ಬೆಂ. ಗ್ರಾಮಾಂತರ | ಕೊಲೆಯಾದ ಸ್ಥಿತಿಯಲ್ಲಿ ದಲಿತ ಬಾಲಕಿ ಮೃತದೇಹ ಪತ್ತೆ; ಸವರ್ಣೀಯನ ಮೇಲೆ ಶಂಕೆ

Date:

ದಲಿತ ಬಾಲಕಿಯೊಬ್ಬಳ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ. ಆಕೆಯನ್ನು ಚುಡಾಯಿಸುತ್ತಿದ್ದವನೇ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ. ಸದ್ಯ, ಶಂಕಿತನೂ ಕತ್ತುಕೊಯ್ದುಕೊಂಡು ಆಸ್ಪತ್ರೆ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

20 ದಿನಗಳ ಹಿಂದೆ ದಲಿತ ಬಾಲಕಿ ಶಾಲೆಗೆ ತೆರಳುತ್ತಿದ್ದಾಗ, ಸವರ್ಣೀಯ ಸಮುದಾಯದ ನಿತಿನ್ ಎಂಬಾತ ಚುಡಾಯಿಸಿದ್ದ. ಆತನನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಕೂಡ ಮಾಡಿದ್ದ. ಘಟನೆ ಬಗ್ಗೆ ಬಾಲಕಿ ತನ್ನ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ, ಮಾಲೂರು ಪೊಲೀಸ್‌ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದರು.

ಆದರೆ, ಗ್ರಾಮದ ಹಿರಿಯ ಮುಖಂಡರು ಎರಡು ಕುಟುಂಬಗಳ ನಡುವೆ ರಾಜೀ-ಸಂದಾನ ನಡೆಸಿದ್ದರು. ರಾಜಿ ಪಂಚಾಯತಿ ನಡೆದ ಕೆಲವೇ ದಿನಗಳಲ್ಲಿ ಬಾಲಕಿ ನಾಪತ್ತೆಯಾಗಿದ್ದಳು. ಗುರುವಾರ ಆಕೆಯ ಮೃತದೇಹ ಪತ್ತೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅನುಗೊಂಡನಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರಿಗೆ ದೂರು ನೀಡಿದ್ದರಿಂದ ಮತ್ತು ರಾಜಿ ಪಂಚಾಯತಿಯಿಂದ ತನಗೆ ಅವಮಾನವಾಗಿದ್ದಕ್ಕೆ, ಪ್ರಬಲ ಜಾತಿಯ ನಿತಿನ್ ಎಂಬಾತನೇ ಕೊಲೆ ಮಾಡಿಬಹುದು ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಬಂಧ ಈದಿನ.ಕಾಮ್ ಜೊತೆ ಮಾತನಾಡಿದ ಅನುಗೊಂಡನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿ, “ಗುರುವಾರ ಬಾಲಕಿಯ ಮೃತದೇಹ ಪತ್ತೆಯಾಗಿದೆ. ನಿತಿನ್ ಎಂಬಾತನೇ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಆತನೂ ಕತ್ತುಕೊಯ್ದುಕೊಂಡಿದ್ದಾನೆ. ಆತ ಕೋಮಾ ಸ್ಥಿತಿಯಲ್ಲಿದ್ದಾನೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ” ಎಂದು ತಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಯುವ ನಾಯಕನ ಕಾಮಕೃತ್ಯದ ಪೆನ್‌ಡ್ರೈವ್ ಆರೋಪ; ಮೌನ ಮುರಿಯದ ಮಾಜಿ ಪ್ರಧಾನಿ

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಪೆನ್‌ಡ್ರೈವ್ ಭಾರೀ ಸುದ್ದಿ ಮಾಡ್ತಾ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ...

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಕಾಂಗ್ರೆಸ್ ಪರ ಪ್ರಚಾರ ಮಾಡದಂತೆ ಸಿಪಿಐಎಂ ಕಾರ್ಯಕರ್ತನಿಗೆ ಜೆಡಿಎಸ್ ಮುಖಂಡರ ಬೆದರಿಕೆ

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಬಾರದು ಎಂದು ಜೆಡಿಎಸ್ ಕಾರ್ಯಕರ್ತರು ಸಿಪಿಐಎಂ...