ಬಾಲ್ಯವಿವಾಹ | ಅಪ್ರಾಪ್ತ ಮಗಳ ಮದುವೆ ನಿಲ್ಲಿಸಲು ಮೊಬೈಲ್ ಟವರ್ ಏರಿದ ತಂದೆ

Date:

ತನ್ನ ಅಪ್ರಾಪ್ತ ಮಗಳಿಗೆ ನಿಶ್ಚಯವಾಗಿದ್ದ ಬಾಲ್ಯವಿವಾಹವನ್ನು ತಡೆಯಲು ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿದ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಚಿನ್ನ ವೆಲ್ಲಮಿಲ್ಲಿ ಗ್ರಾಮದಲ್ಲಿ ನಡೆದಿದೆ.

“ಬಾಲಕಿಯ ತಂದೆ-ತಾಯಿ ಕೆಲವು ವರ್ಷಗಳ ಹಿಂದೆ ವಿಚ್ಛೆದನ ಪಡೆದು, ಬೇರ್ಪಟ್ಟಿದ್ದರು. ಬಾಲಕಿಯ ಬಾಯಿ ಮಾರ್ಚ್‌ 24ರಂದು ಬಾಲಕಿಗೆ ಮದುವೆ ಮಾಡಲು ಮುಂದಾಗಿದ್ದರು. ವಿವಾಹದ ಬಗ್ಗೆ ತಿಳಿದ ತಂದೆ, ಮದುವೆಯನ್ನು ನಿಲ್ಲಿಸಲು ಮೊಬೈಲ್‌ ಟವರ್ ಏರಿದ್ದಾರೆ. ವಿವಾಹ ರದ್ದುಮಾಡದಿದ್ದರೆ, ಕೆಳಗೆ ಇಳಿಯುವುದಿಲ್ಲವೆಂದು ಪಟ್ಟು ಹಿಡಿದಿದ್ದರು” ಎಂದು ಚೇಬ್ರೋಲು ಎಸ್‌ಐ ಮಣಿಕುಮಾರ್ ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು, ಅಂಗನವಾಡಿ ಶಿಕ್ಷಕಿ ಹಾಗೂ ಮಹಿಳಾ ಕಲ್ಯಾಣ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ತಾಯಿ ಮತ್ತು ಅಪ್ರಾಪ್ತ ಬಾಲಕಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ವಿವಾಹ ರದ್ದಾದ ಬಳಿಕ, ಆತ ಟವರ್‌ನಿಂದ ಕೆಳಗೆ ಇಳಿದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏಲೂರು ಜಿಲ್ಲಾ ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ (ಐಸಿಡಿಎಸ್) ಯೋಜನಾಧಿಕಾರಿ ವಿಜಯಲಕ್ಷ್ಮಿ ಮಾತನಾಡಿ, “ಕಳೆದ ಒಂದು ವಾರದಲ್ಲಿ ಪೆದವೇಗಿ ಮಂಡಲದ ವೇಗಿವಾಡ ಮತ್ತು ಕೊಪ್ಪಕ ಗ್ರಾಮಗಳಲ್ಲಿ ಎರಡು ಬಾಲ್ಯ ವಿವಾಹಗಳನ್ನು ನಿಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...

ʼಈ ದಿನʼ ಸಮೀಕ್ಷೆ | “ನಾ ಖಾವೂಂಗ, ಖಾನೇದೂಂಗ” ಎನ್ನುತ್ತಲೇ ಭ್ರಷ್ಟಾಚಾರ ಮಾಡಿದ ಮೋದಿ ಸರ್ಕಾರ

ಮೋದಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಕಡಿಮೆಯಾಗಲಿದೆ ಎಂದು ಭಾವಿಸಿ ಮತ ಹಾಕಿದ್ದ...

ದಿನಪತ್ರಿಕೆಯಲ್ಲಿ ಕ್ಷಮಾಪಣೆಯನ್ನು ನಿಮ್ಮ ಜಾಹೀರಾತಿನಷ್ಟು ಗಾತ್ರದಲ್ಲೇ ಪ್ರಕಟಿಸಲಾಗಿದೆಯೇ: ರಾಮ್‌ದೇವ್‌ಗೆ ಸುಪ್ರೀಂ ತರಾಟೆ

ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರಂತರವಾಗಿ ಪತಂಜಲಿ ಸಂಸ್ಥಾಪಕರಾದ...

ಸಕ್ಕರೆ ಪ್ರಮಾಣ ಹೆಚ್ಚಳ: ಕೇಜ್ರಿವಾಲ್‌ಗೆ ಇನ್ಸುಲಿನ್ ನೀಡಲಾಗಿದೆ ಎಂದ ತಿಹಾರ್ ಜೈಲಿನ ಅಧಿಕಾರಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿ ಸಕ್ಕರೆ ಪ್ರಮಾಣ ಅಧಿಕವಾದ...