ಗ್ಯಾರಂಟಿಗೆ ಸಮಿತಿ ನೇಮಕ: ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವೆ: ವಿಜಯೇಂದ್ರ

Date:

“ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ನೇಮಿಸಲು ಆದೇಶ ಹೊರಡಿಸಿದೆ. ಅಧ್ಯಕ್ಷರು, ಉಪಾಧ್ಯಕ್ಷರು ಎಂಬಿತ್ಯಾದಿ ಹುದ್ದೆ ಸೃಷ್ಟಿಸಿ ಅವರಿಗೆ ಕ್ಯಾಬಿನೆಟ್ ದರ್ಜೆಯ, ರಾಜ್ಯ ದರ್ಜೆಯ ಸ್ಥಾನಮಾನ ನೀಡುವ ಭರವಸೆ ನೀಡಿದೆ. ಈ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವುದರ ಜೊತೆಗೆ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ಹೊಸ ಆದೇಶ ಹೊರಡಿಸಿ ಸಮಿತಿ ರಚಿಸಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ರಾಜ್ಯ ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರಿಗೆ ಗೌರವಧನ ನೀಡಲು ಆಗುತ್ತಿಲ್ಲ, ಅಭಿವೃದ್ಧಿ ಕೆಲಸಗಳಿಗಾಗಿ ಶಾಸಕರಿಗೆ ಬಿಡಿಗಾಸು ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ, ಕೋಟ್ಯಂತರ ರೂಪಾಯಿ ದುರುಪಯೋಗ ಪಡಿಸಿಕೊಂಡು ಕಾರ್ಯಕರ್ತರಿಗೆ ಸಂಭಾವನೆ ನೀಡಲು ಕಾಂಗ್ರೆಸ್ ಹೊರಟಿದೆ. ಸರ್ಕಾರದ ಹಣವನ್ನು ಈ ರೀತಿ ಬಳಸುತ್ತಿರುವುದು ಖಂಡನೀಯ” ಎಂದು ಕಿಡಿಕಾರಿದ್ದಾರೆ.

“ಕಾಂಗ್ರೆಸ್ ಕಾರ್ಯಕರ್ತರಿಗೆ 20 ಸಾವಿರ 25 ಸಾವಿರ ರು. ಕೊಟ್ಟು ಹಣ ಪೋಲು ಮಾಡಲು ಮುಂದಾಗಿದ್ದಾರೆ. ಈ ಮೂಲಕ ರಾಜ್ಯದ ತೆರಿಗೆ ಹಣವನ್ನು ದುರುಪಯೋಗ ಮಾಡಲು ರಾಜ್ಯ ಸರ್ಕಾರ ಹೊರಟಿದೆ. ಇದು ಯಾವುದೇ ಕಾರಣಕ್ಕೂ ಸರಿ ಇಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರೈತರಿಗೆ ಬರಗಾಲದ ಪರಿಹಾರ ಹಣ ನೀಡುತ್ತಿಲ್ಲ. ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಇದರ ನಡುವೆ ತೆರಿಗೆ ಹಣ ಕಾರ್ಯಕರ್ತರಿಗೆ ಸಂಬಳ ಕೊಡಲು ಇರುವುದಲ್ಲ. ಇದರ ವಿರುದ್ಧ ಸದ್ಯವೇ ರಾಜ್ಯಪಾಲರಿಗೆ ದೂರು ನೀಡುತ್ತೇವೆ. ಅಲ್ಲದೆ, ನ್ಯಾಯಾಲಯದ ಮೊರೆ ಕೂಡ ಹೋಗುತ್ತೇವೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ಉಡುಪಿ | ನಾನು ಮತ ಹಾಕಿರುವ ಅಭ್ಯರ್ಥಿ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ: ನಟ ರಕ್ಷಿತ್ ಶೆಟ್ಟಿ

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ರಾಜಕಾರಣಿಗಳು,...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು...