ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ಕೋರಿ ಕರವೇಯಿಂದ ‘ಎಕ್ಸ್’ ಅಭಿಯಾನ

Date:

  • ಶನಿವಾರ ಸಂಜೆ 5 ಗಂಟೆಯಿಂದ ಎಕ್ಸ್‌ನಲ್ಲಿ ಅಭಿಯಾನ
  • ರಾಜ್ಯಕ್ಕೆ ಪ್ರತ್ಯೇಕ ಬಾವುಟ ಹೊಂದಲು ಅವಕಾಶ ಇರಲಿ

ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಶನಿವಾರ (ನ.11) ಸಂಜೆ 5 ಗಂಟೆಯಿಂದ ಸಾಮಾಜಿಕ ಜಾಲತಾಣ ಎಕ್ಸ್ ಅಭಿಯಾನ ಹಮ್ಮಿಕೊಂಡಿದೆ.

#ಕನ್ನಡಬಾವುಟ_ನಮ್ಮಗುರುತು #KannadaFlag_MyPride ಎಂಬ ಹ್ಯಾಶ್ ಟ್ಯಾಗ್‌ಗಳ ಅಡಿಯಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ.

“ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕೆಂದು ಕರ್ನಾಟಕ ಸರ್ಕಾರ ಈಗಾಗಲೇ ಭಾರತ ಒಕ್ಕೂಟ ಸರ್ಕಾರಕ್ಕೆ ನೀಡಿರುವ ಪ್ರಸ್ತಾವನೆಯನ್ನು ಅಂಗೀಕರಿಸಬೇಕೆಂದು ಒತ್ತಾಯಿಸಲಿದ್ದೇವೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕನ್ನಡಿಗರಿಗೆ ಕನ್ನಡ ಬಾವುಟ ಮೊದಲ ಗುರುತು. ಭಾರತ ಒಕ್ಕೂಟದ ಭಾಗವಾಗಿ ನಮ್ಮದೇ ಆದ ಬಾವುಟವೊಂದನ್ನು ಹೊಂದುವುದಕ್ಕೆ ಅವಕಾಶ ಇರಬೇಕು‌. ಈಗಾಗಲೇ ಕೋಟ್ಯಂತರ ಕನ್ನಡಿಗರು ಕನ್ನಡ ಬಾವುಟವನ್ನು ಆರಾಧಿಸುತ್ತಾರೆ. ಹೀಗಾಗಿ ಒಕ್ಕೂಟ ಸರ್ಕಾರ ಕೂಡಲೇ ಕನ್ನಡ ಬಾವುಟಕ್ಕೆ ಅಧಿಕೃತ ಮಾನ್ಯತೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ಮಳೆ: ಜನರಿಗೆ ನರಕದಿಂದ ಮುಕ್ತಿ ಸಿಗುವುದೆಂದು?

“ಶನಿವಾರ ಸಂಜೆ ಸಾವಿರಾರು ಕರವೇ ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದು, ಕನ್ನಡ ಬಾವುಟಕ್ಕೆ ಮಾನ್ಯತೆ ಕೊಡಿಸುವ ಈ ಹೋರಾಟಕ್ಕೆ ಎಲ್ಲ ಕನ್ನಡಿಗರೂ ಬೆಂಬಲ ನೀಡಬೇಕು” ಎಂದು ಟಿ ಎ ನಾರಾಯಣಗೌಡ ಕೋರಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...