ಕಾಂಗ್ರೆಸ್ ತನ್ನ ಸಿದ್ದಾಂತಗಳಿಂದ ಹಿಂದೆ ಸರಿಯುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

Date:

ಕಾಂಗ್ರೆಸ್ ತನ್ನ ಸಿದ್ಧಾಂತಗಳಿಂದ ಹಿಂದೆ ಸರಿಯದೆ, ಸಿದ್ಧಾಂತಗಳೊಂದಿಗೆ ಮುನ್ನಡೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್‌ನ 139ನೇ ವರ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

“ಸಂಸ್ಥಾಪನಾ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವುದು ನಮ್ಮ ಕರ್ತವ್ಯವಾಗಿದ್ದು, ಕಾಂಗ್ರೆಸ್ ತನ್ನ ಸಿದ್ಧಾಂತಗಳಿಂದ ಹಿಂದೆ ಸರಿಯದೆ, ಸಿದ್ಧಾಂತಗಳೊಂದಿಗೆ ಮುನ್ನಡೆಯಲಿದೆ ಎಂದು ದೇಶಕ್ಕೆ ಜನಕ್ಕೆ ಸಂದೇಶ ಸಾರುತ್ತದೆ. ಈ ಸಂದರ್ಭದಲ್ಲಿ 2024ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಾಗಪುರದಿಂದ ಸಂದೇಶ ರವಾನಿಸುತ್ತೇವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಾಂಗ್ರೆಸ್ ದೇಶದ ಜನರನ್ನು ಪ್ರತಿನಿಧಿಸುತ್ತದೆ. ಇದು ಹೋರಾಟ, ಸಹಾನುಭೂತಿ, ನ್ಯಾಯ ಹಾಗೂ ಸಮಾನತೆಗೆ ಸಮಾನಾರ್ಥಕವಾಗಿದೆ. ಕಾಂಗ್ರೆಸ್ ಸಂಸ್ಥಾಪನಾ ದಿನದಂದು ನಾವು ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಂರಕ್ಷಿಸಲು ಬದ್ಧವಾಗಿದ್ದೇವೆಂದು ಪುನರುಚ್ಚರಿಸುತ್ತೇವೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪ್ರಮುಖ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಜೀವ್ ಶುಕ್ಲಾ ಹಾಗೂ ಕೆ ಸಿ ವೇಣುಗೋಪಾಲ್ ಅವರೊಂದಿಗೆ ಖರ್ಗೆ ಚರ್ಚೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಕಾಂಗ್ರೆಸ್ ಸದಸ್ಯನಾಗಿರುವುದಕ್ಕೆ ಹೆಮ್ಮೆ

ಸಂಸ್ಥಾಪನಾ ದಿನಾಚರಣೆಯ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಸತ್ಯ ಮತ್ತು ಅಹಿಂಸೆಯ ಅಡಿಪಾಯ, ಪ್ರೀತಿ, ಸಹೋದರತ್ವ, ಗೌರವ ಮತ್ತು ಸಮಾನತೆಯ ಸ್ತಂಭಗಳ ಮೇಲೆ, ದೇಶಭಕ್ತಿಯ ಛಾವಣಿಯೊಂದಿಗೆ ನಿರ್ಮಿಸಲಾಗಿದೆ. ನಾನು ಇಂತಹ ಸಂಘಟನೆಯ ಭಾಗ ಹಾಗೂ ಕಾಂಗ್ರೆಸ್ ಸದಸ್ಯನಾಗಿರುವುದಕ್ಕೆ ಹೆಮ್ಮೆ ಪಡುತ್ತೇನೆ. ಎಲ್ಲ ನಾಯಕರು, ಕಾರ್ಯಕರ್ತರು, ಬೆಂಬಲಿಗರಿಗೆ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯ ಹೃದಯಪೂರ್ವಕ ಶುಭಕಾಮನೆಗಳು” ಎಂದು ತಿಳಿಸಿದ್ದಾರೆ.

1885, ಡಿಸೆಂಬರ್ 28ರಂದು ಮುಂಬೈನ ದಾಸ್ ತೇಜ್ಪಾಲ್ ಸಂಸ್ಕೃತ ಕಾಲೇಜಿನಲ್ಲಿ 72 ಪ್ರತಿನಿಧಿಗಳೊಂದಿಗೆ ಅಖಿಲ ಭಾರತ ಕಾಂಗ್ರೆಸ್ ಅನ್ನು  ಸ್ಥಾಪಿಸಲಾಯಿತು. ಸಂಸ್ಥಾಪಕರಾದ ಎ.ಒ. ಹ್ಯೂಮ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿ ಚಂದ್ರ ಬ್ಯಾನರ್ಜಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸಿದ ಆರೋಪ: ಮಾಜಿ ಐಪಿಎಸ್ ಅಧಿಕಾರಿಗೆ 20 ವರ್ಷ ಜೈಲು

ವಕೀಲರೊಬ್ಬರನ್ನು ಡ್ರಗ್ಸ್‌ ಪ್ರಕರಣದಲ್ಲಿ ಸಿಲುಕಿಸಿದ ಆರೋಪದ ಮೇಲೆ ಗುಜರಾತ್‌ನ ಮಾಜಿ ಐಪಿಎಸ್‌...

ಕಂಗನಾ ರಣಾವತ್ ಬಗ್ಗೆ ವಿವಾದಾತ್ಮಕ ಹೇಳಿಕೆ; ಕಾಂಗ್ರೆಸ್ ಅಭ್ಯರ್ಥಿ ಬದಲಾವಣೆ

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಖ್ಯಾತ ನಟಿ ಕಂಗನಾ ರಣಾವತ್...

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...