್ ಕಿಚನ್ ಹೋಟೆಲ್‌ಗೆ ತೆರಳಿದ್ದ ರಿಕ್ಕಿ ರೈ
  • ರೈ ಕಾರು ಚಾಲಕ ಸೋಮಶೇಖರ್ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದೂರು ದಾಖಲು

ರಾಜಧಾನಿ ಬೆಂಗಳೂರಿನಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಉದ್ಯಮಿ ಶ್ರೀನಿವಾಸ್ ನಾಯ್ಡು ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ರಿಕ್ಕಿ ರೈ ಕಾರು ಚಾಲಕ ಸೋಮಶೇಖರ್ ದೂರು ದಾಖಲಿಸಿದ್ದಾರೆ.

ಮೇ 26 ರಂದು ಲ್ಯಾವೆಲ್ಲಿ ರಸ್ತೆಯ ಖಾಜಿ ಬಾರ್ ಅಂಡ್ ಕಿಚನ್ ಹೋಟೆಲ್‌ಗೆ ರಿಕ್ಕಿ ರೈ ಊಟಕ್ಕೆಂದು ತೆರಳಿದ್ದರು. ಈ ಸಮಯದಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡು ಮೂರು ನಾಲ್ಕು ಜನರೊಂದಿಗೆ ಬಂದು ಏಕಾಏಕಿ ಹಲ್ಲೆ ಮಾಡಲು ಮುಂದಾಗಿದ್ದಾರೆ. ಹಲ್ಲೆ ವೇಳೆ ರಿಕ್ಕಿ ಅವರ ಹಣೆಗೆ ಪೆಟ್ಟು ಬಿದ್ದಿದ್ದು, ತಕ್ಷಣವೇ ಪೊಲೀಸರಿಗೆ ಈ ಘಟನೆಯ ಬಗ್ಗೆ ಮಾಹಿತಿ ನೀಡಲಾಯಿತು. ಬಳಿಕ ಶ್ರೀನಿವಾಸ್ ನಾಯ್ಡು ಹಾಗೂ ಅವರ ಸಂಗಡಿಗರು ಪರಾರಿಯಾಗಿದ್ದಾರೆ ಎಂದು ಕಾರು ಚಾಲಕ ಸೋಮಶೇಖರ್ ದೂರು ನೀಡಿದ್ದಾರೆ.

ಸೋಮಶೇಖರ್ ನೀಡಿದ ದೂರಿನ ಅನ್ವಯ ಕಬ್ಬನ್‌ ಪಾರ್ಕ್‌ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಉದ್ಯಮಿ ನಾಯ್ಡು ಕಾರಿಗೆ ಬೆಂಕಿ ಪ್ರಕರಣ

ಉದ್ಯಮಿ ಶ್ರೀನಿವಾಸ್ ನಾಯ್ಡು ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಸದಾಶಿವನಗರ ಪೊಲೀಸರು 188 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಮುತ್ತಪ್ಪ ರೈ ಮಗ ರಿಕ್ಕಿ ರೈ, ನಾರಾಯಣಸ್ವಾಮಿ, ಅಭಿನಂದನ್, ಮುನಿಯಪ್ಪ, ಗಣೇಶ್, ಶಶಾಂಕ್, ನಿರ್ಮಲ್, ರೋಹಿತ್, ರಾಕೇಶ್ ಸೇರಿದಂತೆ ಒಟ್ಟು 9 ಜನರ ಹೆಸರನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಯುಪಿಎಸ್‌ಸಿ ಪರೀಕ್ಷೆ | ಭಾನುವಾರ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ

ಏನಿದು ಹಿನ್ನೆಲೆ?

ಒಂದಾನೊಂದು ಕಾಲದಲ್ಲಿ ಬೆಂಗಳೂರಿನ ಕುಖ್ಯಾತ ರೌಡಿ ಮುತ್ತಪ್ಪ ರೈ ಮಗ ರಿಕ್ಕಿ ರೈ ಹಾಗೂ ಶ್ರೀನಿವಾಸ್ ನಾಯ್ಡು ಆತ್ಮೀಯ ಸ್ನೇಹಿತರಾಗಿದ್ದರು. ಮುತ್ತಪ್ಪ ರೈ ನಿಧನದ ಬಳಿಕ ರೈ ಗ್ರೂಪ್‌ನಿಂದ ಶ್ರೀನಿವಾಸ್ ನಾಯ್ಡು ಹೊರಬಂದಿದ್ದರು.

ಇದರಿಂದ ಕೋಪಗೊಂಡಿದ್ದ ರಿಕ್ಕಿ ರೈ ನಾಯ್ಡುನನ್ನು ದ್ವೇಷ ಮಾಡಲು ಪ್ರಾರಂಭಿಸಿದ್ದರು. ನಾಯ್ಡು ಬಳಸುತ್ತಿದ್ದ ಬ್ಲಾಕ್ ಕಲರ್ ರೇಂಜ್ ರೋವರ್ ಕಾರನ್ನು ನೋಡಿ ಅವನ ಕೋಪ ಇನ್ನಷ್ಟು ಹೆಚ್ಚಿತ್ತು. ಈ ಬಗ್ಗೆ ರೈ ನಾಯ್ಡುಗೆ ತಾಕೀತು ಮಾಡಿದ್ದರು.

2021ರ ಅಕ್ಟೋಬರ್‌ನಲ್ಲಿ ಸದಾಶಿವನಗರದ ಸಪ್ತಗಿರಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ಶ್ರೀನಿವಾಸ್ ನಾಯ್ಡುಗೆ ಸೇರಿದ ಕೋಟ್ಯಂತರ ರೂ ಬೆಲೆ ಬಾಳುವ ಐಷಾರಾಮಿ ಕಾರಿಗೆ ನಾರಾಯಣಸ್ವಾಮಿ ಎಂಬಾತನ ಮೂಲಕ ಬೆಂಕಿ ಹಚ್ಚಿ ಪರಾರಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...