ಐಪಿಎಲ್‌ 2023 | ಹಾರ್ದಿಕ್‌ ಹೋರಾಟ ವ್ಯರ್ಥ; ಟೈಟನ್ಸ್‌ ವಿರುದ್ಧ ಡೆಲ್ಲಿಗೆ ಗೆಲುವು

Date:

ಬ್ಯಾಟಿಂಗ್‌ನಲ್ಲಿ ಸಾಮನ್ಯ ಮೊತ್ತ ಪೇರಿಸಿದರೂ ಸಹ, ಬಿಗು ಬೌಲಿಂಗ್‌ ದಾಳಿ ಸಂಘಟಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಗುಜರಾತ್‌ ಟೈಟನ್ಸ್‌  ವಿರುದ್ಧ ರೋಚಕ ಜಯ ಸಾಧಿಸಿದೆ.

ಐಪಿಎಲ್‌ 16ನೇ ಆವೃತ್ತಿಯ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌, ಅಗ್ರಸ್ಥಾನಿ ಗುಜರಾತ್‌ ಟೈಟನ್ಸ್‌ ತಂಡವನ್ನು ಅವರದ್ದೇ ಮೈದಾನದಲ್ಲಿ 5 ರನ್‌ಗಳ ಅಂತರದಲ್ಲಿ ಮಣಿಸಿದೆ.

ಮೂರನೇ ಕ್ರಮಾಂಕದಲ್ಲಿ ಆಡಲಿಳಿದು 53 ಎಸೆತಗಳಲ್ಲಿ 59 ರನ್‌ ಗಳಿಸಿ ಅಜೇಯರಾಗುಳಿದರೂ ಸಹ ನಾಯಕ ಹಾರ್ದಿಕ್‌ ಪಾಂಡ್ಯಾಗೆ ತಂಡವನ್ನು ಗೆಲುವಿನತ್ತ ಮುನ್ನಡೆಸಲಾಗಲಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 8 ವಿಕೆಟ್‌ ನಷ್ಟದಲ್ಲಿ 130 ರನ್‌ಗಳಿಸಿತ್ತು. ಸಾಮಾನ್ಯ ಸವಾಲಿನ ಚೇಸಿಂಗ್‌ ವೇಳೆ ಟೈಟನ್ಸ್‌ ಗೆಲುವಿಗೆ ಅಂತಿಮ 9 ಎಸೆತಗಳಲ್ಲಿ 30 ರನ್‌ಗಳ ಕಠಿಣ ಗುರಿ ಮುಂದಿತ್ತು. ಆದರೆ ಅನ್ರಿಚ್ ನಾರ್ಟ್ಜೆ ಎಸೆದ 19ನೇ ಓವರ್‌ನ ಅಂತಿಮ 3 ಎಸೆತಗಳಲ್ಲಿ ಹ್ಯಾಟ್ರಿಕ್‌ ಸಿಕ್ಸ್‌ ಬಾರಿಸಿದ ತೆವಾಟಿಯ ಪಂದ್ಯಕ್ಕೆ ರೋಚಕ ತಿರುವು ತಂದುಕೊಟ್ಟರು.

ಅಂತಿಮ ಓವರ್‌ನಲ್ಲಿ ಗುಜರಾತ್‌ ಗೆಲುವಿಗೆ 12 ರನ್‌ಗಳ ಅಗತ್ಯವಿತ್ತು. ಆದರೆ 6 ರನ್‌ ನೀಡಿ ತೆವಾಟಿಯ ವಿಕೆಟ್‌ ಪಡೆದ ಅನುಭವಿ ಬೌಳರ್‌ ಇಶಾಂತ್‌ ಶರ್ಮಾ ಡೆಲ್ಲಿಯ ಗೆಲುವಿನ ರುವಾರಿಯಾದರು.

23 ರನ್‌ಗಳಿಗೆ 5 ವಿಕೆಟ್‌ !

ಮೊದಲು ಬ್ಯಾಟ್‌ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 23 ರನ್‌ಗಳಿಸುವಷ್ಟರಲ್ಲೇ 5 ಪ್ರಮುಖ ವಿಕೆಟ್‌ ಕಳೆದುಕೊಂಡಿತ್ತು.  ಆದರೆ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಂದ ಅಮಾನ್‌ ಹಕೀಮ್‌ ಖಾನ್‌ ಭರ್ಜರಿ ಅರ್ಧಶತಕ ಸಿಡಿಸಿ ಡೆಲ್ಲಿ ಪಾಲಿಗೆ ರಕ್ಷಕನಾದರು.

44 ಎಸೆತಗಳನ್ನು ಎದುರಿಸಿದ ಖಾನ್‌ ತಲಾ 3 ಬೌಂಡರಿ ಮತ್ತು ಸಿಕ್ಸರ್‌ಗಳ ನೆರವಿನಿಂದ 51 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು.   

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...