ಆರೋಪಿಗಳನ್ನು ಅಮಾಯಕರು ಎನ್ನುವ ಸ್ಥಿತಿಗೆ ಬಂದಿರುವುದು ಅಪಾಯಕಾರಿ ಬೆಳವಣಿಗೆ: ಸಿ ಟಿ ರವಿ

Date:

ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪ್ರಕರಣದಲ್ಲಿ ಆರೋಪಿಗಳನ್ನು ಅಮಾಯಕರು ಎನ್ನುವ ಸ್ಥಿತಿಗೆ ಬಂದಿರುವುದು ನಿಜಕ್ಕೂ ಅಪಾಯಕಾರಿ ಬೆಳವಣಿಕೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆತಂಕ ವ್ಯಕ್ತಪಡಿಸಿದರು.

ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆ ಸೇರಿದಂತೆ ಇತರೆ ಕೋಮು ಗಲಭೆ ಕೇಸ್‌ಗಳಲ್ಲಿ ಬಂಧಿತರಾಗಿರುವವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರಿಗೆ ಶಾಸಕ ತನ್ವೀರ್ ಸೇಠ್ ಪತ್ರಬರೆದಿರುವ ವಿಷಯಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಸಿ ಟಿ ರವಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

“ಆರೋಪಿಗಳನ್ನು ಅಮಾಯಕರು ಎನ್ನುವ ಮಾನಸಿಕತೆ ದೇಶದ ಸಮಗ್ರತೆಗೆ ಧಕ್ಕೆ ಉಂಟುಮಾಡುವಂತಹದ್ದು. ಇಂತಹ ಮಾನಸಿಕತೆಯನ್ನು ಖಂಡಿಸುತ್ತೇನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟವನ್ನು ನಾವು ಮುಂದುವರಿಸುತ್ತೇವೆ. ಉಗ್ರ ಚಟುವಟಿಕೆಯಲ್ಲಿ ತೊಡಗಿರುವ ಆರೋಪಿಗಳನ್ನು ರಕ್ಷಣೆ ಮಾಡುವುದು ಸರಿಯಲ್ಲ. ಒಳ್ಳೆಯವರು ಯಾರು, ಕೆಟ್ಟವರು ಯಾರು ಎಂಬುದು ತಿಳಿದುಕೊಳ್ಳದಿದ್ದರೆ ರಾಜ್ಯದ ಪರಿಸ್ಥಿತಿ ಏನಾಗಬಹುದು?” ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಲಿತ ಸಚಿವರ ಮೇಲೆ ಕಳಂಕ ಹೊರಿಸಲು ಕಾಂಗ್ರೆಸ್‌ ಒಳಗೆ ಪಿತೂರಿ: ಛಲವಾದಿ ನಾರಾಯಣಸ್ವಾಮಿ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...