ಕರ್ನಾಟಕದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಮ್ ಶೇ. 20 ರಷ್ಟಿದೆ: ಎಂ ಎ ಸಲೀಂ

Date:

  • ಸೈಬರ್ ಅಪರಾಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರು
  • ಸೈಬರ್ ಸುರಕ್ಷತೆ ಪರಿಹಾರಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ; ಎಫ್‌ಕೆಸಿಸಿಐ ಅಧ್ಯಕ್ಷ

ಕರ್ನಾಟಕದಲ್ಲಿ ದಾಖಲಾದ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ. 20 ರಷ್ಟು ಸೈಬರ್ ಅಪರಾಧಕ್ಕೆ ಸಂಬಂಧಿಸಿವೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಎಂಎ ಸಲೀಂ ಶನಿವಾರ ಹೇಳಿದ್ದಾರೆ.

ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘ (ಎಫ್‌ಕೆಸಿಸಿಐ) ಆಯೋಜಿಸಿದ್ದ ‘ಸೈಬರ್‌ ಭದ್ರತೆ- ಆರ್ಟಿಫಿಶಿಯಲ್ ಪ್ರಾಮುಖ್ಯತೆಯ ಸಂಭಾವ್ಯತೆ’ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, “ಶಿಕ್ಷಣದ ಕೊರತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಂದ ಬಂದಂತಹವರಿಂದ ಹೆಚ್ಚಿನ ಅಪರಾಧಗಳು ವರದಿಯಾಗುತ್ತಿವೆ. ಸರ್ಕಾರದ ಖಾತರಿ ಯೋಜನೆಗಳಾದ ಗೃಹ ಜ್ಯೋತಿ, ಗೃಹಲಕ್ಷ್ಮಿ ಹೆಸರಿನಲ್ಲಿ ನಕಲಿ ಆ್ಯಪ್‌ಗಳನ್ನು ಸೃಷ್ಟಿಸಲಾಗಿದೆ. ಅಂತಹ ಆ್ಯಪ್‌ಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ಹೇಳಿದರು.

“ಸೈಬರ್‌ ಬುಲ್ಲಿಂಗ್, ಟ್ರೋಲಿಂಗ್, ಸೇಡು ತೀರಿಸಿಕೊಳ್ಳುವ ಅಶ್ಲೀಲತೆ, ಸ್ಕಿಮ್ಮಿಂಗ್, ಫಿಶಿಂಗ್ ಮತ್ತು ಇತರವುಗಳ ಅಡಿಯಲ್ಲಿ ಸುಮಾರು 45 ವಿಧದ ಸೈಬರ್‌ ಕ್ರೈಮ್‌ಗಳು ವರದಿಯಾಗಿವೆ. ಕಾಲೇಜು ಬಿಟ್ಟವರು, ಉತ್ತರ ಕರ್ನಾಟಕದಂತಹ ಪ್ರದೇಶಗಳ ನಿರುದ್ಯೋಗಿ ಯುವಕರು ಸೈಬರ್ ಅಪರಾಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ” ಎಂದು ಸಲೀಂ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸೈಬರ್ ಅಪರಾಧಗಳಲ್ಲಿ ಶ್ರೀಮಂತರು ಮಾತ್ರವಲ್ಲದೆ ಬಡವರು ಕೂಡ ಗುರಿಯಾಗುತ್ತಾರೆ. ಸುಮಾರು 70ರಷ್ಟು ಪ್ರಕರಣಗಳು ಪತ್ತೆಯಾಗಿವೆ. ಸೈಬರ್ ಅಪರಾಧ ನಿರ್ವಹಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಆದರೆ, ಇನ್ನೂ ಹೆಚ್ಚಿನ ಸುಧಾರಣೆಯ ಅಗತ್ಯವಿದೆ. ಖಾಸಗಿ ಕಂಪನಿಗಳು ತಮ್ಮ ಡೇಟಾ ರಕ್ಷಣೆಗೆ ರಾಜಿ ಮಾಡಿಕೊಳ್ಳಬಾರದು. ಡೇಟಾ ಉಲ್ಲಂಘನೆಯನ್ನು ತಡೆಯಲು ತಮ್ಮ ಫೈರ್‌ವಾಲ್ ಸಮಗ್ರವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅಂತರರಾಜ್ಯ ಡ್ರಗ್ ದಂಧೆ | ₹12 ಕೋಟಿ ಮೌಲ್ಯದ 1,500 ಕೆಜಿ ಗಾಂಜಾ ವಶ

ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ್ ರೆಡ್ಡಿ ಮಾತನಾಡಿ, “ಸೈಬರ್ ದಾಳಿಕೋರರು ರಾನ್ಸಮ್‌ವೇರ್ ದಾಳಿ ನಡೆಸಲು ಅತ್ಯಾಧುನಿಕ ತಂತ್ರಗಳನ್ನು ಬಳಸುತ್ತಿದ್ದಾರೆ. ರಾನ್ಸಮ್ ಮೂಲಕ ಹಣ ಗಳಿಸುತ್ತಿದ್ದಾರೆ. ತಾಂತ್ರಿಕ ಪ್ರಗತಿಯ ಜತೆಗೆ ಸ್ವಯಂಚಾಲಿತ ಮತ್ತು ಅತ್ಯಾಧುನಿಕ ಸೈಬರ್-ದಾಳಿಗಳು ವೇಗಗೊಳ್ಳುತ್ತಿವೆ. ಹಾಗಾಗಿ, ಸೈಬರ್ ಸುರಕ್ಷತೆ ಪರಿಹಾರಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...