ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ | ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ಗೆ ಜಾಮೀನು

Date:

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಹಾಗೂ ನಿರ್ಗಮಿತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ.

ರೂಸ್ ಅವೆನ್ಯೂ ನ್ಯಾಯಾಲಯಗಳ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರು ಷರತ್ತುಬದ್ಧ ಜಾಮೀನು ನೀಡಿ, ಆದೇಶಿಸಿದ್ದಾರೆ.

“ನಾವು ಕೆಲವು ಷರತ್ತುಗಳನ್ನು ವಿಧಿಸಿದ್ದೇವೆ. ಆರೋಪಿಯು ನೇರವಾಗಿ ಅಥವಾ ಪರೋಕ್ಷವಾಗಿ ದೂರುದಾರರನ್ನು ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ನ್ಯಾಯಾಲಯದ ಅನುಮತಿಯಿಲ್ಲದೆ ದೇಶವನ್ನು ತೊರೆಯಬಾರದು. ಎಲ್ಲ ಷರತ್ತುಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತದೆಯೇ ಎಂದು ಖಚಿತಪಡಿಸಿಕೊಳ್ಳಿ” ಎಂದು ನ್ಯಾಯಾಲಯ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೆಹಲಿ ಕೋರ್ಟ್ ಕಳೆದ ಜು.18ರಂದು ತಲಾ 25,000 ರೂಪಾಯಿ ಬಾಂಡ್ ಮೇಲೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...