ಬೀದರ್‌ | ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭ್ರಷ್ಟಾಚಾರ; ತನಿಖೆಗೆ ಆಗ್ರಹ

Date:

  • ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ
  • ಸಮಗ್ರ ತನಿಖೆಗೆ ಆಗ್ರಹಿಸಿ ಆರೋಗ್ಯ ಸಚಿವರಿಗೆ ಮನವಿ

ಬೀದರ್ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದ್ದು, ತನಿಖೆ ನಡೆಸಿ ಹಾಗೂ ಮಾಹಿತಿ ಅಧಿನಿಯಮದಲ್ಲಿ ಎಂ.ಎಲ್.ಎಚ್.ಪಿ. ನಿಯಮಾನುಸಾರ ಮಾಹಿತಿ ಅಡಿಯಲ್ಲಿ ಕೇಳಿದ ವಿಷಯ ಮಾಹಿತಿ ನೀಡುತ್ತಿಲ್ಲ ಎಂದು ವಿಶ್ವಕ್ರಾಂತಿ ದಿವ್ಯಪೀಠ ಟ್ರಸ್ಟ್‌ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಆರೋಪಿಸಿದರು.

ಈ ಸಂಬಂಧ ಆರೋಗ್ಯ ಸಚಿವ ದಿನೇಶ ಗುಂಡೂರಾವಾ ಅವರು ಬೀದರ್‌ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಬೀದರ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೇಂದ್ರದ ನಿರ್ವಹಣೆ, ಸಾಮಗ್ರಿ ಖರೀದಿ ಮತ್ತು ನೇಮಕಾತಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ. ಸಾಮಗ್ರಿ ಖರೀದಿ ವಿಷಯ ನಿಯಮಾನುಸಾರ ಪ್ರಕ್ರಿಯೆ ನಡೆಯದೇ ಕೆಲವೇ ಏಜೆನ್ಸಿಗಳ ಮುಖಾಂತರ ಖರೀದಿ ನಡೆಯುತ್ತಿದೆ. ಎಂ.ಎಲ್.ಎಚ್.ಪಿ./ ಕಮ್ಯುನಿಟಿ ಹೆಲ್ತ್ ಆಫೀಸರ್ ನೇರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಕುರಿತಂತೆ ಆಯ್ಕೆ ಪ್ರಕ್ರಿಯೆ ಕುರಿತು 2023ರ ಫೆಬ್ರವರಿಯಲ್ಲಿ ಮಾಹಿತಿ ಹಕ್ಕು ಅಡಿಯಲ್ಲಿ ಕೇಳಿದರೂ ಇಲ್ಲಿಯವರೆಗೆ ಯಾವುದೇ ಮಾಹಿತಿ ನೀಡಲು ಮುಂದಾಗಲಿಲ್ಲ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ ? ಬೀದರ್‌ | ಕ.ಕ.ಭಾಗದ ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್

“ಈ ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಗೋಲ್‌ಮಾಲ್ ನಡೆದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ತಕ್ಷಣವೇ ಈ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು” ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಬೀದರ್‌ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಪಕ್ಷ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...