ಇಂದು ನಾಮಪತ್ರ ಸಲ್ಲಿಸಿದ ಹಾಲಿ ಸಿಎಂ ಬೊಮ್ಮಾಯಿ; ಮಾಜಿ ಸಿಎಂ ಸಿದ್ದರಾಮಯ್ಯ

Date:

  • ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೆ ಜೊತೆಯಾದ ನಟ ಸುದೀಪ್
  • ಸಿದ್ದರಾಮಯ್ಯ ನಾಮಿನೇಷನ್‌ಗೆ ಹರಿದು ಬಂದ ಜನಸಾಗರ

ರಾಜ್ಯ ವಿಧಾನಸಭಾ ಚುನಾವಣೆ ಸಲುವಾಗಿ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ನಾಳೆ (ಏಪ್ರಿಲ್ 20) ಕಡೆಯ ದಿನವಾಗಿರುವ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಕೆಗೆ ನಾಯಕರ ದಂಡು ಹರಿದು ಬಂದಿತ್ತು. ಶಿಗ್ಗಾಂವಿಯಲ್ಲಿ ಸಿಎಂ ಬೊಮ್ಮಾಯಿ ನಟ ಸುದೀಪ್ ಜೊತೆ ರೋಶ್ ಶೋ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.ನಾಮಪತ್ರ

ಇತ್ತ ನಂಜನಗೂಡಿನಲ್ಲಿ ಜನಸಾಗರದೊಂದಿಗೆ ಸಾಗಿ ಬಂದ ಮಾಜಿ ಸಿಎಂ ಸಿದ್ದರಾಮಯ್ಯ ನಾಮಿನೇಷನ್ ಫೈಲ್ ಮಾಡಿದರು. ಇದಕ್ಕೂ ಮುನ್ನ ಅವರು ಗ್ರಾಮ ಸಿದ್ದರಾಮನ ಹುಂಡಿಯ ಸಿದ್ದರಾಮೇಶ್ವರ ಹಾಗೂ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಾಗೆಯೇ ಶಿಕಾರಿಪುರದ ಬಿಜೆಪಿಯ ಬಿವೈ ವಿಜಯೇಂದ್ರ ನಾಮಪತ್ರ ಸಲ್ಲಿಕೆ ಮಾಡಿದರು. ಬಿವೈ ವಿಜಯೇಂದ್ರಗೆ ತಂದೆ ಬಿಎಸ್ ಯಡಿಯೂರಪ್ಪ ಪತ್ನಿ ಪ್ರೇಮಾ, ಸೋದರ ಬಿವೈ ರಾಘವೇಂದ್ರ ಜೊತೆಯಾಗಿದ್ದರು.

ಮಗನ ನಾಮಪತ್ರ ಸಲ್ಲಿಕೆ ಸಂದರ್ಭಕ್ಕೆ ತೆರಳುವ ವೇಳೆ ತಮ್ಮ ಹಳೆಯ ಅಂಬಾಸಿಡರ್ ಕಾರನ್ನು ಯಡಿಯೂರಪ್ಪ ಬಳಕೆ ಮಾಡಿ ಗಮನ ಸೆಳೆದರು.ನಾಮಪತ್ರ

ಇತ್ತ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಡಾ ಜಿ. ಪರಮೇಶ್ವರ್ ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಘುನಾಥನಾಯ್ಡು ನಾಮಪತ್ರ ಸಲ್ಲಿಕೆ ಮಾಡಿದರು, ಇವರಿಗೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸಾಥ್ ನೀಡಿದರು.ನಾಮಪತ್ರ

ಈ ಸುದ್ದಿ ಓದಿದ್ದೀರಾ? :ಚುನಾವಣೆ 2023 | ಜೆಡಿಎಸ್‌ನಲ್ಲಿ ಪಕ್ಷಾಂತರಿಗಳ ಹವಾ; ಕೈ-ಕಮಲ ತೊರೆದು ತೆನೆ ಹೊತ್ತ 24 ಮಂದಿ

ತುಮಕೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಸಚಿವ ಸೊಗಡು ಶಿವಣ್ಣ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಹಾಗೆಯೇ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಪಕ್ಷೇತರ ಅಭ್ಯರ್ಥಿಯಾಗಿ ಗೂಳಿಹಟ್ಟಿ ಶೇಖರ್ ನಾಮಪತ್ರ ಸಲ್ಲಿಕೆ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...

ಸತ್ಯ ಹರಿಶ್ಚಂದ್ರನ ಮೊಮ್ಮಗ ತರ ಕುಮಾರಸ್ವಾಮಿ ಮಾತಾಡ್ತಾರೆ: ಡಿ ಕೆ ಶಿವಕುಮಾರ್ ವಾಗ್ದಾಳಿ

ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ?, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು...

ಕೋಮು ದ್ವೇಷ ಭಾಷಣ; ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚು.ಆಯೋಗಕ್ಕೆ 93 ನಿವೃತ ಅಧಿಕಾರಿಗಳ ಪತ್ರ

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...