ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ: ಸಚಿವ ಎಂ ಬಿ ಪಾಟೀಲ್

Date:

  • ರಾಜಗುರು ಫುಡ್ಸ್‌ನ ಮಾಲೀಕ ಕಿಶೋರ್ ಜೈನ್ ರಿಂದ ₹5 ಲಕ್ಷ, ಸರ್ಕಾರದಿಂದ ₹2 ಲಕ್ಷ ಪರಿಹಾರ
  • ಮೆಕ್ಕೆಜೋಳ ತುಂಬಿರುವ ಟ್ಯಾಂಕ್‌ನ ಸರಣಿ ಪಿಲ್ಲರ್‌ಗಳು ಕುಸಿದು ಬಿಹಾರದ ಏಳು ಕಾರ್ಮಿಕರ ಸಾವು

ವಿಜಯಪುರ ನಗರದ ಅಲಿಯಾಬಾದ್ ಕೈಗಾರಿಕಾ ಪ್ರದೇಶದ ರಾಜ್ ಗುರು ಫುಡ್‌ನ ಮೆಕ್ಕೆಜೋಳ ತುಂಬಿರುವ ಟ್ಯಾಂಕ್ ನ ಸರಣಿ ಪಿಲ್ಲರ್‌ಗಳು ಕುಸಿದು ಬಿದ್ದು ಸಾವಿಗೀಡಾದ ಬಿಹಾರದ ಏಳು ಕಾರ್ಮಿಕರ ಕುಟುಂಬಕ್ಕೆ ತಲಾ ₹7 ಲಕ್ಷ ಪರಿಹಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್ ತಿಳಿಸಿದರು.

”ರಾಜಗುರು ಫುಡ್ಸ್‌ನ ಮಾಲೀಕ ಕಿಶೋರ್ ಜೈನ್ ಅವರು ಸಾವಿಗೀಡಾದ ಕಾರ್ಮಿಕರಿಗೆ ತಲಾ ₹5 ಲಕ್ಷ ಪರಿಹಾರ ಕೊಡಲು ಒಪ್ಪಿದ್ದಾರೆ. ರಾಜ್ಯ ಸರ್ಕಾರ ತಲಾ ₹2 ಲಕ್ಷ ಪರಿಹಾರ ನೀಡಲಿದೆ” ಎಂದು ಸುದ್ದಿಗಾರರಿಗೆ ಹೇಳಿದರು.

“ಗಾಯಗೊಂಡಿರುವ ಒಬ್ಬ ಕಾರ್ಮಿಕನಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದ್ದಾರೆ. ಅವರಿಗೆ ಸಹ ₹50 ಸಾವಿರ ಪರಿಹಾರ ನೀಡಲಾಗುವುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವಿಮಾನದ ಮೂಲಕ ಮೃತ ದೇಹ ರವಾನೆ

”ಕಾರ್ಮಿಕರ ಶವಗಳನ್ನು ಸಮೀಪದ ಬೆಳಗಾವಿ ಅಥವಾ ಕುಲಬುರ್ಗಿ ವಿಮಾನ ನಿಲ್ದಾಣದಿಂದ ಬಿಹಾರ ರಾಜ್ಯದ ರಾಜಧಾನಿ ಪಟ್ನಾಕ್ಕೆ ವಿಮಾನದ ಮೂಲಕ (ಏರ್ ಲಿಫ್ಟ್) ಸಾಗಿಸಿ, ಕಾರ್ಮಿಕರ ಮನೆಗೆ ತಲುಪಿಸಲಾಗುವುದು” ಎಂದು ಇದೇ ವೇಳೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ: ಮೃತ ಕಾರ್ಮಿಕರ ಸಂಖ್ಯೆ ಏಳಕ್ಕೇರಿಕೆ

ವಿಜಯಪುರ ತಾಲೂಕಿನ ಅಲಿಯಾಬಾದ್ ಬಳಿ ಇರುವ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಫುಡ್ಸ್ ಕಂಪನಿಯ ಮೆಕ್ಕೆಜೋಳ ಸಂಗ್ರಹಿಸಿಡುತ್ತಿದ್ದ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಫುಡ್ ಪ್ರೊಸೆಸಿಂಗ್ ಯುನಿಟ್ ಯಂತ್ರ ಸಮೇತ 480 ಟನ್ ಮೆಕ್ಕೆಜೋಳದ ಮೂಟೆಗಳು ಬಿದ್ದಿವೆ. ಪರಿಣಾಮ ಎಂಟು ಮಂದಿ ಕಾರ್ಮಿಕರು ಅದರೊಳಗೆ ಸಿಲುಕಿಕೊಂಡು, ಜೀವನ್ಮರಣ ಹೋರಾಟ ನಡೆಸಿದ್ದರು. ಈ ಪೈಕಿ ಏಳು ಮಂದಿ ಶವವಾಗಿ ಪತ್ತೆಯಾಗಿದ್ದಾರೆ.

ಬಿಹಾರ ಮೂಲದ ಗುಲಾರ್​ ಚಂದ್ ​(50), ಕೃಷ್ಣಕುಮಾರ್ ​(22), ರಾಮ್​​ ಬಾಲಕ್​ (52), ಲುಖೋ ಜಾಧವ್(45), ರಾಜೇಶ್ ಮುಖಿಯಾ (25), ರಾಮ್ರೀಜ್ ಮುಖಿಯಾ(29), ಸಂಬೂ ಮುಖಿಯಾ (26) ಮೃತ ಕಾರ್ಮಿಕರು. ಘಟನೆಯಲ್ಲಿ ಕಾರ್ಮಿಕರಾದ ಸೋನು ಕರಾಮಚಂದ್, ರವೀಶ್ ಕುಮಾರ್, ಅನಿಲ್, ಕಲ್ಮೇಶ್ವರ್ ಮುಕಿಯ, ಕಿಶೋರ್ ಹಜಾರಿಮಲ್ ಜೈನ್, ಪ್ರಕಾಶ್ ಧುಮಗೊಂಡ ಎಂಬುವವರು ಗಾಯಗೊಂಡಿದ್ದಾರೆ.

ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿದ್ದ ಸಚಿವ ಎಂ ಬಿ ಪಾಟೀಲ್ ಸೋಮವಾರ ಸಂಜೆ ನಡೆದ ಈ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ವಿಜಯಪುರ ನಗರಕ್ಕೆ ದೌಡಾಯಿಸಿದರು. ಅಲ್ಲದೇ, ಘಟನಾ ಸ್ಥಳಕ್ಕೆ ತೆರಳಿ ಮಧ್ಯರಾತ್ರಿ ಬಹಳ ಹೊತ್ತಿನವರೆಗೂ ರಕ್ಷಣಾ ಕಾರ್ಯಾಚರಣೆ ಪರಿಶೀಲನೆ ನಡೆಸಿದರು.

ಘಟನೆಯಲ್ಲಿ ಒಟ್ಟು 50 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿಸಿದರು. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಎಸ್ ಡಿಆರ್ ಎಫ್, ಎನ್ ಡಿಆರ್ ಎಫ್, ಅಗ್ನಿಶಾಮಕ, ಪೊಲೀಸ್ ಹಾಗೂ ಜಿಲ್ಲಾಡಳಿತಕ್ಕೆ ಸಚಿವರು ಧನ್ಯವಾದ ಸಲ್ಲಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಬೀದರ್‌ | ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ಹೆಂಡತಿಗೆ ಕೊಲೆ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಆಕೆಯ ಪತಿಗೆ ಬೀದರ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಚಾಮರಾಜನಗರ | ಮತದಾನ ಬಹಿಷ್ಕಾರ; ಮನವೊಲಿಸಲು ಹೋದ ಅಧಿಕಾರಿಗಳ ಮೇಲೆ ಹಲ್ಲೆ

ರಾಜ್ಯ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಕೆಲವೆಡೆ ಮತದಾನ ಬಹಿಷ್ಕಾರ...