ಡಿ. 4ರಿಂದ 15ರ ವರೆಗಿನ ಚಳಿಗಾಲ ಅಧಿವೇಶನ ಅರ್ಥಪೂರ್ಣವಾಗಿ ನಡೆಸಲು ಸಭಾಪತಿ ಸಲಹೆ

Date:

  • ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಪತ್ರ ಮೂಲಕ ಸಲಹೆ
  • ‘ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಿ’

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ. 4ರಿಂದ 15ರ ವರೆಗೆ 10 ದಿನಗಳ ಕಾಲ ನಡೆಯುವ ಚಳಿಗಾಲ ಅಧಿವೇಶನವನ್ನು ವ್ಯವಸ್ಥಿತ ಮತ್ತು ಅರ್ಥಪೂರ್ಣವಾಗಿ ನಡೆಸಲು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಿಗೆ ಸಲಹೆ ನೀಡಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿರುವ ಅವರು, “ಅಧಿವೇಶನದ ಅತ್ಯಮೂಲ್ಯ ಸಮಯ ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ. ಈ ಬಗ್ಗೆ ಗಮನ ಹರಿಸಬೇಕು” ಎಂದು ಕೋರಿದ್ದಾರೆ.

“ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯ. ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸುವ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಬೇಕು” ಎಂದು ವಿನಂತಿಸಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

“ಸುವರ್ಣ ವಿಧಾನಸೌಧದ ಹೊರಗಡೆ ಪ್ರತಿಭಟನೆಗಳ ಸಂಖ್ಯೆ ಇಳಿಮುಖವಾದರೆ ಹಾಗೂ ಸದನದ ಒಳಗಡೆ ಜನಸಾಮಾನ್ಯರ ಹಾಗೂ ಜ್ವಲಂತ ಸಮಸ್ಯೆಗಳ ಕುರಿತು ಅರ್ಥಪೂರ್ಣ ಹಾಗೂ ಗಂಭೀರ ಚರ್ಚೆ ನಡೆದು ಪರಿಹಾರ ಕಂಡುಕೊಂಡರೆ ಉತ್ತರ ಕರ್ನಾಟಕ ಭಾಗದಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸಿದ್ದು, ಸಾರ್ಥಕವಾಗಿ ಸರ್ಕಾರಕ್ಕೆ ಗೌರವ ಹಾಗೂ ಒಳ್ಳೆಯ ಹೆಸರು ಬರುತ್ತದೆ” ಎಂದು ಪತ್ರದಲ್ಲಿ ಸಲಹೆ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಸಿಲ ಧಗೆಗೆ ಬೆಂದ ಜನರಿಗೆ ತಂಪೆರೆದ ಮಳೆ: ಶನಿವಾರ ಬೆಳಿಗ್ಗೆ ರಾಜ್ಯದ ಹಲವೆಡೆ ಮಳೆ

ತಾಪಮಾನ ಹೆಚ್ಚಳದಿಂದ ಬಸವಳಿದ್ದಿದ್ದ ರಾಜ್ಯದ ಜನತೆಗೆ ತಡವಾಗಿ ಆರಂಭವಾದ ಪೂರ್ವ ಮುಂಗಾರು...

ಮಹಿಳೆಯರಿಗೆ 2,000 ಕೊಡ್ತಿದ್ದಾರೆ; ಗಂಡಸ್ರು ದುಡಿಮೆಯ 90% ಕುಡಿಯುತ್ತಿದ್ದಾರೆ: ಎಚ್‌ಡಿಕೆ

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ...

ಮೊದಲ ಹಂತದ ಚುನಾವಣೆ | 2019ಕ್ಕಿಂತ ಕುಸಿದ ಮತದಾನ; ಬಿಜೆಪಿಗೆ ಸೋಲಿನ ಆತಂಕ?

ಮನುವಾದಿ, ಫ್ಯಾಸಿಸ್ಟ್‌ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ...

ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಲಿ; ಆದ್ರೆ ಇಬ್ಬರೂ ಪ್ರೀತಿ ಮಾಡ್ತಿದ್ದರು ಎಂಬುದು ಸತ್ಯ: ಕಣ್ಣೀರಿಟ್ಟ ಫಯಾಜ್‌ ತಾಯಿ ಮುಮ್ತಾಜ್

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ...