ಚುನಾವಣೆ 2023 | ನಾಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೋಡ್ ಶೋ

Date:

  • ಕಾಂಗ್ರೆಸ್‌ ಗುಂಡಿಯಲ್ಲಿ ನೀರೇ ಇಲ್ಲವೆಂದ ಬೊಮ್ಮಾಯಿ
  • ಪ್ರಧಾನಿ ಮೋದಿ ಪ್ರವಾಸದ ಕುರಿತು ಹೈಕಮಾಂಡ್ ನಿರ್ಧಾರ

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆಯಿಂದ (ಏ.23) ರೋಡ್ ಶೋ ನಡೆಸಲಿದ್ದಾರೆ.

ಬೆಂಗಳೂರಿನಲ್ಲಿ ಆರ್‌ಟಿ ನಗರದ ನಿವಾಸದಲ್ಲಿ ಮಾತನಾಡಿರುವ ಬಸವರಾಜ ಬೊಮ್ಮಾಯಿ ಅವರು ರಾಜ್ಯಾದ್ಯಂತ ರೋಡ್ ಶೋ ನಡೆಸುವ ಕುರಿತು ಮಾಹಿತಿ ನೀಡಿದರು.

“ಯಲಹಂಕದಿಂದ ರೋಡ್ ಶೋ ಆರಂಭವಾಗಲಿದೆ. ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು, ಅರಸೀಕೆರೆ ನಂತರ ಬೆಳಗಾವಿ, ಗುಲಬರ್ಗಾ ಹಾಗೂ ಮೈಸೂರು ಭಾಗಗಳಲ್ಲೂ ಚುನಾವಣಾ ಯಾತ್ರೆ ಹಾಗೂ ರೋಡ್ ಶೋಗಳನ್ನು ನಡೆಸಲಿದ್ದೇನೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಧಾನಿ ಮೋದಿ ಅವರ ಪ್ರಚಾರದ ಕುರಿತು ಮಾತನಾಡಿ, “ಪಕ್ಷ ಎಲ್ಲವನ್ನೂ ನಿರ್ಧಾರ ಮಾಡಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೋದಿ ಮುಟ್ಟಿದ್ದೆಲ್ಲ ಮಟಾಷ್ : ಕಾಂಗ್ರೆಸ್ ಲೇವಡಿ

ಲಿಂಗಾಯತ ಅಣೆಕಟ್ಟು ಒಡೆದು ಹರಿದು ಕಾಂಗ್ರೆಸ್ ಎಂಬ ಸಮುದ್ರ ಸೇರಲಿದೆ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಉತ್ತರಿಸಿ, “ಕಾಂಗ್ರೆಸ್ ಗುಂಡಿಯಲ್ಲಿ ನೀರೇ ಇಲ್ಲ. ಮೊದಲು ಅದನ್ನು ನೋಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“2013ರಲ್ಲಿ ಲಿಂಗಾಯತ ಸಮುದಾಯ ವಿಭಜನೆ ಆಗಿಲ್ಲ. ಅದು ರಾಜಕೀಯ ಪಕ್ಷವಾಯಿತು ಅಷ್ಟೇ. ಲಿಂಗಾಯತ ಮತದಾರರು ಯಾವಾಗಲೂ ಪ್ರಬುದ್ದರಾಗಿದ್ದಾರೆ” ಎಂದರು.

ಸವದತ್ತಿ ಸೇರಿದಂತೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಸರಿ ಇಲ್ಲ ಎಂಬ ಆರೋಪ ವಿಚಾರವಾಗಿ ಮಾತನಾಡಿ, “ಎಲ್ಲವೂ ಚುನಾವಣಾ ಅಧಿಕಾರಗಳ ನೇತೃತ್ವದಲ್ಲಿ ಪರಿಶೀಲನೆ ನಡೆಯಲಿದೆ. ಯಾವುದೇ ಪಕ್ಷವೂ ಏನೂ ಮಾಡಲು ಆಗುವುದಿಲ್ಲ. ಎಲ್ಲಾ ಪ್ರಕ್ರಿಯೆಗಳ ವಿಡಿಯೋ ಚಿತ್ರೀಕರಣ ಆಗಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ನೇಹಾ ಕೊಲೆ ಪ್ರಕರಣ | ಹುಬ್ಬಳ್ಳಿ, ಬೆಳಗಾವಿಯಲ್ಲಿ ಚುನಾವಣೆ ಅಸ್ತ್ರ ಮಾಡಿಕೊಳ್ಳಲು ಬಿಜೆಪಿ ಯತ್ನ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ...