ಐಪಿಎಲ್ 2023 | ಆರ್‌ಸಿಬಿ vs ಸಿಎಸ್‌ಕೆ; ಗೆಲುವಿನಂಚಿನಲ್ಲಿ ಎಡವಿದ ಬೆಂಗಳೂರು!

Date:

ಐಪಿಎಲ್ 16ನೇ ಆವೃತ್ತಿಯ ‘ದಕ್ಷಿಣ ಡರ್ಬಿ’ಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ನಗೆ ಬೀರಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಧೋನಿ ಸಾರಥ್ಯದ ಸಿಎಸ್‌ಕೆ 8 ರನ್‌ಗಳ ಸ್ಮರಣೀಯ ಜಯ ಸಾಧಿಸಿದೆ.

ಒಂದು ಹಂತದಲ್ಲಿ ಆರ್‌ಸಿಬಿ ನಿರಾಯಾಸವಾಗಿ ಪಂದ್ಯ ಗೆಲ್ಲುವ ಭರವಸೆ ಮೂಡಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚೆನೈ ಮುಂದಿಟ್ಟಿದ್ದ 227 ರನ್‌ಗಳ ಗುರಿ ಬೆನ್ನಟ್ಟುವ ವೇಳೆ 12 ಓವರ್‌ಗಳ ಮುಕ್ತಾಯಕ್ಕೆ ಆರ್‌ಸಿಬಿ, ಕೇವಲ 2 ವಿಕೆಟ್ ನಷ್ಟದಲ್ಲಿ 141 ರನ್ ಗಳಿಸಿತ್ತು.

ಉಳಿದ 8 ಓವರ್‌ಗಳಲ್ಲಿ ಗೆಲುವಿಗೆ 86 ರನ್‌ಗಳ ಅಗತ್ಯವಿತ್ತು. ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಅರ್ಧಶತಕ ಸಿಡಿಸಿ ಕ್ರೀಸ್ ನಲ್ಲಿದ್ದರು.

ಹೀಗಾಗಿ ಆತಿಥೇಯ ಆರ್‌ಸಿಬಿ ಸುಲಭ ಗೆಲುವು ಸಾಧಿಸಲಿದೆ ಎಂದು ಅಭಿಮಾನಿಗಳು ನಿರೀಕ್ಷೆಯಲ್ಲಿದ್ದರು.

ಆದರೆ 13ನೇ ಓವರ್‌ನಲ್ಲಿ ಮ್ಯಾಕ್ಸಿ ಮತ್ತು 14ನೇ ಓವರ್‌ನಲ್ಲಿ ಡುಪ್ಲೆಸಿಸ್ ವಿಕೆಟ್ ಪತನವಾಗುತ್ತಲೇ ಪಂದ್ಯ ರೋಚಕ ತಿರುವು ಪಡೆಯಿತು.

ಆ ಬಳಿಕ ಆರ್‌ಸಿಬಿ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಲೇ ಸಾಗಿತು. ಅಂತಿಮ ಓವರ್‌ನಲ್ಲಿ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಆದರೆ 10 ರನ್‌ಗಳಿಸಲಷ್ಟೇ ಆರ್‌ಸಿಬಿ ಶಕ್ತವಾಯಿತು. 8 ರನ್‌ಗಳಿಂದ ಗೆಲುವಿನಿಂದ ದೂರವೇ ಉಳಿಯಿತು.

ಆರ್‌ಸಿಬಿ ಬ್ಯಾಟರ್ ಗಳಿಂದ ದಂಡಿಸಿಕೊಂಡರೂ ಸಹ ನಿರ್ಣಾಯಕ ಹಂತದಲ್ಲಿ ವಿಕೆಟ್ ಪಡೆಯುವ ಮೂಲಕ ಚೆನ್ನೈ ಬೌಲರ್‌ಗಳು ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದರು.

ಈ ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ ಚೆನ್ನೈ ಮೂರನೇ ಸ್ಥಾನಕ್ಕೇರಿದರೆ, ಆರ್‌ಸಿಬಿ 7ನೇ ಸ್ಥಾನಕ್ಕೆ ಜಾರಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೆಲುವಿಗೆ ಕಾರಣವಾದ 20 ರನ್ ಸಿಡಿಸಿದ ಧೋನಿ; ಐಪಿಎಲ್‌ನಲ್ಲಿ ವಿಶೇಷ ದಾಖಲೆ

ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್‌...

ಐಪಿಎಲ್ 2024 | ಸಾಲ್ಟ್ ಅಮೋಘ ಆಟ: 4ನೇ ಗೆಲುವು ದಾಖಲಿಸಿದ ಕೆಕೆಆರ್

ಆರಂಭಿಕ ಆಟಗಾರ ಫಿಲ್ ಸಾಲ್ಟ್ ಅಮೋಘ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್...

ಐಪಿಎಲ್ 2024 | ಕೆಕೆಆರ್‌ಗೆ ಸಾಧಾರಣ ಗುರಿ ನೀಡಿದ ಲಖನೌ

ಸ್ಫೋಟಕ ಆಟಗಾರ ನಿಕಲೋಸ್‌ ಪೂರನ್‌ ಹಾಗೂ ನಾಯಕ ಕೆ ಎಲ್‌ ರಾಹುಲ್‌...