ಚಂಡೀಗಢ | ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಕುತಂತ್ರ ಎಂದ ಎಎಪಿ-ಕಾಂಗ್ರೆಸ್‌

Date:

ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಹುದ್ದೆಗೆ ಗುರುವಾರ ನಡೆಯಬೇಕಿದ್ದ ಬಹುನಿರೀಕ್ಷಿತ ಚುನಾವಣೆಯನ್ನು ನಾಮನಿರ್ದೇಶಿತ ಅಧ್ಯಕ್ಷರ ‘ಅನಾರೋಗ್ಯ’ ಕಾರಣ ನೀಡಿ ಮುಂದೂಡಲಾಗಿದೆ. ಚುನಾವಣೆ ಮುಂದೂಡಿಕೆಯನ್ನು ಬಿಜೆಪಿಯ ಕುತಂತ್ರವೆಂದು ಕಾಂಗ್ರೆಸ್‌ ಮತ್ತು ಎಎಪಿ ಆರೋಪಿಸಿವೆ.

ಪಾಲಿಕೆಯಲ್ಲಿ 13 ಸ್ಥಾನಗಳನ್ನು ಹೊಂದಿರುವ ಎಎಪಿ ಮತ್ತು 7 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನಕ್ಕೆ ಹೋರಾಟ ನಡೆಸುತ್ತಿವೆ. ಈ ನಡುವೆ, ಚುನಾವಣೆ ಮುಂದೂಡಲಾಗಿದ್ದು, ಇದರ ವಿರುದ್ಧ ಪಾಲಿಕೆ ಕಟ್ಟಡದ ಬಳಿ ಎಎಪಿ-ಕಾಂಗ್ರೆಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕೆ ಬಂದ ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಪವನ್ ಕುಮಾರ್ ಬನ್ಸಾಲ್, ”ಬಿಜೆಪಿಗೆ ತಾವು ಸೋಲುತ್ತೇವೆ ಎಂದು ತಿಳಿದಿತ್ತು. ಅದಕ್ಕಾಗಿಯೇ ಅವರು ಈ ತಂತ್ರ ಹೆಣೆದಿದ್ದಾರೆ. ಅವರು ನ್ಯಾಯಯುತವಾಗಿದ್ದರೆ, ಅಧ್ಯಕ್ಷರು ಅನಾರೋಗ್ಯಕ್ಕೆ ಒಳಗಾಗಿದ್ದರೆ, ಅವರ ಸ್ಥಾನಕ್ಕೆ ಬೇರೊಬ್ಬರನ್ನು ತಕ್ಷಣವೇ ನೇಮಿಸಿ ಚುನಾವಣೆ ನಡೆಸುತ್ತಿದ್ದರು” ಎಂದು ಕಿರಿಕಾರಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದು ಬಿಜೆಪಿಯ ಗಿಮಿಕ್. ನಾವು ಹೈಕೋರ್ಟ್‌ಗೆ ಹೋಗುತ್ತೇವೆ. ನ್ಯಾಯಾಲಯದಿಂದ ನ್ಯಾಯ ಪಡೆಯುತ್ತೇವೆ. ಈ ಸಣ್ಣ ಚುನಾವಣೆಯಲ್ಲಿ ಬಿಜೆಪಿಯು ನಮ್ಮ ಮೈತ್ರಿಯ ಬಗ್ಗೆ ಭಯಪಡುತ್ತಿದೆ ಎಂದರೆ, ರಾಷ್ಟ್ರೀಯ ಮಟ್ಟದ ಮೈತ್ರಿಯ ಬಗ್ಗೆ ಯಾವ ಹಂತಕ್ಕೆ ಭಯಪಟ್ಟಿರಬಹುದು” ಎಂದು ಎಎಪಿ ನಾಯಕ, ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಹೇಳಿದ್ದಾರೆ.

35 ಸ್ಥಾನಗಳನ್ನು ಹೊಂದಿರುವ ಚಂಡೀಗಢ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 14 ಸದಸ್ಯರನ್ನು ಹೊಂದಿದೆ. ಎಎಪಿ 13 ಹಾಗೂ ಕಾಂಗ್ರೆಸ್‌ 7 ಸದಸ್ಯರನ್ನು ಹೊಂದಿವೆ. ಅಲ್ಲದೆ, ಎಸ್‌ಎಡಿಯ ಒಬ್ಬರು ಸದಸ್ಯರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಲ್ಲಾ ಗೌಡ್ರೇ, ಇದು ನ್ಯಾಯ ಅಲ್ಲ, ಇನ್ನು ನಿಲ್ಲಿಸ್ಬಿಡಿ ಸಾಕು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಮನವಿ

ಪ್ರಜ್ವಲ್‌ ರೇವಣ್ಣನ ವಿಡಿಯೋಗಳನ್ನ ನೋಡಿ ಹಾಸನದ ಜನ ಬೆಚ್ಚಿ ಬಿದ್ದಿದ್ದಾರೆ. ಮೊದಮೊದಲು...

ಮೋದಿ ದ್ವೇಷ ಭಾಷಣ | ಪ್ರಧಾನಿಗೆ ಸಲಹೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಚಿಕ್ಕಮಗಳೂರು | ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿ ಶೂನ್ಯ; ಜೆ.ಪಿ ಹೆಗ್ಡೆಗೆ ಜನ ಬೆಂಬಲ

ಚಿಕ್ಕಮಗಳೂರು ಹಾಗೂ ಉಡುಪಿ ಲೋಕಾಸಭಾ ಕ್ಷೇತ್ರವಾಗಿದೆ. ಎಂಟು ವಿಧಾನಸಭಾ ಕ್ಷೇತ್ರ ಒಳಗೊಂಡ...