ಛತ್ತೀಸ್‌ಗಢ | ರಾಯ್‌ಪುರದ ವಿದ್ಯುತ್ ವಿತರಣಾ ಕಂಪನಿಯಲ್ಲಿ ಭಾರೀ ಅಗ್ನಿ ಅವಘಡ

Date:

ಛತ್ತೀಸ್‌ಗಢದ ರಾಯ್‌ಪುರದ ಕೋಟಾ ಪ್ರದೇಶದಲ್ಲಿರುವ ವಿದ್ಯುತ್ ವಿತರಣಾ ಕಂಪನಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಮತ್ತು ಪೊಲೀಸರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನಾ ಸ್ಥಳದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ವರದಿಗಳ ಪ್ರಕಾರ, ಭಾರತ್ ಮಾತಾ ಚೌಕ್ ಬಳಿಯ ವಿದ್ಯುತ್ ಇಲಾಖೆಯ ಉಪವಿಭಾಗದ ಕಚೇರಿಯಲ್ಲಿ ಇರಿಸಲಾಗಿದ್ದ ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ. ಈ ಭಾರೀ ಬೆಂಕಿ ಇಡೀ ಪ್ರದೇಶವನ್ನು ಆವರಿಸಿದೆ ಮತ್ತು ಕಪ್ಪು ದಟ್ಟ ಹೊಗೆ ಪ್ರದೇಶದ ಸುತ್ತ ಆವರಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ: 10ಕ್ಕೂ ಹೆಚ್ಚು ಉದ್ಯೋಗಿಗಳು ಸಿಲುಕಿರುವ ಶಂಕೆ

ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.

ಮೂರು ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ಧಾವಿಸಿದವು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಅಭಿಷೇಕ್ ಝಾ ಹೇಳಿದ್ದಾರೆ.


ಘಟನಾ ಸ್ಥಳದಲ್ಲಿದ್ದ ಬ್ಯಾರೆಲ್ಗಳನ್ನು ಪ್ರದೇಶದಿಂದ ಹೊರಗೆ ತೆಗೆದು ಹಾಕಲಾಯಿತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಕೊಲ್ಲಲು ಸಂಚು: ಎಎಪಿ ಗಂಭೀರ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಕೊಲ್ಲಲು ಸಂಚು ನಡೆಯುತ್ತಿದೆ ಎಂದು...

ಮೋದಿ ವೈಫಲ್ಯ-6 | ಎಲ್ಲಿವೆ ಸಂಸದರ ಆದರ್ಶ ಗ್ರಾಮಗಳು; ಮೋದಿ ದತ್ತು ಪಡೆದ ಹಳ್ಳಿಗಳು?

ಸಂಸದ್ ಆದರ್ಶ ಗ್ರಾಮ ಯೋಜನೆಯಡಿ ಏನೆಲ್ಲಾ ಸೌಲಭ್ಯಗಳಿದ್ದವೂ ಆ ಯಾವುದೇ ಸೌಕರ್ಯಗಳೂ...