ಮೂತ್ರಪಿಂಡ ಸೋಂಕಿನಿಂದ ಮೃತಪಟ್ಟ ನಮೀಬಿಯಾ ಚೀತಾ

Date:

  • ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಕಳೆದ ವರ್ಷ ಸೆ.17 ರಂದು ಬಿಡುಗಡೆ ಮಾಡಿದ್ದ ಪ್ರಧಾನಿ
  • ಚೀತಾಗಳ ಸಂರಕ್ಷಣೆ ಕಾರಣಕ್ಕಾಗಿ ಉದ್ಯಾನವನ ಸುತ್ತಮುತ್ತಲ 24 ಗ್ರಾಮಗಳ ಜನರ ಸ್ಥಳಾಂತರ

ನಮೀಬಿಯಾದಿಂದ ಕಳೆದ ವರ್ಷ ಭಾರತಕ್ಕೆ ಸ್ಥಳಾಂತರಗೊಂಡಿದ್ದ ಎಂಟು ಚಿರತೆಗಳ ಪೈಕಿ ಸಾಶಾ ಹೆಸರಿನ ಮೂರು ವರ್ಷದ ಹೆಣ್ಣು ಚೀತಾ ಮೂತ್ರಪಿಂಡ ಸೊಂಕಿನಿಂದ ಸೋಮವಾರ(ಮಾರ್ಚ್‌ 27 ) ಮೃತಪಟ್ಟಿದೆ.

ಸಾಶಾ, ಜನವರಿಯಲ್ಲಿಯೇ ನಿಶ್ಯಕ್ತಿಯಿಂದ ಬಳಲುತ್ತಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಅಲ್ಲದೆ ಭಾರತಕ್ಕೆ ಕರೆತರುವ ಮುನ್ನವೇ ಎರಡು ವರ್ಷಗಳಿಂದ ಅನಾರೋಗ್ಯದಿಂದ ಈ ಚೀತಾ ಬಳಲುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು.

ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ಕರೆತರಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಮ್ಮ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಬೇಟೆಯಾಡಲು ಆರಂಭಿಸಿದ್ದವು.

ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. ಅದಾದ 75 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಈ ಕಾರಣಕ್ಕಾಗಿ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. ಚೀತಾಗಳ ಸ್ಥಳಾಂತರಕ್ಕೆ ಸರ್ಕಾರದಿಂದ 75 ಕೋಟಿ ರೂ. ಖರ್ಚು ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು...

ತೆಲಂಗಾಣ | ಬಿಆರ್‌ಎಸ್ ಟಿಕೆಟ್ ಸಿಕ್ಕರೂ ಸ್ಪರ್ಧಿಸದ ಹಾಲಿ ಸಂಸದೆ, ಕಾಂಗ್ರೆಸ್‌ನತ್ತ ಕಡಿಯಂ ಕಾವ್ಯ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಬೆನ್ನಲ್ಲೆ ತೆಲಂಗಾಣದ ವಿಪಕ್ಷ ಭಾರತೀಯ...

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ...

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ವಿಶ್ವಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ಆನ್‌ಟೊನಿಯೋ ಗುಟೆರ್ರಸ್ ಅವರ ವಕ್ತಾರರು ಅರವಿಂದ್‌...