ಭ್ರಷ್ಟಾಚಾರ ಪ್ರಕರಣ | ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲೋಕಾಯುಕ್ತ ತನಿಖೆ ರದ್ದುಗೊಳಿಸಿದ ಹೈಕೋರ್ಟ್

Date:

ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕೆಎಸ್‍ಡಿಎಲ್ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರ ವಿರುದ್ಧ ನಡೆಯುತ್ತಿದ್ದ ಲೋಕಾಯುಕ್ತ ತನಿಖೆಯನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.

“ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್​ 17A ಪ್ರಕಾರ ಪ್ರಕ್ರಿಯೆ ಪಾಲಿಸಿಲ್ಲ” ಎಂದು ಮಾಡಾಳ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು. ವಕೀಲರ ವಾದ ಪುರಸ್ಕರಿಸಿದ ಹೈಕೋರ್ಟ್​, ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಕಳೆದ 2022ರಲ್ಲಿ ಕನ್ನಿಂಗ್‍ಹ್ಯಾಮ್ ರಸ್ತೆಯಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ ಅವರ ಕಚೇರಿ ಮೇಲೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ಸುಮಾರು 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕೆಎಸ್‍ಡಿಎಲ್‍ನ ಕೆಲ ನೌಕರರಿಂದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿ ಲೋಕಾಯುಕ್ತಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ಈ ಸಂಬಂಧ ದಾಳಿ ನಡೆಸಲಾಗಿತ್ತು. ಮಾಡಾಳ್ ಅವರ ಪುತ್ರ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ ಅವರು ತಂದೆಯ ಪರವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಬಳಿಕ ಶಾಸಕ ಕಚೇರಿ ಮತ್ತು ಮನೆಯಲ್ಲಿ 8 ಕೋಟಿ ರೂಪಾಯಿ ಹೆಚ್ಚು ನಗದು ಪತ್ತೆಯಾಗಿತ್ತು.

ದಾಳಿ ವೇಳೆ ಕಂತೆ ಕಂತೆ ನೋಟು ಸಿಕ್ಕಿದ್ದರಿಂದ, ಆಗಿನ ಬಿಜೆಪಿ ಸರ್ಕಾರಕ್ಕೆ ಭಾರೀ ಮುಜುಗರ ತಂದಿತ್ತು. ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಇದನ್ನು ಗಂಭೀರವಾಗಿ ಪರಿಗಣಿಸಿ, ಭ್ರಷ್ಟಾಚಾರ ನಡೆಸಿ ಈ ಹಣವನ್ನು ಸಂಪಾದಿಸಲಾಗಿದೆ ಎಂದು ಹೋರಾಟ ನಡೆಸಿತ್ತು.

 

ಈ ಸಂಬಂಧ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪ ಸೇರಿ ಅವರ ಪುತ್ರ ಹಾಗೂ ಇತರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ನಂತರ ಜಾಮೀನಿನ ಮೇಲೆ ಇತ್ತೀಚೆಗೆ ಮಾಡಾಳ್ ವಿರೂಪಾಕ್ಷಪ್ಪ ಅವರು ಬಿಡುಗಡೆಯಾಗಿದ್ದರು.

“ನಾನು ಅಡಿಕೆ ವ್ಯಾಪಾರಿಯಾಗಿದ್ದು, ವರ್ತಕರು ನನಗೆ ತಂದುಕೊಟ್ಟಿದ್ದ ಹಣವನ್ನು ಅಲ್ಲಿ ಇರಿಸಿದ್ದೆ” ಎಂದು ಕೆಲ ದಾಖಲೆಗಳನ್ನು ನೀಡಿದ್ದರು. ಲೋಕಾಯುಕ್ತ ತನಿಖೆಯ ವಿರುದ್ಧವೂ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠವು, ಸ್ಪೀಕರ್ ಅನುಮತಿ ಪಡೆಯದೆ ಶಾಸಕರನ್ನು ಬಂಧಿಸಿದ್ದು ಮತ್ತು ತನಿಖೆ ಕೈಗೊಳ್ಳಲಾಗಿದೆ ಎಂದು ತಾಂತ್ರಿಕ ಕಾರಣವೊಡ್ಡಿ ಇಂದು ಪ್ರಕರಣವನ್ನು ರದ್ದುಗೊಳಿಸಿದೆ. ಇದರಿಂದಾಗಿ ಮಾಡಾಳ್ ವಿರೂಪಾಕ್ಷಪ್ಪ ಅವರು ನಿರಾಳರಾಗಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡ ಸೇರಿ 5 ಭಾಷೆಗಳಲ್ಲಿ ಯೂಟ್ಯೂಬ್ ಚಾನೆಲ್ ಆರಂಭಿಸಿದ ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪ್ರೊಪಗ್ಯಾಂಡಗಳ ವಿರುದ್ಧ ಟೊಂಕಕಟ್ಟಿ ನಿಂತಿರುವ ದೇಶದ...

ಪಶ್ಚಿಮ ಬಂಗಾಳ| ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ; ಪೂರ್ವ ಯೋಜಿತ ಎಂದ ಮಮತಾ

ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪೋರ್ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು...

ಸಿದ್ದರಾಮಯ್ಯ ಸರ್ಕಾರ ನೋಡಿದ್ರೆ ನಾವೀಗ ಪಾಕಿಸ್ತಾನದಲ್ಲಿ ಇದ್ದೀವಾ ಎಂಬ ಅನುಮಾನ ಬರುತ್ತಿದೆ: ಆರ್‌ ಅಶೋಕ್‌

ಬೆಂಗಳೂರಿನಲ್ಲಿ ಜೈಶ್ರೀರಾಮ್‌ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ...

ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ ಮತ ಚಲಾಯಿಸಿ: ತುಷಾರ್ ಗಿರಿನಾಥ್

ಪ್ರತಿಯೊಬ್ಬ ಯುವ ಮತದಾರರು ಚುಣಾವಣಾ ರಾಯಭಾರಿಗಳಾಗಿದ್ದು, ಯಾವುದೇ ಆಮೀಷ, ಪ್ರೇರೇಪಣೆಗಳಿಗೆ ಒಳಗಾಗದೆ...