ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳ ಪ್ರತಿಭಟನೆ

Date:

ನ್ಯಾ. ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸಿ ಮಾದಿಗ ಸಮುದಾಯ ಮತ್ತು ಛಲವಾದಿ ಸಮುದಾಯದ ಮುಖಂಡರು ಹಾಗೂ ದಲಿತ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ದಾವಣಗೆರೆ ಜಿಲ್ಲೆ ಜಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಶಾಸಕ ಬಿ ದೇವೇಂದ್ರಪ್ಪ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಮಾದಿಗ ಸಮುದಾಯದ ಹಿರಿಯ ಮುಖಂಡ ಶಂಭುಲಿಂಗಪ್ಪ, “ದಶಕಗಳಿಂದ ಹೊರಾಟ ನಡೆಸುತ್ತಾ ಬಂದಿದ್ದರೂ ನ್ಯಾ.ಸದಾಶಿವ ಆಯೋಗ ವರದಿಯನ್ನು ಸರ್ಕಾರಗಳು ಜಾರಿ ಮಾಡಿಲ್ಲ. ರಾಜ್ಯದಲ್ಲಿ ಮಾದಿಗ ಹಾಗೂ ಛಲವಾದಿ ಸಮುದಾಯಗಳು ಅಸ್ಪೃಶ್ಯತೆ ಅನುಭವಿಸುತ್ತಿವೆ. ಸಮುದಾಯಗಳ ಜನರು ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಅವಕಾಶ ವಂಚಿತರಾಗುತ್ತಿದ್ದಾರೆ. ಸಾಮಾಜಿಕ ನ್ಯಾಯದಡಿ ಸರ್ಕಾರಿ ಸೌಲಭ್ಯಗಳು ಸಿಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಹಿಂದ ವರ್ಗದ ನಾಯಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಸದಾಶಿವ ಆಯೋಗ ಶಿಫಾರಸ್ಸು ಮಾಡಿರುವ ಒಳಮೀಸಲಾತಿಯನ್ನು ಜಾರಿಗೆ ತರಬೇಕು. ಅದಕ್ಕಾಗಿ ಶಾಸಕರು ಬೆಳಗಾವಿ ಅಧಿವೇಶನದಲ್ಲಿ ಒತ್ತಡ ತರಬೇಕು” ಎಂದು ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಬಿ.ದೇವೇಂದ್ರಪ್ಪ, “ನಾವು ಕೂಡ ಎಸ್‌ಟಿ ಮೀಸಲಾತಿ ಹೆಚ್ಚಳಕ್ಕಾಗಿ ಹೊರಾಟ ನಡೆಸುತ್ತಿದ್ದೇವೆ. ಡಾ.ಬಿ.ಆರ್ .ಅಂಬೇಡ್ಕ‌ರ್ ಅವರ ಸಂವಿಧಾನದಡಿ ಮೀಸಲಾತಿ ಪ್ರತಿಯೊಬ್ಬರ ಹಕ್ಕು. ಮಾದಿಗ ಮತ್ತು ಛಲವಾದಿ ಸಮುದಾಯಗಳ ನೋವು, ಜೀವನ ಸ್ಥಿತಿಗತಿಗಳನ್ನು ನಾನು ಹತ್ತಿರದಿಂದ ಮನಗಂಡಿದ್ದೇನೆ. ಬೆಳಗಾವಿ ಅಧಿವೇಶನದಲ್ಲಿ ತಮ್ಮ ಮನವಿಯನ್ನು ಮುಂದಿಟ್ಟು ಸರ್ಕಾರದ ಗಮನ ಸೆಳೆಯುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಪ್ರತಿಭಟನೆಯಲ್ಲಿ ಛಲವಾದಿ ಸಮಾಜದ ಮುಖಂಡ ಸಮಾಜ ಕಲ್ಯಾಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕರಾದ ಬಿ.ಮಹೇಶ್ವ ರಪ್ಪ ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯ ಕ್ಷ ಶಂಶಿರ್ ಅಹಮದ್.ಚಲವಾದಿ ಸಮಾಜದ ಮುಖಂಡ ರಾದ ಸಿ.ತಿಪ್ಪೇಸ್ವಾಮಿ, – ಮಾದಿಗ ಸಮಾಜದ ಮುಖಂಡರಾದ ಹಟ್ಟಿ ತಿಪ್ಪೇ ಸ್ವಾಮಿ,ಭಾರತ ಗ್ಯಾಸ್ ಮಾಲೀಕ ಓಬಣ್ಣ, ಸಿದ್ದಮ್ಮನಹಳ್ಳಿ ವೆಂಕ ಟೇಶ್. ಮಾಜಿ ಪ.ಪಂ.ಅಧ್ಯಕ್ಷ ಮಂಜುನಾಥ್, ಪೂಜಾರಿ ಸಿದ್ದಪ್ಪ. ಪಲ್ಲಾಗಟ್ಟೆ ಶೇಖರಪ್ಪ .ಅಣಬೂರು ರಾಜಶೇಖ‌ರ್,ತಾಯಿಟೋನಿ ಬಾಬು ರಾಜೇಂದ್ರ ಪ್ರಸಾದ್.ಗೌರಿಪುರ ಕುಬೇರಪ್ಪ, ಅಣಬೂರು ರೇಣು ಕೇಶ್.ಪಾಪಯ್ಯ,ಕುಬೇಂದ್ರಪ್ಪ, ದುರ್ಗಪ್ಪ. ಬಿಳಿಚೋಡ ಹಾಲೇಶ್. ಸತೀಶ್ ಮಲೆ ಮಾಚಿಕೆರೆ,ಧನ್ಯ ಕುಮಾರ್ ಮಾದಿಹಳ್ಳಿ ಮಂಜು ನಾಥ್,ಬಸವರಾಜ್,ಸಿದ್ದಮ್ಮನಹ ಳ್ಳಿ ವೆಂಕಟೇಶ್,ಮಾರುತಿ ಜಗಳೂರಯ್ಯ.ಹನುಮಂತಪುರ ರಾಜು. ಹಿರೇಮಲ್ಲನಹಳ್ಳಿ ಲೋಕೇಶ್, ಸಾವಿತ್ರಮ್ಮ ಸತ್ಯಮೂರ್ತಿ.ಅಹ್ಮದ್ ಅಲಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...