ಅಜ್ಞಾನಿ ಚಕ್ರವರ್ತಿ ಸೂಲಿಬೆಲೆ, ಅಡ್ನಾಡಿ ಅನಂತಕುಮಾರ್‌ ಹೆಗಡೆ ಏಳು ತಿಂಗಳಿಗೆ ಹುಟ್ಟಿದಂಗೆ ಆಡುತ್ತಾರೆ: ರಮೇಶ್ ಬಾಬು ವಾಗ್ದಾಳಿ

Date:

ಇತ್ತೀಚಿನ ದಿನಗಳಲ್ಲಿ ಕೆಲವು ಬಿಜೆಪಿ ನಾಯಕರು ಮನುಷ್ಯತ್ವ ಮರೆತು ಮಾತನಾಡುತ್ತಿದ್ದಾರೆ. ಈ ರೀತಿ ವರ್ತಿಸುವವರನ್ನು ನಮ್ಮ ಆಡು ಭಾಷೆಯಲ್ಲಿ ಅಡ್ನಾಡಿಗಳು ಎಂದು ಕರೆಯುತ್ತೇವೆ. ಇಲ್ಲಾ ಏಳು ತಿಂಗಳಿಗೆ ಹುಟ್ಟಿದವರು ಎಂದು ಕರೆಯುತ್ತೇವೆ ಎಂದು ಮಾಜಿ ಎಂಎಲ್‌ಸಿ ರಮೇಶ್ ಬಾಬು ವಾಗ್ದಾಳಿ ನಡೆಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಒಬ್ಬ ರಾಷ್ಟ್ರ ನಾಯಕರನ್ನು ವೈಯಕ್ತಿಕವಾಗಿ ತೇಜೋವಧೆ ಮಾಡಿ, ಏಕವಚನದಲ್ಲಿ ಮಾತನಾಡುವ ಕೆಳ ಮಟ್ಟದ ನಡತೆಯನ್ನು ಬಿಜೆಪಿ ನಾಯಕರು ತೋರಿದ್ದಾರೆ. ವಾರದ ಹಿಂದೆ ಅನಂತಕುಮಾರ್‌ ಹೆಗಡೆಯವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದರು. ಅದರ ಮುಂದುವರೆದ ಭಾಗವಾಗಿ ಸೂಲಿಬೆಲೆಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಬಗ್ಗೆ ಮಾತನಾಡಿದ್ದಾರೆ” ಎಂದರು.

“ಅನಂತಕುಮಾರ್‌ ಹೆಗಡೆ, ಸೂಲಿಬೆಲೆ ಹಾಗೂ ಇನ್ನೂ ಅನೇಕ ಬಿಜೆಪಿ ನಾಯಕರು ಸಿದ್ದರಾಮಯ್ಯನವರನ್ನು, ಮಲ್ಲಿಕಾರ್ಜುನ ಖರ್ಗೆಯವರನ್ನು ಡಿ.ಕೆ. ಶಿವಕುಮಾರ್‌ರವರನ್ನು ಟೀಕೆ ಮಾಡಿದರೆ ದೊಡ್ಡ ನಾಯಕರಾಗುತ್ತೇವೆ ಎಂದುಕೊಂಡಿದ್ದಾರೆ. ಆ ಕಾರಣಕ್ಕೆ ಕೆಳ ಮಟ್ಟದ ಟೀಕೆಗಳನ್ನು ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯದ ಮತ್ತು ರಾಷ್ಟ್ರದ ರಾಜಕೀಯದಲ್ಲಿ ಐದು ದಶಕಗಳ ಸುದೀರ್ಘ ರಾಜಕೀಯ ಅನುಭವವಿರುವ ಮಲ್ಲಿಕಾರ್ಜುನ ಖರ್ಗೆಯವರು ಯಾರನ್ನು ಕೀಳು ಮಟ್ಟದಲ್ಲಿ ಟೀಕೆ ಮಾಡಿದವರಲ್ಲ. ಇಂದಿಗೂ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಶಿಸ್ತು ಪರಿಪಾಲನೆ ಮಾಡಿಕೊಂಡು ಬಂದಿದ್ದಾರೆ. ಇಡೀ ದೇಶದಲ್ಲಿ ಬೇರೆ ಸಂಸದೀಯ ಪಟುಗಳಿಗೆ ಖರ್ಗೆಯವರು ಉತ್ತಮ ಮಾರ್ಗದರ್ಶಕರಾಗಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನ ಈ ಕಚ್ಚಾಟ, ‘ಆತ್ಮಹತ್ಯೆ’ಯ ಹುಚ್ಚಾಟ

“ಖರ್ಗೆಯವರ ಬಗ್ಗೆ ಅವರ ಕಾರ್ಯಗಳ ಬಗ್ಗೆ ಟೀಕೆ ಮಾಡಬೇಕಾದರೆ ಸೈದ್ಧಾಂತಿಕವಾಗಿ ಆರೋಗ್ಯಕರವಾಗಿ ಟೀಕೆ ಮಾಡಿದರೆ ನಾವು ಸ್ವೀಕಾರ ಮಾಡುತ್ತೇವೆ. ಹಿಂದೆ ಎಸ್‌ಎಂ ಕೃಷ್ಣರವರು ಕಾಂಗ್ರೆಸ್‌ನಲ್ಲಿದ್ದಾಗ ಸದಾನಂದ ಗೌಡರ ನಗುವಿನ ಬಗ್ಗೆ ಟೀಕೆಯ ಮಾತನಾಡಿ ಮತ್ತೆ ಅವರಲ್ಲಿ ಕ್ಷಮೆಯಾಚಿಸಿದ್ದರು. ದೇವೇಗೌಡರು ಯಡಿಯೂರಪ್ಪನವರ ಬಗ್ಗೆ ಕೀಳು ಭಾಷೆಯಲ್ಲಿ ಮಾತನಾಡಿ ಅವರೂ ಕೂಡ ವಿಷಾದ ವ್ಯಕ್ತಪಡಿಸಿದ್ದರು” ಎಂದು ನೆನಪು ಮಾಡಿಕೊಂಡರು.

“ಅಜ್ಞಾನಿ ಚಕ್ರವರ್ತಿ ಸೂಲಿಬೆಲೆಯಾಗಲಿ, ಅಡ್ನಾಡಿಯಾದಂತಹ ಅನಂತಕುಮಾರ್‌ ಹೆಗಡೆಯಾಗಲಿ ದೊಡ್ಡ ನಾಯಕರಿಗೆ ಕೆಳಮಟ್ಟದ ಭಾಷೆಯಲ್ಲಿ ಮಾತನಾಡಿ ನಾಯಕರಾಗುವ ಆಸೆ ಬಿಡಬೇಕು. ಸೂಲಿಬೆಲೆಯಾಗಲಿ, ಅನಂತ್‌ಕುಮಾರ್‌ ಹೆಗ್ಗಡೆಯಾಗಲಿ ನಾಥೂರಾಮ್‌ ಗೋಡ್ಸೆ ಮನಸ್ಥಿತಿಯಿಂದ ಹೊರಬಂದಿಲ್ಲ. ಇವೇ ಮನಸ್ಥಿತಿಗಳು ಮಲ್ಲಿಕಾರ್ಜುನ ಖರ್ಗೆಯವರ ಮನೆ ಸುತ್ತಾ ಓಡಾಡಿಕೊಂಡು ಅವರಿಗೆ ತೊಂದರೆ ಕೊಡುವ ಕೆಲಸ ಮಾಡಿದ್ದವು” ಎಂದು ಆರೋಪಿಸಿದರು.

“ನೀವು ಕೆನರಾ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ಗೆ ಆಕಾಂಕ್ಷಿಯಾಗಿದ್ದರೆ, ಹೋಗಿ ಅಮಿತ್‌ ಶಾರವರಿಗೋ, ನಡ್ಡಾರವರಿಗೋ, ಮೋದಿಯವರಿಗೊ ಅಡ್ಡಬಿದ್ದರೆ ನಿಮಗೆ ಟಿಕೆಟ್‌ ಸಿಗಬಹುದು. ಸುಮ್ಮನೆ ಖರ್ಗೆಯವರನ್ನು ಟೀಕೆ ಮಾಡುವುದು ಬಿಡಿ. ನೀವು ಮೊದಲು ಈ ದೇಶದ ಪಾಠ ಕಲಿತುಕೊಳ್ಳಿ. ನಾಗಪುರದ ನಿಮ್ಮ ಸಂಘ ಪರಿವಾರದಲ್ಲಿ 52 ವರ್ಷಗಳ ಕಾಲ ಭಾರತದ ತ್ರಿವರ್ಣ ಧ್ಜಜವನ್ನು ಹಾರಿಸಿರಲಿಲ್ಲ. ನಿಮಗೆ ಸೈದ್ಧಾಂತಿಕವಾಗಿ ಖರ್ಗೆಯವರನ್ನು ಎದುರಿಸುವ ಶಕ್ತಿ ಇಲ್ಲದಿದ್ದರೆ ನಿಮ್ಮ ಸೋಲನ್ನು ಒಪ್ಪಿಕೊಳ್ಳಿ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೋ ಪ್ರಕರಣ | ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ : ಮುರುಘಾಶ್ರೀ ಮತ್ತೆ ಜೈಲಿಗೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....