ಬಂಧನ ಅಕ್ರಮವಲ್ಲ; ಇಡಿ ವಿರುದ್ಧದ ಕೇಜ್ರಿವಾಲ್ ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿರುವುದನ್ನು ಮತ್ತು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಬಂಧನ ಆದೇಶವನ್ನು ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, “ಅಬಕಾರಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಬಂಧನ ಮಾನ್ಯವಾಗಿದೆ” ಎಂದು ಹೇಳಿದೆ.

“ಬಂಧನವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 19ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ. ಅರ್ಜಿಯು ಜಾಮೀನಿಗಾಗಿ ಸಲ್ಲಿಸಿರುವುದಲ್ಲ. ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಲು ಈ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ನ್ಯಾಯಾಲಯವು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಾಲಯದ ಆದೇಶವನ್ನು ಉಲ್ಲೇಖಿಸಿ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಇದನ್ನು ಓದಿದ್ದೀರಾ?   ದೆಹಲಿ ಸಿಎಂ ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಲು ಮೂರನೇ ಅರ್ಜಿ: ಹೈಕೋರ್ಟ್‌ ಗರಂ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇಡಿ ಸಂಗ್ರಹಿಸಿದ ವಿಷಯವು ಅರವಿಂದ್ ಕೇಜ್ರಿವಾಲ್ ಪಿತೂರಿ ಮತ್ತು ಅಪರಾಧದ ಆದಾಯದ ಬಳಕೆ ಮತ್ತು ಮರೆಮಾಚುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸುತ್ತದೆ. ಅವರು ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ಮತ್ತು ಎಎಪಿಯ ಸಂಚಾಲಕರಾಗಿ ಭಾಗಿಯಾಗಿದ್ದಾರೆ ಎಂದು ಇಡಿ ಪ್ರಕರಣವು ಬಹಿರಂಗಪಡಿಸುತ್ತದೆ” ಎಂದು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.

2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಂದಿರುವ ಬಂಧನದ ಸಮಯವನ್ನು ಕೇಜ್ರಿವಾಲ್ ಈ ಹಿಂದೆ ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ಅರ್ಜಿದಾರರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲಾಗಿದೆ ಮತ್ತು ನ್ಯಾಯಾಲಯವು ಕಾನೂನಿನ ಪ್ರಕಾರ ಅವರ ಚುನಾವಣೆಯ ಸಮಯವನ್ನು ಲೆಕ್ಕಿಸದೆ ನ್ಯಾಯಾಂಗ ಬಂಧನ ವಿಧಿಸಿದೆ” ಎಂದಿದೆ.

ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಅವರನ್ನು ಇಡಿ ಕಸ್ಟಡಿಗೆ ನೀಡಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ಪ್ರಸ್ತುತ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಜ್ರಿವಾಲ್‌ರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಭಗವಂತ್ ಮಾನ್ ಆರೋಪ

ದೆಹಲಿ ಅಬಕಾರಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ "ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಏ.29ರ ನಂತರ ಕೇಜ್ರಿವಾಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ ; ನ್ಯಾಯಾಂಗ ಬಂಧನ ಏ.23ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ...

ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಹೆಲಿಕಾಪ್ಟರ್ ತಪಾಸಣೆ

ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ತೆರಳುತ್ತಿದ್ದ ಹೆಲಿಕಾಪ್ಟರ್‌ಅನ್ನು ತಪಾಸಣೆಗೊಳಪಡಿಸಿದ್ದಾರೆ.ನೀಲಗಿರಿ...

ಆಕ್ಷೇಪಾರ್ಹ ದೃಶ್ಯಗಳಿದ್ದರೆ ಬಿಗ್‌ಬಾಸ್‌ ಪ್ರಸಾರ ನಿಲ್ಲಿಸಿ: ಕೇಂದ್ರಕ್ಕೆ ಕೇರಳ ಹೈಕೋರ್ಟ್ ನಿರ್ದೇಶನ

ಮಲಯಾಳಂ ರಿಯಾಲಿಟಿ ಶೋ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ಪ್ರಸಾರದ ನಿಯಮಾವಳಿಗಳನ್ನು ಉಲ್ಲಂಘಿಸುವ ಆಕ್ಷೇಪಾರ್ಹ...