ಫೆ.24, 25ಕ್ಕೆ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ” ಸಂಘಟನಾ ಸಮಿತಿ ಸಭೆ ನಡೆಯಿತು.

ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ ಅಂಗವಾಗಿ “ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ”ವನ್ನು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ISEC) ಮತ್ತು ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿ ಸಹಯೋಗದೊಂದಿಗೆ ಆಯೋಜಿಸಲು ತೀರ್ಮಾನಿಸಲಾಗಿದೆ.

“ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26 ರಿಂದ “ಸಂವಿಧಾನ ಜಾಗೃತಿ ಜಾಥಾ” ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ನಿರ್ಧರಿಸಲಾಯಿತು. ಈ ಕಾರ್ಯಕ್ರಮಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಡವರ ಭೂಮಿ ಮತ್ತು ನೈಸ್‌ ರಾಜಕಾರಣ

ಫೆಬ್ರವರಿ 24 ಹಾಗೂ 25 ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ವಿಚಾರ ಸಂಕಿರಣ ಹಾಗೂ KREIS ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ನಡೆಯಲಿದೆ.

ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಸೂಚಿಸಲಾಯಿತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

ಸಿಜೆಐಗೆ ವಕೀಲರ ಪತ್ರ: ಪ್ರಧಾನಿಯದು ಬರೀ ʼಬೂಟಾಟಿಕೆʼ ಎಂದು ಕಾಂಗ್ರೆಸ್ ತಿರುಗೇಟು

ಪಟ್ಟಭದ್ರ ಹಿತಾಸಕ್ತಿ ಗುಂಪಿನ ವಿರುದ್ಧ ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿಗೆ ಬರೆದ...