ಧರ್ಮಸ್ಥಳದಲ್ಲಿ ಸುತ್ತಾಡುತ್ತಿದ್ದ ಹಿಂದೂ-ಮುಸ್ಲಿಂ ಜೋಡಿ; ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Date:

ಅನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಸ್ಥಾಪಿಸಲಾಗಿದ್ದರೂ ಕೂಡ, ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ ಇಂದು(ಜ.16) ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳದಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಸುತ್ತಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಬೆಂಗಳೂರು ಮೂಲದ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ತಡೆದ ಕೆಲವರು, ಅವರ ವಿವರಗಳನ್ನು ಕೇಳಿದ್ದಾರೆ. ಪಂಚೆ ಧರಿಸಿ ತಿಲಕ ಹಾಕಿ ಯುವತಿ ಜೊತೆ ಸುತ್ತಾಡುತ್ತಿದ್ದ ಯುವಕನನ್ನು ವಿಚಾರಿಸಿದಾಗ ಆತ ಮುಸ್ಲಿಂ ಯುವಕ ಎಂದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧರ್ಮಸ್ಥಳ ಠಾಣೆಯ ಪೊಲೀಸರು, ಜೋಡಿಯನ್ನು ಬಳಿಕ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿರುವುದಾಗಿ ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜೋಡಿಯು ನೀಡಿದ ಮಾಹಿತಿಯನ್ನಾಧರಿಸಿ ಪೊಲೀಸರು ಅವರ ಪೋಷಕರೊಂದಿಗೆ ಮಾತನಾಡಿದ್ದು, ಬಳಿಕ ಅವರನ್ನು ಧರ್ಮಸ್ಥಳ ಪೊಲೀಸರು ಮನೆಗೆ ಕಳುಹಿಸಿರುವುದಾಗಿ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಬಂಟ್ವಾಳ | ರಿಕ್ಷಾ ಹಿಂದೆ ಗನ್‌ನೊಂದಿಗೆ ಗಾಂಧಿ ಹಂತಕ ಗೋಡ್ಸೆ ಹೆಸರು: ಸಮಾಜದಲ್ಲಿ ಆತಂಕ ಸೃಷ್ಟಿಸುವ ಹುನ್ನಾರ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆ್ಯಂಟಿ ಕಮ್ಯೂನಲ್ ವಿಂಗ್(Anti Communal Wing) ಅನ್ನು ಪೊಲೀಸ್ ಇಲಾಖೆ ರಚಿಸಿದ್ದರೂ ಕೂಡ, ಕರಾವಳಿ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಅನೇಕ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. ಕೆಲವು ಘಟನೆಗಳಲ್ಲಿ ಹಲ್ಲೆ ಕೂಡ ನಡೆದಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ದುರುದ್ದೇಶ ಇಲ್ಲದಿದ್ದರೆ ಕುಂಕುಮ ಹಾಕಿಕೊಂಡು ಬರುವಾಗ ಅಗತ್ಯವೇನಿತ್ತು?
    ಹಿರಿಯರಿಗೆ ಹೇಳದೆ ಬಂದಿದ್ದಲ್ಲವೇ? ಇದು ಅನೈತಿಕ ಪೊಲೀಸ್ ಗಿರಿ ಹೇಗೆ ಆಗುತ್ತದೆ?

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...