ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ: ಸಿಪಿಐ(ಎಂ)

Date:

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ. ಬಾಂಡ್‌ಗಳನ್ನು ಸ್ವೀಕರಿಸಲು ಅಗತ್ಯವಿದ್ದ ಎಸ್‌ಬಿಐ ಖಾತೆಯನ್ನು ಪಕ್ಷ ತೆರೆದೂ ಇಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) [ಸಿಪಿಐಎಂ] ಹೇಳಿದೆ.

ಸಿಪಿಐ(ಎಂ) ಕೂಡ ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಪಡೆದಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತರಿಸಿದ್ದವು. ಈ ಬೆನ್ನಲ್ಲೇ ಸಿಪಿಐ(ಎಂ) ವರದಿಗೆ ಪ್ರತಿಕ್ರಿಯೆ ನೀಡಿದೆ. ಪಕ್ಷವೂ ಚುನಾವಣಾ ಬಾಂಡ್‌ ಮೂಲಕ ಯಾವುದೇ ಹಣ ಪಡೆದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

“ಚುನಾವಣಾ ಬಾಂಡ್‌ ಮೂಲಕ ಹಣ ಪಡೆದಿರುವ ಬಗ್ಗೆ ಮಾಧ್ಯಮಗಳು ಪ್ರಕಟಿಸಿರುವ ವರದಿಗಳು ಸುಳ್ಳು ಮತ್ತು ಆಧಾರರಹಿತ. ವಾಸ್ತವವೆಂದರೆ, ಸಿಪಿಐ(ಎಂ) ತಾತ್ವಿಕವಾಗಿ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಚುನಾವಣಾ ಬಾಂಡ್‌ ಮೂಲಕ ಹಣ ಪಡೆಯಲು ಅಗತ್ಯವಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯನ್ನೇ ಪಕ್ಷ ತೆರೆಯಲಿಲ್ಲ” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಗಮನಿಸಬೇಕಾದ ವಿಚಾರವೆಂದರೆ, ಚುನಾವಣಾ ಬಾಂಡ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ಸಿಪಿಐ(ಎಂ) ಯೋಜನೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಚುನಾವಣಾ ಬಾಂಡ್ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ಮಾಡಿದೆ” ಎಂದು ವಿವರಿಸಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಸುಪ್ರೀಂ ಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಿದೆ. ಕೇಂದ್ರದ ಚುನಾವಣಾ ಬಾಂಡ್‌ಗಳ ಬೇನಾಮಿ ರಾಜಕೀಯ ನಿಧಿ ಯೋಜನೆಯನ್ನು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ ‘ಅಸಂವಿಧಾನಿಕ‘ ಎಂದು ಕೋರ್ಟ್‌ ಹೇಳಿದೆ. 2024ರ ಮಾರ್ಚ್ 13 ರೊಳಗೆ ಬಾಂಡ್‌ನ ದಾನಿಗಳು, ಮೊತ್ತ ಮತ್ತು ಅವುಗಳನ್ನು ಸ್ವೀಕರಿಸಿದವರ ಹೆಸರುಗಳನ್ನು ಬಹಿರಂಗಪಡಿಸುವಂತೆ ಎಸ್‌ಬಿಐ ಮತ್ತು ಚುಣಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

2018ರ ಜನವರಿಯಲ್ಲಿ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿ, ಜಾರಿಗೆ ತಂದಿತ್ತು. ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಚುನಾವಣಾ ಬಾಂಡ್‌ಗಳನ್ನು ಬ್ಯಾಂಕ್‌ನಿಂದ ಖರೀದಿಸಬಹುದು ಮತ್ತು ರಾಜಕೀಯ ಪಕ್ಷಕ್ಕೆ ನೀಡಬಹುದು. ಇವುಗಳ ಮಾಹಿತಿಯು ಗೌಪ್ಯವಾಗಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...