35 ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ ಸಿಎಂ ಸ್ಥಾನ ನೀಡಿಲ್ಲ: ಬೊಮ್ಮಾಯಿ ತಿರುಗೇಟು

Date:

  • ಕಾಂಗ್ರೆಸ್‌ ಟ್ವೀಟ್‌ಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ
  • ‘ಲಿಂಗಾಯತ ಸಮುದಾಯವನ್ನು ಬಿಜೆಪಿ ಗೌರವದಿಂದಲೇ ನೋಡಿದೆ’

ಲಿಂಗಾಯತ ಸಮುದಾಯವನ್ನು ಬಿಜೆಪಿ ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ನಮ್ಮ ಪಕ್ಷದ ವಿಚಾರದಲ್ಲಿ ನೀವು ತಲೆ ಹಾಕುವ ಅವಶ್ಯಕತೆ ಇಲ್ಲ. ಲಿಂಗಾಯತ ಸಮುದಾಯದ ಮೇಲೆ ನಿಮಗೆ ನಿಜವಾದ ಪ್ರೀತಿ ಇದ್ದಿದ್ದರೆ ನೀವು ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಿರಿ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

“ಜೋಶಿ, ಸಂತೋಷ್ ಅವರು ಪ್ರತಾಪ್‌ ಸಿಂಹ ಅವರ ಹೆಗಲ ಮೇಲೆ ಗನ್ನಿಟ್ಟು ಶೂಟ್ ಮಾಡಿದ ಗುಂಡು ಬಸವರಾಜ ಬೊಮ್ಮಾಯಿ ಅವರ ಎದೆಗೆ ತಗುಲಿದೆ! ಸಿಎಂ ಆದರೂ ಬಿಜೆಪಿಯ ಗರ್ಭಗುಡಿಯ ಒಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿಯವರೇ ಜೋಶಿ ಸಂತೋಷರ ಮುಂದಿನ ಟಾರ್ಗೆಟ್! ಬೊಮ್ಮಾಯಿಯವರನ್ನು ಮುಗಿಸಿದರೆ “ಟಾರ್ಗೆಟ್ ಲಿಂಗಾಯತ” ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದಂತಾಗುತ್ತದೆ!” ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಬೊಮ್ಮಾಯಿ ಟ್ವೀಟ್‌ ಮಾಡಿ ಉತ್ತರಿಸಿದ್ದಾರೆ.

“ಭಾರತೀಯ ಜನತಾ ಪಾರ್ಟಿ ಲಿಂಗಾಯತ ಸಮುದಾಯವನ್ನು ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ಬಿಜೆಪಿ ಎಂಬುವ ಒಂದೇ ಗುಡಿ ಇದ್ದು ಎಲ್ಲರಿಗೂ ಪ್ರವೇಶವಿದೆ. ಬಿಜೆಪಿ ಕರ್ನಾಟಕ ರಾಜ್ಯದಲ್ಲಿ ಕಡಿಮೆ ಅವಧಿ ಅಧಿಕಾರ ನಡೆಸಿದರೂ ನನ್ನ ಸಮೇತವಾಗಿ ನಾಲ್ವರು ಮುಖ್ಯಮಂತ್ರಿಗಳಲ್ಲಿ ಮೂವರು ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನು ಮುಖ್ಯಮಂತ್ರಿ ಮಾಡಿರುವುದೇ ಇದಕ್ಕೆ ಸಾಕ್ಷಿ” ಎಂದು ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ಪಕ್ಷ ಕಳೆದ ಮೂವತೈದು ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡದಿರುವುದು ಜಗತ್ತಿಗೆ ಗೊತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಲಿಂಗಾಯತ ಸಮುದಾಯದ ಮೇಲೆ ನಿಜವಾದ ಪ್ರೀತಿ ಇದ್ದರೆ ನೀವು ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಿರಿ. ನಮ್ಮ ಪಕ್ಷದ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ” ಎಂದಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. 35 ವರ್ಷ ಇದೇ ಚಿಂತೆ ಮಾಡಿದ್ದೀರಿ ಇನ್ನಾದರೂ ಆರಾಮವಾಗಿ ಜನರ ಚಿಂತನೆ ಮಾಡಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಬೀದರ್‌ | ಕೇಂದ್ರ ಸಚಿವ ಭಗವಂತ ಖೂಬಾಗೆ ಇದು ಕೊನೆ ಚುನಾವಣೆ: ಸಚಿವ ಈಶ್ವರ ಖಂಡ್ರೆ

ಕೇಂದ್ರ ಸಚಿವ ಭಗವಂತ ಖೂಬಾ ಅವರ ದುರಂಕಾರ, ಅಧಿಕಾರದ ದರ್ಪ ಹಾಗೂ...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...