ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ನ್ಯಾಯಾಲಯ ಮಹತ್ವದ ಆದೇಶ

Date:

“ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ” ಎಂದು ಬೆಂಗಳೂರಿನ ನ್ಯಾಯಾಲಯ ಇಂದು ಮಹತ್ವದ ಆದೇಶ ನೀಡಿದೆ.

ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಸಿಎಂ ಇಬ್ರಾಹಿಂ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ದೇವೇಗೌಡ ಕುಟುಂಬದ ವಿರುದ್ಧವೇ ತೊಡೆ ತಟ್ಟಿದ್ದ ಸಿಎಂ ಇಬ್ರಾಹಿಂ ಅವರಿಗೆ ಈ ಮೂಲಕ ಹಿನ್ನಡೆಯಾಗಿದೆ.

ಇತ್ತೀಚೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ನಡೆದಿದ್ದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಬಳಿಕ, ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು. ಆದರೆ ಜೆಡಿಎಸ್‍ನಿಂದ ಉಚ್ಚಾಟನೆ ಮಾಡಲಾಗಿದ್ದರೂ, ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿಹ್ನೆ ಬಳಸುತ್ತಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದೀಗ ಯಾವುದೇ ಪಕ್ಷದ ಚಿಹ್ನೆ ಬಳಸದಂತೆ ಆದೇಶ ನೀಡುವುದರ ಜೊತೆಗೆ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ. ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಇಷ್ಟು ಮಾತ್ರವಲ್ಲದೇ ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ” ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.

ಇದನ್ನು ಓದಿದ್ದೀರಾ? ಹಾವೇರಿ ಗ್ಯಾಂಗ್ ರೇಪ್ ಪ್ರಕರಣ | ಎಸ್‌ಐಟಿ ತನಿಖೆಗೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಇದರ ವಿರುದ್ಧ ಪಕ್ಷದ ಅಧ್ಯಕ್ಷರಾಗಿದ್ದ ಸಿ ಎಂ ಇಬ್ರಾಹಿಂ ಬಂಡಾಯವೆದ್ದಿದ್ದರು. ಬಳಿಕ ಅವರನ್ನು ಉಚ್ಚಾಟನೆ ಮಾಡಲಾಗಿತ್ತು. ಉಚ್ಚಾಟನೆಯ ಹಿನ್ನೆಲೆಯಲ್ಲಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಸಿಎಂ ಇಬ್ರಾಹಿಂ, ಎಚ್​​.ಡಿ.ದೇವೇಗೌಡ, ಎಚ್.ಡಿ ಕುಮಾರಸ್ವಾಮಿ ಅವರನ್ನ ಪ್ರತಿವಾದಿಯಾಗಿಸಿದ್ದರು. ಪದಾಧಿಕಾರಿಗಳ ಉಚ್ಚಾಟನೆ, ಹಂಗಾಮಿ ಅಧ್ಯಕ್ಷ ನೇಮಕ ಕಾನೂನು ಬಾಹಿರವಾಗಿದ್ದು, ಅನೂರ್ಜಿತಗೊಳಿಸಿ ಅಂತ ಮನವಿ ಮಾಡಿದ್ದರು.

ಹೆಚ್ ​​​ಡಿ ದೇವೇಗೌಡರಿಗೆ ಪರ್ಯಾಯವಾಗಿ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ‌.ಕೆ ನಾಣು ಅವರನ್ನು ಸಿ ಎಂ ಇಬ್ರಾಹೀಂ ಆಯ್ಕೆ ಮಾಡಿದ್ದರು. ಅಲ್ಲದೇ, ತೆನೆ ಹೊತ್ತ ಮಹಿಳೆ ಗುರುತು ನಮಗೆ ನೀಡಬೇಕೆಂದು ಚುನಾವಣಾ ಆಯೋಗಕ್ಕೆ ಪತ್ರ ಕೂಡ ಬರೆಯಲಾಗಿದೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ಲೋಕಸಭಾ ಚುನಾವಣೆ | ಬೆಂಗಳೂರಲ್ಲಿ ಏ.24 ರಿಂದ 26 ರವರೆಗೆ ಸೆಕ್ಷನ್ 144 ಜಾರಿ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 24ರ ಸಂಜೆ 6ರಿಂದ ಏಪ್ರಿಲ್ 26ರವರ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...