ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದ ಅಪರಾಧಿ ಸಾವು

Date:

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಬಳಿಕ ಬಿಡುಗಡೆಗೊಂಡಿದ್ದ ಏಳು ಅಪರಾಧಿಗಳಲ್ಲಿ ಒಬ್ಬನಾದ ಸಂತನ್ ಅಲಿಯಾಸ್ ಟಿ ಸುಥೆಂತಿರಾಜ ಬುಧವಾರ ಸಾವನ್ನಪ್ಪಿದ್ದಾರೆ. ಅನರೋಗ್ಯದಿಂದ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಆತ, ಚಿಕಿತ್ಸೆಗೆ ಸ್ಪಂದಿಸದೆ ಮರಣಗೊಂಡಿದ್ದಾರೆ.

ಯಕೃತ್ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಸಂತನ್, ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ, ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಏಳು ಅಪರಾಧಿಗಳಲ್ಲಿ ಒಬ್ಬನಾಗಿದ್ದ ಎ.ಜಿ ಪೆರಾರಿವಾಲನ್ ಅವರನ್ನು 2022ರ ಮೇ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸಿತ್ತು. ಸಂತಾನ್ ಮತ್ತು ಇತರ ಐವರನ್ನು ಅದೇ ವರ್ಷ ನವೆಂಬರ್‌ನಲ್ಲಿ ಬಿಡುಗಡೆ ಮಾಡಲಾಗಿತ್ತು. ಅವರೆಲ್ಲರೂ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರರಣದಲ್ಲಿ 30 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಶ್ರೀಲಂಕಾದ ಪ್ರಜೆಯಾದ ಸಂತನ್, ತನ್ನ ವಯಸ್ಸಾದ ತಾಯಿಯೊಂದಿಗೆ ವಾಸಿಸಲು ಶ್ರೀಲಂಕಾಗೆ ಮರಳಲು ಅವಕಾಶಕ್ಕಾಗಿ ಮನವಿ ಮಾಡಿದ್ದರು. ಅವರು ಮದ್ರಾಸ್ ಹೈಕೋರ್ಟ್‌ನಲ್ಲಿ ಅರ್ಜಿಯನ್ನೂ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದ ತಮಿಳುನಾಡು ಸರ್ಕಾರ, ‘ಸಂತನ್ ಶ್ರೀಲಂಕಾಗೆ ಮರಳಲು ಬೇಕಿರುವ ಅಗತ್ಯ ದಾಖಲೆಗಳನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ’ ಎಂದು ಹೇಳಿತ್ತು. ಕಳೆದ ವಾರ, ಕೇಂದ್ರ ವಿದೇಶಾಂಗ ಸಚಿವಾಲಯದ ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿ (ಎಫ್‌ಆರ್‌ಆರ್‌ಒ) ಸಂತಾನ್‌ಗೆ ತುರ್ತು ಪ್ರಯಾಣದ ದಾಖಲೆಯನ್ನು ನೀಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ; ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ಮೋದಿ ಮತಬೇಟೆ

ಭ್ರಷ್ಟಾಚಾರದ ಬೇಟೆಯಾಡುತ್ತೇನೆ, ಕಪ್ಪುಹಣ ಮರಳಿ ತರುತ್ತೇನೆ ಎಂದು ಪಣ ತೊಟ್ಟಿದ್ದ ಮೋದಿ...

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮೋದಿ, ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್...

‘ಮೋದಿ ಕಿ ಗ್ಯಾರಂಟಿ’ ಕುರುಹು ಇಲ್ಲದೆ ಕಣ್ಮರೆಯಾದಾಗ ಬಿಜೆಪಿ ಸುಳ್ಳಿನ ಬೆನ್ನತ್ತಿದೆ: ಚಿದಂಬರಂ

'ಮೋದಿ ಕಿ ಗ್ಯಾರಂಟಿ' ಈಗ ಕುರುಹು ಇಲ್ಲದೆ ಕಣ್ಮರೆಯಾಗಿದ್ದು, ಇದರಿಂದಾಗಿ ಆತಂಕಕ್ಕೆ...

ಮೋದಿ ಭಾಷಣ | ರಾಮಮಂದಿರದ ಉಲ್ಲೇಖ, ಸಿಖ್ಖರ ಓಲೈಕೆ; ನೀತಿ ಸಂಹಿತೆ ಉಲ್ಲಂಘನೆಯಲ್ಲ ಎಂದ ಚು. ಆಯೋಗ

ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ್‍ಯಾಲಿಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ...