ಶಂಕಿತ ಉಗ್ರರಿಗೆ ಪಿಸ್ತೂಲ್ ಸರಬರಾಜು ಮಾಡಿದ್ದವನ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು

Date:

  • ಸಲ್ಮಾನ್‌ ಪಾಸ್‌ಪೋರ್ಟ್‌, ಫೋನ್‌ ವಿವರ ಪಡೆದು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು
  • ಶಂಕಿತ ಉಗ್ರರು ಹಾಗೂ ಕುಟುಂಬಸ್ಥರ ಬ್ಯಾಂಕ್‌ ಅಕೌಂಟ್‌ಗಳಿಗೆ ಹಣ ವರ್ಗಾವಣೆ, ಅನುಮಾನ

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರಿಗೆ ನಾಡ ಪಿಸ್ತೂಲ್ ಸರಬರಾಜು ಮಾಡುತ್ತಿದ್ದವನನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು(ಸಿಸಿಬಿ) ಪತ್ತೆ ಹಚ್ಚಿದ್ದಾರೆ.

ಸಲ್ಮಾನ್ ಎಂಬಾತ ಗನ್‌ ಸರಬರಾಜು ಮಾಡುತ್ತಿದ್ದನು ಎನ್ನುವ ಮಾಹಿತಿ ಸಿಸಿಬಿ ಪೊಲೀಸರಿಗೆ ಸಿಕ್ಕಿದೆ. ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಸಲ್ಮಾನ್ ಎನ್ನುವವನು ಜುನೈದ್ ಸೂಚನೆಯಂತೆ ರಬ್ಬಾನಿಗೆ ಪಿಸ್ತೂಲ್ ಸರಬರಾಜು ಮಾಡಿದ್ದಾನೆ.

ಸಲ್ಮಾನ್ ಈ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದನು. ಇದೀಗ ಈತ ಸಹ ನೇಪಾಳ ಮೂಲಕ ದೇಶ ತೊರೆದು ಪರಾರಿಯಾಗಿದ್ದಾನೆ ಎಂದು ಸಿಸಿಬಿ ಪೊಲೀಸರು ಶಂಕಿಸಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಸಲ್ಮಾನ್‌ ಪಾಸ್‌ಪೋರ್ಟ್‌, ಫೋನ್‌ ವಿವರ ಪಡೆದು ತನಿಖೆ ನಡೆಸುತ್ತಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಮುಖ ಆರೋಪಿ ಜುನೈದ್ ಶಂಕಿತ ಉಗ್ರರು ಹಾಗೂ ಅವರ ಕುಟುಂಬಸ್ಥರ ಬ್ಯಾಂಕ್‌ ಅಕೌಂಟ್‌ಗಳಿಗೆ ಹಣ ವರ್ಗಾವಣೆ ಮಾಡಿರುವ ಅನುಮಾನದಿಂದ ಸಿಸಿಬಿ ಪೊಲೀಸರು ಬ್ಯಾಂಕ್‌ ಅಕೌಂಟ್‌ಗಳನ್ನು ಪರಿಶೀಲಿಸಿದ್ದಾರೆ.

ಶಂಕಿತ ಬಂಧಿತ ಉಗ್ರರಾದ ಸುಹೈಲ್, ತಬ್ರೇಜ್, ರಬ್ಬಾನಿ, ಮುದಾಸಿರ್, ಉಮರ್ ಸೇರಿದಂತೆ ಕುಟುಂಬಸ್ಥರ ಸುಮಾರು 40ಕ್ಕೂ ಹೆಚ್ಚು ಬ್ಯಾಂಕ್ ಅಕೌಂಟ್​ಗಳನ್ನು ಸಿಸಿಬಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಾಲಾ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಡಿ: ಬಿಬಿಎಂಪಿಗೆ ಮನವಿ ಮಾಡಿದ ಶಿಕ್ಷಣ ಇಲಾಖೆ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯಾಗಿರುವ ಟಿ ನಜೀರ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಪರಪ್ಪನ ಅಗ್ರಹಾರದ ಜೈಲಿನಲ್ಲಿಟ್ಟಿದ್ದಾರೆ.

ಈತನಿಗೆ ಜುನೈದ್ ಪರಿಚಯ ಹೇಗಾಯಿತು? ಆತ ಹೇಗೆ ಮೈಂಡ್ ವಾಶ ಮಾಡಿದ್ದನು? ಭಯೋತ್ಪಾದಕ ಚಟುವಟಿಕೆಗಳಿಗೆ ತೊಡಗಲು ಕಾರಣ ಏನು ಎಂಬೆಲ್ಲ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...