ಎಲ್ಲ ಜಿಲ್ಲೆಗಳಲ್ಲೂ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುವ ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ

Date:

  • ದುಡಿಯುವ ವರ್ಗಗಳಿಗೆ ಚಿಕಿತ್ಸೆ ಹೊರೆ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು
  • ಮೈಸೂರು ಜಿಲ್ಲೆಯ ಜನರ ಋಣ ತೀರಿಸೋಕೆ ನಾವು ಬದ್ದರಾಗಿದ್ದೇವೆ: ಸಿಎಂ

ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗದೆ ಉಚಿತವಾಗಿ ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪೆರಿಫೆರಲ್ ಕ್ಯಾನ್ಸರ್ ಕೇಂದ್ರದ ಕಟ್ಟಡದ ಶಂಕುಸ್ಥಾಪನೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಯ ಬಾಲಕಿಯರ ವಿದ್ಯಾರ್ಥಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

“ಮೈಸೂರಿಗೆ ಜಿಲ್ಲಾ ಆಸ್ಪತ್ರೆ, ಟ್ರಾಮಾ ಸೆಂಟರ್, ಕಿದ್ವಾಯಿ ಆಸ್ಪತ್ರೆ ಕೊಟ್ಟಿದ್ದು ನಾನೇ. ಈಗಾಗಲೇ 40 ಕೋಟಿ ಕೂಡ ಕೊಟ್ಟಿದ್ದೇವೆ. ಇನ್ನೂ 50 ಕೋಟಿ ಕೊಡ್ತೀವಿ. ನೆಫ್ರೋಲಜಿ ಕೇಂದ್ರ ಬೇಕು ಎನ್ನುವ ಬೇಡಿಕೆಯೂ ಇದೆ. ಅದನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಾ.ಯತೀಂದ್ರ ಅವರ ಕೋರಿಕೆಯಂತೆ ಮೈಸೂರಿನಲ್ಲಿ ಬೋನ್ ಮ್ಯಾರೋ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇವೆ. ಬೆಂಗಳೂರಿನ ನಂತರ ವೇಗವಾಗಿ ಬೆಳೆಯುತ್ತಿರುವ ನಗರ ಮೈಸೂರು. ಹೀಗಾಗಿ ಅಗತ್ಯ ಎಲ್ಲ ರೀತಿಯ ವೈದ್ಯಕೀಯ ಸವಲತ್ತುಗಳನ್ನೂ ಮೈಸೂರಿಗೆ ಒದಗಿಸಬೇಕಾಗಿದ್ದು ಇದಕ್ಕೆ ನಾನು ಬದ್ದವಾಗಿದ್ದೇನೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ಬಡವರಿಗೆ, ದುಡಿಯುವ ವರ್ಗಗಳಿಗೆ ಚಿಕಿತ್ಸೆ ಭಾರ ಆಗಬಾರದು. ಉಚಿತ ಅಥವಾ ಕಡಿಮೆ ಖರ್ಚಿನಲ್ಲಿ ಇವರಿಗೆ ಆರೋಗ್ಯ, ಚಿಕಿತ್ಸೆ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಕಾಳಜಿ. ನಮ್ಮ ಸರ್ಕಾರ ಇರುವಾಗ ಮೈಸೂರು ನಗರಕ್ಕೆ ಅಗತ್ಯ ಇರುವ ಎಲ್ಲ ನೆರವನ್ನೂ ಒದಗಿಸುತ್ತೇವೆ. ಪಾರಂಪರಿಕ ನಗರದ ಹೆಮ್ಮೆಯನ್ನು ನಾವು ಉಳಿಸುತ್ತೇವೆ. ಮೈಸೂರು ಜಿಲ್ಲೆಯ ಜನರ ಋಣ ತೀರಿಸಲು ನಾವು ಬದ್ಧರಾಗಿದ್ದೇವೆ” ಎಂದರು.

ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲೆಯ ಶಾಸಕರುಗಳಾದ ಜಿ.ಟಿ. ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡ, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಈ ದಿನʼ ಸಮೀಕ್ಷೆ | ಬಿಗಡಾಯಿಸಿದ ನಿರುದ್ಯೋಗ ; ಮೋದಿ ಆಡಳಿತಕ್ಕೆ ಬೇಸರಗೊಂಡ ಮತದಾರ

“ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸಲಾಗುವುದು” ಎಂಬ ಘೋಷಣೆಯನ್ನು ನರೇಂದ್ರ ಮೋದಿಯವರು...

ನೇಹಾ ಕನ್ನಡ ನಾಡಿನ ಮಗಳು, ಸಾವಿನ ಮನೆಯಲ್ಲಿ ಬಿಜೆಪಿ ರಾಜಕಾರಣ ಬೇಡ: ಸುರ್ಜೇವಾಲ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ್ ಅವರು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ನೇಹಾ...

‘ಈ ದಿನ’ ಸಮೀಕ್ಷೆ | ಬೆಲೆ ಏರಿಕೆಗೆ ಬಿಜೆಪಿಯೇ ಕಾರಣ ಅಂತಾರೆ ಮತದಾರರು!

2014ರಲ್ಲಿ ಚುನಾವಣಾ ಪ್ರಚಾರಕ್ಕೆ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಪ್ರಮುಖ ವಿಚಾರವಾಗಿದ್ದು...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...