ಮಾನನಷ್ಟ ಮೊಕದ್ದಮೆ; ದೋಷಾರೋಪಣೆಗೆ ತಡೆ ಕೋರಿ ಹೈಕೋರ್ಟ್‌ಗೆ ರಾಹುಲ್ ಗಾಂಧಿ ಅರ್ಜಿ

Date:

  • ತೀರ್ಪನ್ನು ಮುಂದಿನ ದಿನಗಳಲ್ಲಿ ಕಾನೂನಿಗೆ ಅನುಸಾರವಾಗಿ ಹೈಕೋರ್ಟ್ನಲ್ಲಿ ಪ್ರಶ್ನೆ ಎಂದ ಸಂಘ್ವಿ
  • ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದ ಕಾಂಗ್ರೆಸ್ ಮುಖಂಡ ಜೈರಾಮ್‌ ರಮೇಶ್

ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು, ಏಪ್ರಿಲ್ 3ರ ಆದೇಶದಂತೆ, ರಾಹುಲ್ ಗಾಂಧಿ ಅವರು ಜಾಮೀನಿನ ಮೇಲೆ ಇರುತ್ತಾರೆ ಎಂದು ರಾಹುಲ್‌ ಗಾಂಧಿ ಪರ ವಕೀಲ ಕಿರಿತ್ ಪನ್ವಾಲಾ ತಿಳಿಸಿದ್ದಾರೆ.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿಯವರನ್ನು ಸಂಸತ್ ಸದಸ್ಯನಾಗಿ ಅನರ್ಹಗೊಳಿಸಲು ಕಾರಣವಾದ ಮಾರ್ಚ್ 23ರ ಆದೇಶಕ್ಕೆ ತಡೆ ನೀಡುವಂತೆ ಅರ್ಜಿಯನ್ನು ಸೂರತ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ ತಿರಸ್ಕರಿಸಿದೆ. ಈ ಹಿನ್ನಲೆಯಲ್ಲಿ ಹೈಕೋರ್ಟ್ ಮೊರೆ ಹೋಗಲು ಕಾಂಗ್ರೆಸ್ ನಿರ್ಧರಿಸಿದೆ.

ಕೆಳ ನ್ಯಾಯಾಲಯದ ಆದೇಶದ ವಿರುದ್ಧ ರಾಹುಲ್‌ ಗಾಂಧಿಯವರ ಮೇಲ್ಮನವಿಯ ಅಂತಿಮ ವಿಚಾರಣೆ ಪ್ರಾರಂಭಿಸಲು ಸೆಷನ್ಸ್ ನ್ಯಾಯಾಲಯವು ಮೇ 20ರಂದು ದಿನಾಂಕ ನಿಗದಿಪಡಿಸಿದೆ ಎಂದು ಕಿರಿತ್‌ ಪನ್ವಾಲಾ ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಹುಲ್‌ ಗಾಂಧಿಯವರ ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿರುವುದು ಅಮಾನ್ಯ. ನ್ಯಾಯಾಧೀಶರು ಅರ್ಜಿ ತಿರಸ್ಕಾರಕ್ಕೆ ನ್ಯಾಯಸಮ್ಮತ ಕಾರಣ ನೀಡಿಲ್ಲ ಮತ್ತು ದೋಷಪೂರಿತ ನಿರ್ಧಾರ” ಎಂದು ಕಾಂಗ್ರೆಸ್ ಹೇಳಿದೆ.

ಈ ತೀರ್ಪನ್ನು ಗುಜರಾತ್ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ರಾಹುಲ್ ಗಾಂಧಿ ವಕೀಲರು ತಿಳಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ವಕೀಲ ಅಭಿಷೇಕ್ ಸಿಂಘ್ವಿ “ಕಾನೂನಿನ ಎಲ್ಲಾ ಮೂಲಭೂತ ಮತ್ತು ಪ್ರಾಥಮಿಕ ತತ್ವಗಳಿಗೆ ವಿರುದ್ಧವಾಗಿ ಶಿಕ್ಷೆಯನ್ನು ಎತ್ತಿಹಿಡಿಯಲಾಗಿದೆ” ಎಂದು ಹೇಳಿದರು.

“ತೀರ್ಪನ್ನು ಮುಂದಿನ ದಿನಗಳಲ್ಲಿ ಕಾನೂನಿಗೆ ಅನುಸಾರವಾಗಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು. ನ್ಯಾಯಾಂಗ ಪರಿಶೀಲನೆಯ ಸಾಂವಿಧಾನಿಕ ಅಧಿಕಾರ ಹೊಂದಿರುವ ಉನ್ನತ ನ್ಯಾಯಾಲಯಗಳು ಅಂದರೆ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗೆ ಅಧಿಕಾರವಿದೆ. ಉನ್ನತ ನ್ಯಾಯಾಲಯಗಳು ರಾಹುಲ್‌ ಅವರಿಗೆ ನೀಡಲಾಗಿರುವ ತೀರ್ಪುಗಳಲ್ಲಿ ಕಂಡುಬರುವ ಕಾನೂನು ದೋಷಗಳನ್ನು ಸರಿಪಡಿಸುತ್ತದೆ ಎಂದು ನಾವು ನಂಬುತ್ತೇವೆ,” ಎಂದು ಸಿಂಘ್ವಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ನರೋಡಾ ಗಾಮ್‌ ಹತ್ಯಾಕಾಂಡ | ಆರೋಪಿಗಳ ಖುಲಾಸೆ ನ್ಯಾಯದ ಕೊಲೆ; ಸಾಕ್ಷಿಗಳ ಅಳಲು

ಹೋರಾಟ ಮುಂದುವರಿಕೆ – ಕಾಂಗ್ರೆಸ್:

ಸೂರತ್ ಸೆಷನ್ಸ್ ನ್ಯಾಯಾಲಯವು ರಾಹುಲ್ ಗಾಂಧಿ ಅವರ ಅರ್ಜಿ ತಿರಸ್ಕರಿಸಿದ್ದರೂ ಕಾನೂನಿನಡಿ ಲಭ್ಯವಿರುವ ಎಲ್ಲ ಆಯ್ಕೆಗಳನ್ನು ಬಳಸಿಕೊಂಡು, ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

“ಇದು ರಾಜಕೀಯ ಪ್ರೇರಿತ ಪ್ರಕರಣ. ನಮಗೆ ಭಾರತದ ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಹೋರಾಟ ಮುಂದುವರಿಯಲಿದೆ” ಎಂದು ಮತ್ತೊಬ್ಬ ಕಾಂಗ್ರೆಸ್‌ನ ಮುಖಂಡ ಭೂಪಿಂದರ್ ಸಿಂಗ್ ಹೂಡಾ ಹೇಳಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಬಿನ್ ಪಿ ಮೊಗೇರ, “ನೀವು ಲೋಕಸಭಾ ಸದಸ್ಯರಾಗಿದ್ದವರು ಹಾಗೂ ದೇಶದ ಎರಡನೇ ಅತಿ ದೊಡ್ಡ ರಾಜಕೀಯ ಪಕ್ಷವೊಂದರ ಅಧ್ಯಕ್ಷರೂ ಆಗಿದ್ದವರು. ಹೀಗಾಗಿ, ಪದಗಳನ್ನು ಬಳಸುವಾಗ ನೀವು (ರಾಹುಲ್) ಎಚ್ಚರದಿಂದ ಇರಬೇಕಿತ್ತು” ಎಂದು ಹೇಳಿದರು.

“ರಾಹುಲ್ ಅವರಂತಹ ವ್ಯಕ್ತಿಯಿಂದ ಸಭ್ಯ ನಡವಳಿಕೆಗೆ ಸಂಬಂಧಿಸಿ ಅಧಿಕ ನಿರೀಕ್ಷೆ ಇರುತ್ತದೆ” ಎಂದ ನ್ಯಾಯಾಧೀಶರು, “ಕಾನೂನಿನಡಿ ಅವಕಾಶವಿರುವಷ್ಟು ಪ್ರಮಾಣದ ಶಿಕ್ಷೆಯನ್ನು ವಿಚಾರಣಾ ನ್ಯಾಯಾಲಯ ವಿಧಿಸಿದೆ” ಎಂದು ತಿಳಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊದಲ ಹಂತದ ಮತದಾನ | ಪಶ್ಚಿಮ ಬಂಗಾಳ ಬಿಜೆಪಿ ನಾಯಕನ ಮನೆಯಲ್ಲಿ ಬಾಂಬ್ ಪತ್ತೆ, ಮಣಿಪುರದಲ್ಲೂ ಹಿಂಸಾಚಾರ

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪಶ್ಚಿಮ...

ಕಲಬುರಗಿಯಲ್ಲಿ ಬಿಜೆಪಿಗೆ ಹಿನ್ನಡೆ; ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್‌ ಸೇರ್ಪಡೆ

ಲೋಕಸಭೆ ಚುನಾವಣೆಯ ವೇಳೆ ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಿದೆ. ಮಾಜಿ...

ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ...

ಡಿಡಿ ನ್ಯೂಸ್ ಲೋಗೊ ಬಣ್ಣ ಕೇಸರೀಕರಣ: ವ್ಯಾಪಕ ಆಕ್ರೋಶ

ಕೇಂದ್ರ ಸರ್ಕಾರ ಅಧೀನದ ವಿದ್ಯುನ್ಮಾನ ಮಾಧ್ಯಮ ಸಂಸ್ಥೆ ಡಿಡಿ ನ್ಯೂಸ್‌ ಲೋಗೊ...