ಮಗುವಿಗೆ ಕೊರೋನಾ ದೃಢ; ರಾಜ್ಯದಲ್ಲಿ 105 ಮಂದಿಗೆ ಕೋವಿಡ್-19

Date:

ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಕೊರೋನಾದಿಂದ ಎದುರಾಗಬಹುದಾದ ಸಂಕಷ್ಟವನ್ನು ನಿರ್ವಹಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿಕೊಳ್ಳುತ್ತಿದೆ. ನಾನಾ ಜಿಲ್ಲೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿತರಿಗಾಗಿ ಬೆಡ್‌ಗಳನ್ನು ಮೀಸಲಿಡಲು ಆರೋಗ್ಯಾಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ ನಡುವೆ, ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಮಗುವಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.

ನಲ್ಲೂರು ಗ್ರಾಮದಲ್ಲಿರುವ ಸ್ಪರ್ಶ ಮಕ್ಕಳಧಾಮದಲ್ಲಿ ಮಗುವಿನ ಕೊರೋನಾ ದೃಢಪಟ್ಟಿದೆ. ಮಗುವಿನಲ್ಲಿ ಜ್ವರ, ಕೆಮ್ಮು ಕಾಣಿಸಿಕೊಂಡಿತ್ತು. ಹೀಗಾಗಿ, ಕೊರೋನಾ ಪರೀಕ್ಷೆ ಮಾಡಲಾಗಿದ್ದು, ಸೋಂಕು ದೃಢಪಟ್ಟಿದೆ. ಮಗುವನ್ನು ಐಸೋಲೇಷನ್‌ನಲ್ಲಿ ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಶಂಕರ್ ತಿಳಿಸಿದ್ದಾರೆ.

“ಮಗುವಿನಲ್ಲಿ ಸೋಂಕು ದೃಢಪಟ್ಟ ಹಿನ್ನೆಲೆ ಮಕ್ಕಳಧಾಮದಲ್ಲಿದ್ದ ಎಲ್ಲ ಮಕ್ಕಳಿಗೂ ಕೊರೋನಾ ಪರೀಕ್ಷೆ ಮಾಡಲಾಗಿದೆ. ಸೋಂಕು ಕಂಡುಬಂದಿಲ್ಲ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತದೆ. ಮಕ್ಕಳಧಾಮಕ್ಕೆ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸದ್ಯ, ರಾಜ್ಯದಲ್ಲಿ 105 ಮಂದಿ ಕೊರೋನಾ ಸೋಂಕಿತರಿದ್ದಾರೆ. ಆ ಪೈಕಿ, ಬೆಂಗಳೂರಿನಲ್ಲಿಯೇ 93 ಮಂದಿ ಇದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಚಿಕ್ಕಬಳ್ಳಾಪುರ | ಏಪ್ರಿಲ್‌ 20ರಂದು ಪ್ರಧಾನಿ ಮೋದಿ ಆಗಮನ

ಏಪ್ರಿಲ್‌ 20ರ ಶನಿವಾರ 3 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಚೊಕ್ಕಹಳ್ಳಿ ಬಳಿ...

ಹಾಸನ | ರೈತ ವಿರೊಧಿ ಮೋದಿ, ಬಿಜೆಪಿ, ಜೆಡಿಎಸ್ ಸೋಲಿಸಿ; ರೈತ ಸಂಘ ಕರೆ

ಕೃಷಿ ಬಿಕ್ಕಟ್ಟಿಗೆ ಕಾರಣವಾದ ರೈತ ವಿರೊಧಿ ಮೋದಿ, ಬಿಜೆಪಿ ಮತ್ತು ಮಿತ್ರ...