ಚಿಕ್ಕಬಳ್ಳಾಪುರ | ಶೇ.60ರಷ್ಟು ಕನ್ನಡ ನಾಮಫಲಕ ಕಡ್ಡಾಯ: ಜಿಲ್ಲಾಧಿಕಾರಿ

Date:

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಎಲ್ಲ ಸರ್ಕಾರಿ ಕಚೇರಿಗಳು, ಖಾಸಗಿ ವಹಿವಾಟು ಮಳಿಗೆಗಳು, ಸಂಸ್ಥೆಗಳು, ಅಂಗಡಿ ಮುಗ್ಗಟ್ಟುಗಳ ಫಲಕಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿರಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನಾಮ ಫಲಕಗಳಲ್ಲಿ ಯಾವುದೇ ಕನ್ನಡೇತರ ಭಾಷೆಗಳನ್ನು ಬಳಸಬಹುದು. ಆದರೆ, ಕನ್ನಡದ ಅಕ್ಷರಗಳನ್ನು ಮತ್ತು ಪದಗಳನ್ನು ಶೇ.60ರಷ್ಟು ಪ್ರಮಾಣದಲ್ಲಿ ಬಳಸುವುದು ಕಡ್ಡಾಯವಾಗಿರುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಪತ್ರವ್ಯವಹಾರ ಸೇರಿದಂತೆ ಎಲ್ಲಾ ದಿನ ನಿತ್ಯದ ಕಚೇರಿ ಕೆಲಸಗಳಲ್ಲಿ ಕನ್ನಡವನ್ನು ಬಳಸಬೇಕು. ಜನರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು ಎಂದು ತಿಳಿಸಿದರು.

ಕೆಲವೆಡೆ ನಿಯಮಗಳು ಉಲ್ಲಂಘನೆಯಾಗುತ್ತಿರುವುದು ಕಂಡುಬರುತ್ತಿದೆ. ಆ ಹಿನ್ನೆಲೆಯಲ್ಲಿ ಮುಂದಿನ ಒಂದು ವಾರದೊಳಗೆ ನಾಮಫಲಕಗಳನ್ನು ಸರ್ಕಾರದ ನಿಯಮಾವಳಿ ರೀತ್ಯ ಸರಿಪಡಿಸಬೇಕು. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಸಹ ಈ ನಿಯಮವನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ. ಜತೆಗೆ ಖಾಸಗಿ ಸಂಸ್ಥೆಗಳು, ವ್ಯಾಪಾರಿ ಮಳಿಗೆಗಳ ಮಾಲೀಕರಿಗೂ ತಿಳಿಸಿ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿರುವಂತೆ ನೋಡಿಕೊಳ್ಳಬೇಕು. ನಿಯಮ ಉಲ್ಲಂಘಿಸಿದವರಿಗೆ ಮುಲಾಜಿಲ್ಲದೆ ದಂಡ ವಿಧಿಸುವಂತೆ ಹಾಗೂ ಪರವಾನಗಿ ರದ್ದುಗೊಳಿಸಲು ಸಕ್ಷಮದ ಅಧಿಕಾರಿಗಳು ಕೂಡಲೇ ಕ್ರಮವಹಿಸಬೇಕು ಎಂದು ತಾಕೀತು ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಕುರಿತು ಪ್ರತೀ 3 ತಿಂಗಳಿಗೊಮ್ಮೆ ಪರಿಶೀಲಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿಗಳನ್ನು ರಚಿಸಿ ನಿಗಧಿತವಾಗಿ ಪ್ರಗತಿ ಪರಿಶೀಲನೆ ನಡೆಸಬೇಕು. ಈ ಸಮಿತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿದ್ದು ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮನ್ವಯತೆ ಸಾಧಿಸಿ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಮನಿಷಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...