ಮತ ಎಣಿಕೆ ಚನ್ನಪಟ್ಟಣದಲ್ಲಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ

Date:

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಅಭ್ಯರ್ಥಿ ಎಚ್‌ ಡಿ ಕುಮಾರಸ್ವಾಮಿ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೇಶ್ವರ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಕಣಕ್ಕಿಳಿದಿದ್ದಾರೆ.

ಮೇ 10ರಂದು ನಡೆದ ಚುನಾವಣೆಯಲ್ಲಿ ಕರ್ನಾಟಕದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಚನ್ನಪಟ್ಟಣವೂ ಒಂದು. 2018ರ ವಿಧಾನಸಭಾ ಚುನಾವಣೆಯಲ್ಲಿ, ಎಚ್‌.ಡಿ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಿ.ಪಿ ಯೋಗೇಶ್ವರ್ ಕಣಕ್ಕಿಳಿದಿದ್ದರು. ಚನ್ನಪಟ್ಟಣ ಕ್ಷೇತ್ರದಲ್ಲಿ 2,16,448 ಮತದಾರರಿದ್ದು, 85.23% ಮತದಾನವಾಗಿತ್ತು.

ಯೋಗೇಶ್ವರ್ ಅವರು 2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಅಭ್ಯರ್ಥಿಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಶಾಲಿಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಯೋಗೇಶ್ವರ್, ಕುಮಾರಸ್ವಾಮಿ ವಿರುದ್ಧ ಸೋಲುಂಡಿದ್ದರು.

ಕ್ಷೇತ್ರದ ಶಾಸಕರೂ ಆಗಿರುವ ಎಚ್.ಡಿ ಕುಮಾರಸ್ವಾಮಿ ಅವರು ಭವಿಷ್ಯದ ಮುಖ್ಯಮಂತ್ರಿ ಎಂದೇ ಬಿಂಬಿಸಲಾಗುತ್ತಿದೆ. ಅವರಿಗೂ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದ್ದು, ಅವರನ್ನು ಸೋಲಿಸಲು ಪಣತೊಟ್ಟಿದ್ದ ಬಿಜೆಪಿ ನಾಯಕರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ್ದರು. ಜೆಡಿಎಸ್‌ ಕೂಡ ಪಂಚರತ್ನ ಯಾತ್ರೆ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕ್ಷೇತ್ರದ ಮತದಾರರು ಕುಮಾರಸ್ವಾಮಿ ಅವರ ಕೈ ಹಿಡಿಯುತ್ತಾರೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. 2018ರ ಚುನಾವಣೆಯಲ್ಲಿ ಎಚ್‌ ಡಿ ಕುಮಾರಸ್ವಾಮಿ 87,995 ಮತ ಪಡೆದಿದ್ದರು. ಬಿಜೆಪಿಯ ಸಿ.ಪಿ ಯೋಗೇಶ್ವರ್ 66,465 ಮತ್ತು ಕಾಂಗ್ರೆಸ್‌ನ ಎಚ್.ಎಂ ರೇವಣ್ಣ 30,208 ಮತ ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ ಎಚ್.ಎಂ ರೇವಣ್ಣರ ಬದಲಿಗೆ ಗಂಗಾಧರ್ ಕಣದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮುಖ್ಯಮಂತ್ರಿಗಳ 9 ಪುತ್ರರು ಕಣದಲ್ಲಿ: ಯಾರಿಗೆ ಕಹಿ – ಯಾರಿಗೆ ಸಿಹಿ?

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಜಿಲ್ಲಾ ಜನಪರ ಚಳವಳಿಗಳ ಒಕ್ಕೂಟದಿಂದ ʼಸಂವಿಧಾನ ರಕ್ಷಿಸಿ ಭಾರತ ಉಳಿಸಿʼ ದುಂಡು ಮೇಜಿನ ಸಭೆ

ಈ ದೇಶವನ್ನು ಫ್ಯಾಸಿಸ್ಟ್ ಮತ್ತು ಪ್ರಜಾಪ್ರಭುತ್ವ ವಿರೋಧಿಗಳಿಂದ ರಕ್ಷಿಸಬೇಕಿದೆ. ಈಗಾಗಲೇ ಚುನಾವಣೆ...

ಶಿವಮೊಗ್ಗ | ಬಿಜೆಪಿಗರು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ: ಮಧುಬಂಗಾರಪ್ಪ

ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ...

ಬೆಂಗಳೂರು | ಕೈಬಿಟ್ಟ 1,412 ವಾಹನಗಳ ಪೈಕಿ 918 ವಾಹನಗಳ ವಿಲೇವಾರಿ

ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ಪೊಲೀಸ್ ಠಾಣೆಗಳಲ್ಲಿ ರಚಿಸಲಾದ ವಿಶೇಷ ತಂಡಗಳು...