ಮಣಿಪುರ | ಬಡಕಟ್ಟು ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಸಂಬಂಧ ಹಿಂಸಾಚಾರ ; 8 ಜಿಲ್ಲೆಗಳಲ್ಲಿ ನಿಷೇಧಾಜ್ಞೆ

Date:

  • ಮಣಿಪುರದಲ್ಲಿ ಶೇ 53 ಜನಸಂಖ್ಯೆ ಹೊಂದಿರುವ ಮೇಟಿ ಸಮುದಾಯ ಎಸ್‌ಟಿ ಮೀಸಲಾತಿ ಕಲ್ಪಿಸಲು ಆಗ್ರಹ
  • ಮೇಟಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವಂತೆ ವಿದ್ಯಾರ್ಥಿ ಸಂಘಟನೆ ಪ್ರತಿಭಟನಾ ಮೆರವಣಿಗೆ

ಮಣಿಪುರ ರಾಜ್ಯದಲ್ಲಿ ಬುಡಕಟ್ಟು ಸಮುದಾಯದವರು ತಮಗೆ ಪರಿಶಿಷ್ಟ ಪಂಗಡ ಮೀಸಲಾತಿ (ಎಸ್‌ಟಿ ಮೀಸಲಾತಿ) ಕಲ್ಪಿಸುವಂತೆ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಹಿಂಸಾಚಾರ ಪರಿಣಾಮ ಇಂಫಾಲ್, ಚುರಾಚಂದ್ಪುರ ಹಾಗೂ ಕಾಂಗ್ಪೋಕ್ಸಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಪರಿಣಾಮ ಬುಧವಾರ (ಮೇ 3) ರಾತ್ರಿಯಿಂದ 8 ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೆ ಐದು ದಿನಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ.

ಎಸ್‌ಟಿ ಮೀಸಲಾತಿ ಸಂಬಂಧದ ಹಿಂಸಾಚಾರ ತಡೆಗಟ್ಟಲು ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸ್ಥಳಕ್ಕೆ ದೌಡಾಯಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪರಿಸ್ಥಿತಿಯ ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಗುರುವಾರ (ಮೇ 4) ಧ್ವಜ ಮೆರವಣಿಗೆ ನಡೆಸಿದವು. ಹಿಂಸಾಚಾರದ ತರುವಾಯ ರಾಜ್ಯದ ನಾನಾ ಹಿಂಸಾಪೀಡಿತ ಪ್ರದೇಶಗಳಲ್ಲಿನ ಸುಮಾರು 4 ಸಾವಿರ ಮಂದಿಗೆ ಸೇನಾ
ಶಿಬಿರಗಳು ಹಾಗೂ ಸರ್ಕಾರಿ ಕಚೇರಿ ಆವರಣದಲ್ಲಿ ಆಶ್ರಯ ನೀಡಲಾಗಿದೆ.

ಎಸ್‌ಟಿ ಮೀಸಲಾತಿ ಸಂಬಂಧದ ಹಿಂಸಾಚಾರದಲ್ಲಿ ಬಳಲಿದ ಬಹಳಷ್ಟು ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ.

ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬುಡಕಟ್ಟು ಜನರಲ್ಲದ ಪ್ರಾಬಲ್ಯ ಇರುವ ಇಂಫಾಲ್ ಪಶ್ಚಿಮ, ಕಾಕ್ಚಿಂಗ್, ತೌಬಲ್, ಜಿರಿಬಾಮ್ ಮತ್ತು ಬಿಷ್ಣುಪುರ್ ಜಿಲ್ಲೆಗಳು ಮತ್ತು ಬುಡಕಟ್ಟು ಪ್ರಾಬಲ್ಯವಿರುವ ಚುರಾಚಂದ್ಪುರ, ಕಾಂಗ್ಪೋಕ್ಪಿ ಮತ್ತು ತೆಂಗ್ನೌಪಾಲ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸೇನೆಯು ಪೀಡಿತ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಸ್ಥಳೀಯ ಆಡಳಿತಕ್ಕೆ ಸಹಾಯ ಮಾಡುತ್ತಿದೆ.

ಮೇಟಿ ಸಮುದಾಯಕ್ಕೆ ಎಸ್‌ಟಿ ಸ್ಥಾನಮಾನ ಕಲ್ಪಿಸಬೇಕೆಂದು ಒತ್ತಾಯಿಸಿ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ.

ಮೇಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ಕಲ್ಪಿಸಬೇಕೆಂದು ಆಗ್ರಹಿಸಿ ಮಣಿಪುರ ಬುಡಕಟ್ಟು ವಿದ್ಯಾರ್ಥಿಗಳ ಸಂಘಟನೆ (ಎಟಿಎಸ್‌ಯುಎಂ) ಹಮ್ಮಿಕೊಂಡ ‘ಬುಡಕಟ್ಟು ಏಕತಾ ಮೆರವಣಿಗೆ’ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.

ಮೇಟಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ಕಲ್ಪಿಸಬೇಕೆಂಬ ಬೇಡಿಕೆ ತೀವ್ರಗೊಳ್ಳುತ್ತಿದ್ದು, ಇದರ ವಿರುದ್ಧ ಮೆರವಣಿಗೆಗೆ ಕರೆ ನೀಡಿರುವುದಾಗಿ ಸಂಘಟನೆ ತಿಳಿಸಿದೆ.

ಮೆರವಣಿಗೆಯಲ್ಲಿ ಸಾವಿರಾರು ಆಂದೋಲನಕಾರರು ಭಾಗವಹಿಸಿದ್ದರು. ತೋರ್‌ಬಂಗ್ ಪ್ರದೇಶದಲ್ಲಿ ಮೆರವಣಿಗೆ ಸಾಗುವಾಗ ಬುಡಕಟ್ಟು ಮತ್ತು ಬುಡಕಟ್ಟು ಅಲ್ಲದವರ ನಡುವೆ ಹಿಂಸಾಚಾರ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಹಲವು ಸುತ್ತು ಗುಂಡು ಹಾರಿಸಿದರು. ಅಶ್ರುವಾಯು ಸಿಡಿಸಿ ಪರಿಸ್ಥಿತಿ ನಿಯಂತ್ರಿಸಲಾಯಿತು ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ವರಸೆ ಬದಲಿಸಿದ ಪಿ ಟಿ ಉಷಾ; ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ!

ಮಣಿಪುರದಲ್ಲಿ ಶೇ 53 ರಷ್ಟು ಜನಸಂಖ್ಯೆ ಹೊಂದಿರುವ ಮೇಟಿ ಸಮುದಾಯ ತಮಗೆ ಎಸ್ಟಿ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿವೆ. ಇವರ ಜೊತೆ ವಿದ್ಯಾರ್ಥಿ ಸಂಘಟನೆ ಕೈಜೋಡಿಸಿದ್ದು ಬೆಟ್ಟ ಪ್ರದೇಶಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ.

ಮೇಟಿ ಸಮುದಾಯಕ್ಕೆ ಎಸ್‌ಟಿ ಮೀಸಲಾತಿ ನೀಡುವುದನ್ನು ಬುಡಕಟ್ಟು ಸಮುದಾಯ ವಿರೋಧಿಸಿದೆ. ರಾಜ್ಯದಲ್ಲಿ ಶೇ 40 ರಷ್ಟು ಜನಸಂಖ್ಯೆ ಹೊಂದಿರುವ ಬುಡಕಟ್ಟು ಸಮುದಾಯ ಭಿತ್ತಿಪತ್ರಗಳನ್ನು ಹಿಡಿದು ಘೋಷಣೆ ಕೂಗುತ್ತ ಮೇಟಿ ಸಮುದಾಯಕ್ಕೆ ಮೀಸಲಾತಿ ವಿರೋಧಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಖ್ತಾರ್ ಅನ್ಸಾರಿಗೆ ಜೈಲಿನಲ್ಲಿ ‘ಸ್ಲೋ ಪಾಯ್ಸನ್’ ನೀಡಲಾಗಿದೆ; ಪುತ್ರ ಉಮರ್ ಅನ್ಸಾರಿ ಆರೋಪ

ಉತ್ತರ ಪ್ರದೇಶದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಜೈಲಿನಲ್ಲಿ...

ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ವಿಶ್ವಸಂಸ್ಥೆ ಪ್ರತಿಕ್ರಿಯೆ

ವಿಶ್ವಸಂಸ್ಥೆ ಯ ಪ್ರಧಾನ ಕಾರ್ಯದರ್ಶಿ ಆನ್‌ಟೊನಿಯೋ ಗುಟೆರ್ರಸ್ ಅವರ ವಕ್ತಾರರು ಅರವಿಂದ್‌...

ಜಮ್ಮು – ಶ್ರೀನಗರದ ಹೆದ್ದಾರಿಯಲ್ಲಿ ಅಪಘಾತ: 10 ಸಾವು

ಪ್ರಾಯಣಿಕರನ್ನು ಕರೆದೊಯ್ಯುವ ಟ್ಯಾಕ್ಸಿಯೊಂದು ಕಂದಕಕ್ಕೆ ಬಿದ್ದು ಕನಿಷ್ಠ 10 ಮಂದಿ ಮೃತಪಟ್ಟ...