ಕೆಇಎ ನೇಮಕಾತಿ ಪರೀಕ್ಷಾ ಅಕ್ರಮ ಸಿಐಡಿ ತನಿಖೆಗೆ

Date:

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆಯಲ್ಲಿ ಕಲಬುರಗಿ, ಯಾದಗಿರಿ ಸೇರಿದಂತೆ ವಿವಿಧೆಡೆ ನಡೆದ ಅಕ್ರಮ ಬ್ಲೂಟೂತ್ ಡಿವೈಸ್ ಬಳಕೆಯ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ.

ಅಕ್ಟೋಬರ್ 28ರಂದು ಕೆಇಎ ವಿವಿಧ ನಿಗಮಗಳಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸಿತ್ತು. ಕೆಲವು ಅಭ್ಯರ್ಥಿಗಳು ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲ ಜತೆಗೆ ಹಣದ ಒಪ್ಪಂದ ಮಾಡಿಕೊಂಡು ಆತನಿಂದ ಬ್ಲೂಟೂತ್ ಡಿವೈಸ್‌ಗಳನ್ನು ಪಡೆದು ಪರೀಕ್ಷೆಯ ದಿನವೇ ಬಂಧಿತರಾದರು.

ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಆರ್‌.ಡಿ. ಪಾಟೀಲನನ್ನು ನವೆಂಬರ್ 10ರಂದು ಮಹಾರಾಷ್ಟ್ರದ ಅಕ್ಕಲಕೋಟದಲ್ಲಿ‌ ಬಂಧಿಸಲಾಯಿತು. ಆತನ ಬಂಧನವಾದ ಮರುದಿನವೇ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಲಬುರಗಿಯ ಅಫಜಲಪುರ ಠಾಣೆಯಲ್ಲಿ ಐಪಿಸಿ 109, 114, 120ಬಿ ಸೇರಿದಂತೆ ಇತರೆ ಸೆಕ್ಷನ್ ಅಡಿ ದಾಖಲಾದ ಕ್ರೈಮ್‌ ನಂ.267/2023 ಪ್ರಕರಣವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಿಐಡಿ ತನಿಖೆಗೆ ಒಪ್ಪಿಸುವಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಆರ್‌.ಹಿತೇಂದ್ರ ಸೂಚಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪೋಕ್ಸೋ ಪ್ರಕರಣ | ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್ : ಮುರುಘಾಶ್ರೀ ಮತ್ತೆ ಜೈಲಿಗೆ

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕೆ ದಾಖಲಾಗಿರುವ ಫೋಕ್ಸೋ ಪ್ರಕರಣ ಸಂಬಂಧ...

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ಬಿಜೆಪಿಯಿಂದ ಪಿಕ್ ಪಾಕೆಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು,...

ಮಹಾಪ್ರಭು ಬಟ್ಟೆಯೊಳಗಡೆಯೇ ಬೆವರುತ್ತಿದ್ದಾರೆ: ಪ್ರಕಾಶ್‌ ರಾಜ್

“ನಿಮ್ಮ ಪಕ್ಷದ ಮ್ಯಾನಿಫೆಸ್ಟೋ ಬಗ್ಗೆ ಮಾತನಾಡಪ್ಪ ಅಂದರೆ ಊಟದ ಮೆನು ತೋರಿಸುತ್ತಾರೆ....