ಅಧಿಕಾರಿ ಪ್ರತಿಮಾ ಹತ್ಯೆ | ನ.15 ರವರೆಗೆ ಆರೋಪಿ ಕಿರಣ್ ಪೊಲೀಸ್‌ ಕಸ್ಟಡಿಗೆ

Date:

ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಪ್ರತಿಮಾ ಕೆ ಎಸ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಮಾಜಿ ಕಾರು ಚಾಲಕ ಕಿರಣ್ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ಕುಮಾರ್ ಶಹಾಪುರ್‌ವಾಡ್‌​ ಸ್ಪಷ್ಟನೆ ನೀಡಿದ್ದಾರೆ. ಇದೀಗ, ಆರೋಪಿ ಕಿರಣ್‌ನನ್ನು ನವೆಂಬರ್‌ 15 ರವರೆಗೆ ಪೊಲೀಸ್‌ ಕಸ್ಟಡಿಗೆ ನೀಡಿ ಬೆಂಗಳೂರಿನ 2ನೇ ಎಸಿಎಮ್‌ಎಮ್‌ ನ್ಯಾಯಾಲಯ ಆದೇಶ ಹೊರಡಿಸಿದೆ.

ಹೆಚ್ಚಿನ ವಿಚಾರಣೆಗಾಗಿ ಆರೋಪಿ ಕಿರಣ್‌ನನ್ನು 11 ದಿನ ವಶಕ್ಕೆ ನೀಡುವಂತೆ ಬೆಂಗಳೂರಿನ 2ನೇ ಎಸಿಎಮ್‌ಎಮ್‌ ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದ್ದರು. ಈ ಹಿನ್ನೆಲೆ, ಆರೋಪಿಯನ್ನು ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

“ಆರೋಪಿ ಕಿರಣ್ ಸ್ವಭಾವ ಮತ್ತು ಕಚೇರಿಯಲ್ಲಿ ನಡೆಯುತ್ತಿದ್ದ ಅಧಿಕೃತ ಮಾಹಿತಿಯನ್ನು ಬೇರೆಯವರಿಗೆ ನೀಡುತ್ತಿ​ದ್ದ ಹಿನ್ನೆಲೆ ಅಧಿಕಾರಿ ಪ್ರತಿಮಾ ಅವರು ಕಿರಣ್‌ನನ್ನು ಎರಡು ತಿಂಗಳ ಹಿಂದೆ ಕೆಲಸದಿಂದ ತೆಗೆದಿದ್ದರು. ಕೆಲಸ ಕಳೆದುಕೊಂಡ ಬಳಿಕ ಊರು ಬಿಟ್ಟಿದ್ದ ಕಿರಣ್​, 1 ತಿಂಗಳ ಬಳಿಕ ಬೆಂಗಳೂರಿಗೆ ಬಂದು ಪ್ರತಿಮಾ ಅವರನ್ನು ಕೊಲೆಗೈದಿದ್ದಾನೆ. ಈ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ” ಎಂದು  ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‌ಕುಮಾರ್ ಶಹಾಪುರ್‌ವಾಡ್‌​ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆಲಸದಿಂದ ತೆಗೆದಿದ್ದಕ್ಕೆ ಪ್ರತಿಮಾರನ್ನು ಕೊಲೆಗೈದ ಕಾರು ಚಾಲಕ ಕಿರಣ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರತಿಮಾ ಅವರು ಉಪ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಅಪಾರ್ಟ್​ಮೆಂಟ್​ನಲ್ಲಿ ಹತ್ಯೆಯಾಗಿದ್ದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ್ಲಿ ಪ್ರತಿಮಾ ಅವರ ಅಂತ್ಯಕ್ರಿಯೆ ನೆರವೇರಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮತದಾನದ ಮಹತ್ವ ಕುರಿತು ಯುವ ಮತದಾರರಿಂದ ಮಾನವ ಸರಪಳಿ

ಈ ಬಾರಿ ಗದಗ ಜಿಲ್ಲೆಯಲ್ಲಿ ಹೊಸದಾಗಿ 26 ಸಾವಿರ ಮಂದಿ ಯುವ...

ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ | ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅಂಜುಮನ್ ಸಂಸ್ಥೆಯಿಂದ ಮನವಿ

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆಗೈದ ಆರೋಪಿ ಫಯಾಝ್...

ದಕ್ಷಿಣ ಕನ್ನಡ | ಬಿಜೆಪಿ ಸೋಲಿಸಿ ಜಾತ್ಯತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್ಐ ಕರೆ

ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು ಕಳೆದ ಎರಡು ಅವಧಿಯಿಂದ...

ಕೊಡಗು | ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿ ಸೆರೆ

ಇತ್ತೀಚೆಗೆ ಕೊಡಗಿನಲ್ಲಿ ಎಸ್ಟೇಟ್ ಕಾರ್ಮಿಕನನ್ನು ಕೊಂದಿದ್ದ ಹುಲಿಯನ್ನು ಶುಕ್ರವಾರ ಅರಣ್ಯ ಅಧಿಕಾರಿಗಳು...