ಭಕ್ತವತ್ಸಲ ಸಮಿತಿಯ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿಗೆ: ಎಚ್‌ ಕೆ ಪಾಟೀಲ

Date:

  • ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಬಗ್ಗೆ ಚರ್ಚೆ
  • ಅನಿಮಿಯಾ ರಕ್ತಹೀನತೆ ಮುಕ್ತ ಯೋಜನೆಗೆ 185 ಕೋಟಿ ರೂ. ಒಪ್ಪಿಗೆ 

ಸುಪ್ರಿಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ರಚಿಸಲಾಗಿತ್ತು. ಈ ಸಮಿತಿಯ 5 ಶಿಫಾರಸ್ಸುಗಳ ಪೈಕಿ ಮೂರು ಶಿಫಾರಸ್ಸಿಗೆ ಸಂಪುಟ ಒಪ್ಪಿದೆ ಎಂದು ಕಾನೂನು ಸಚಿವ ಎಚ್‌ ಕೆ ಪಾಟೀಲ ಹೇಳಿದರು.

ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ” ಎಂದು ತಿಳಿಸಿದರು.

“ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಚುನಾವಣೆ ನಿರ್ವಹಣ ಆಡಳಿತ ಸುಧಾರಣಾ ಇಲಾಖಾ ವ್ಯಾಪ್ತಿಗೆ ತರುವ ಶಿಫಾರಸ್ಸನ್ನು ಕ್ಯಾಬಿನೆಟ್ ಒಪ್ಪಿದ್ದು, ಈ ಹಿಂದೆ ಪಂಚಾಯತ್ ರಾಜ್ ಇಲಾಖೆ ಜೊತೆಗೆ ಚುನಾವಣಾ ಆಯೋಗ ಸಮನ್ವಯ ಸಾಧಿಸುತ್ತಿತ್ತು. ಇದೀಗ ಆಡಳಿತ ಸುಧಾರಣಾ ಇಲಾಖೆ ಅಡಿಯಲ್ಲಿ ನಿರ್ವಹಣೆ ಮಾಡಲಾಗುವುದು. ರಾಜ್ಯ ಮುಖ್ಯ ಚುನಾವಣಾ ಆಯೋಗ ಕೂಡ ಇನ್ನುಮುಂದೆ ಆಡಳಿತ ಸುಧಾರಣಾ ಇಲಾಖೆ ಜೊತೆಗೆ ಚರ್ಚೆ ಮಾಡಬೇಕು” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅನಿಮಿಯಾ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ 185 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಐದು ವರ್ಷದ ಒಳಗಿನ ಮಕ್ಕಳು, ಗರ್ಭಿಣಿಯರಲ್ಲದ ಮಹಿಳೆಯರು ಸೇರಿದಂತೆ 15 ವರ್ಷ ಮೇಲ್ಪಟ್ಟ ಮಹಿಳೆಯರು ಇದರ ಸದುಪಯೋಗವನ್ನು ಪಡೆಯಬಹುದು. ಸಮೀಕ್ಷೆ ಆಧರಿಸಿ ಯೋಜನೆಯಡಿ ತರುವ ನಿರ್ಧಾರ ಮಾಡಲಾಗಿದೆ” ಎಂದು ವಿವರಿಸಿದರು.

“ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ ಆಡಳಿತಾತ್ಮಕ ಅನುಮೋದನೆ ಹಬ್ ಮತ್ತು ಸ್ಪೋಕ್ಸ್ ಮಾದರಿಯಲ್ಲಿ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಪ್ರೊಗ್ರಾಂಗೆ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಲ್ಲಿ ಸ್ಥಾಪನೆ ಮಾಡಲು ನಿರ್ಧಾರ ಮಾಡಲಾಗಿದೆ. ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅಡಿಯಲ್ಲಿ ಮೆದುಳಿನ ಆರೋಗ್ಯ, ಆರೈಕೆ, ತಲೆನೋವು ಹಾಗೂ ಒತ್ತಡ ನಿರ್ವಹಣೆ ಸೇರಿ ಹಲವು ಕಾರ್ಯಕ್ರಮಗಳಿಗೆ ಬ್ರೇನ್ ಹೆಲ್ತ್ ಇನಿಶಿಯೇಟಿವ್ ಅನುವು ಮಾಡಲಿದೆ” ಎಂದು ಹೇಳಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ, ಹೀಗಾಗಿ ಜೋಶಿ ವಿರುದ್ಧ ಸ್ಪರ್ಧೆ: ಯತ್ನಾಳ್ ಆರೋಪ

ದಿಂಗಾಲೇಶ್ವರ ಸ್ವಾಮೀಜಿಗೆ ಎಲ್ಲಿಂದಲೋ ಪೇಮೆಂಟ್ ಬಂದಿದೆ. ಹೀಗಾಗಿಯೇ ಅವರು ಧಾರವಾಡ ಲೋಕಸಭಾ...

ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...