ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು: ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

Date:

ಚಿತ್ರದುರ್ಗದ ಕವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ.‌

ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟು ಹಲವರು ಅಸ್ವಸ್ಥಕ್ಕೀಡಾಗಿದ್ದರು. ಕವಾಡಿಗರಹಟ್ಟಿ ಬಡಾವಣೆಗೆ ನಗರಸಭೆಯಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗಿತ್ತು. ಈ ನೀರು ಸೇವಿಸಿ ಜನರು ಏಕಾಏಕಿ ಅಸ್ವಸ್ಥಗೊಂಡರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು....

ದಾವಣಗೆರೆ | ಲೋಕಸಭಾ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸಿಪಿಐ ಬೆಂಬಲ ಘೋಷಣೆ

ದೇಶಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಕಮ್ಯೂನಿಸ್ಟ್ ಪಕ್ಷವು ಇಂಡಿಯಾ ಒಕ್ಕೂಟದ...

ವಿಜಯೇಂದ್ರ, ಸಿಟಿ ರವಿ, ಪಿ.ರಾಜೀವ್‌ನಿಂದ ಬಿಜೆಪಿ ಹಾಳಾಗುತ್ತಿದೆ: ಮಾಲೀಕಯ್ಯ ಗುತ್ತೇದಾರ ಕಿಡಿ

ಸಹೋದರ ನಿತಿನ್ ಗುತ್ತೇದಾರ ಅವರನ್ನು ಬಿಜೆಪಿಗೆ ಸೇರಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ...