ಆಲಮೇಲ | ಸಾಮಾನ್ಯರಿಗೆ ಅರ್ಥವಾಗುವ ಭಾಷೆಯ ಸಾಹಿತ್ಯ ಕನಕದಾಸರದ್ದು: ಹಾವಣ್ಣ

Date:

‘ತಮ್ಮದೇ ಆದಂತ ಸಾಹಿತ್ಯದ ವಚನಗಳ ಮೂಲಕ ಜಾತಿ, ಮತ, ಕುಲಗಳ ಭೇದಭಾವವನ್ನು ಮೀರಿಸುವಂತ ಸಮಾಜದ ಪಿಡುಗುಗಳ ಕುರಿತು ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಕೀರ್ತಿ ಸಂತ ಶ್ರೇಷ್ಠ ಕವಿ ಕನಕದಾಸರಿಗೆ ಸಲ್ಲುತ್ತದೆ’ ಎಂದು ಎಚ್‌ಡಿಎಂಸಿ ಅಧ್ಯಕ್ಷ ಹಾವಣ್ಣ ಕಕ್ಕಳಮೇಲಿ ಹೇಳಿದರು.

ಆಲಮೇಲ ತಾಲೂಕಿನ ಮೋರಟಗಿ ಗ್ರಾಮದಲ್ಲಿ ಹಾಲುಮತ ಸಮಾಜದ ಬಾಂಧವರು ಹಮ್ಮಿಕೊಂಡಿದ್ದ ಸಂತ ಕನಕದಾಸರ 536ನೇ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಸುಮಾರು ಐನೂರು ವರ್ಷಗಳ ಕಾಲ ಹಿಂದೆ ಜಾತಿ ವ್ಯವಸ್ಥೆಯ ವಿರುದ್ಧ ಸಿಡಿದೆದ್ದ ಕನಕದಾಸರು, ಕುಲ ಕುಲವೆಂದು ಹೊಡೆದಾಡಿ ಸಾಯಬೇಡಿರಿ ಹುಚ್ಚಪ್ಪಗಳಿರಾ, ಆತ್ಮ ಯಾವ ಕುಲ, ಜೀವ ಯಾವ ಕುಲ ಬೀಸುವ, ಗಾಳಿ ಯಾವ ಕುಲ, ಹರಿಯುವ ನೀರು ಯಾವ ಕುಲ, ತಿನ್ನುವ ಅನ್ನ ಯಾವ ಕುಲ, ಯಾವಾಗ ನಿಮ್ಮಲ್ಲಿ ಅಡಗಿರುವ ನಾನು ಎಂಬ ಅಹಂ ನಿಮ್ಮನ್ನು ಬಿಟ್ಟು ಹೋಗುತ್ತೋ, ಅವತ್ತೇ ನೀವು ಮೋಕ್ಷಕ್ಕೆ ಅರ್ಹರಾಗುತ್ತೀರಿ ಎಂದು ಸಾರಿ ಹೇಳಿದ್ದರು. ಕನಕದಾಸರು ಅಗಲಿ 536 ವರ್ಷಗಳು ಕಳೆದರೂ ಕೂಡ, ಅವರ ಹೆಸರು ಅವರ ಸಾಹಿತ್ಯ, ವಚನಗಳು ಸೂರ್ಯ ಚಂದ್ರ ಇರುವರೆಗೂ ಅಜರಾಮರ’ ಎಂದು ಬಣ್ಣಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭದಲ್ಲಿ ಕನಕಸೇನಾ ಅಧ್ಯಕ್ಷ ಶಿವು ಕೇರಿಗೊಂಡ, ರಾಜು ಮಳಗಿ, ಸಲೀಂ ಕಣ್ಣಿ, ರಾಮಚಂದ್ರ ಕೇರಿಗೊಂಡ, ಸಂತೋಷ ಸಿನ್ನೂರ, ಗುರು ಅಗಸರ, ಅಮೋಘ ಸಿದ್ದ ಗಾಳಿ, ಬೀಮಣ್ಣ ಗಾಳಿ, ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...