ಧಾರವಾಡ | ಕಾನೂನುಗಳು, ಸಾಮಾಜಿಕ ವ್ಯವಸ್ಥೆಯ ಪೋಷಕರಿಗೆ ಗೌರವ ಕೊಡಿ: ನ್ಯಾ. ಶಾಂತಿ

Date:

ಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನುಗಳು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕೆ.ಜಿ. ಶಾಂತಿ ಅವರು ಹೇಳಿದರು.

ಧಾರವಾಡ ನಗರದ ಆಲೂರು ವೇಂಕಟರಾವ್ ಸಾಂಸ್ಕೃತಿಕ ಸಮುಚ್ಛಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ  ಹಾಗೂ ಮಹಿಳಾ ಮತ್ತು  ಮಕ್ಕಳ ಅಭಿವೃದ್ದಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ- ಬೇಟಿ ಪಡಾವೋ ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.

ಕುಟುಂಬಕ್ಕಾಗಿ ಸರ್ವವನ್ನು ಸಮರ್ಪಿಸುವ ಹೆಣ್ಣು ತನ್ನ ಆರೋಗ್ಯದ ಬಗ್ಗೆಯೂ ಕಾಳಜಿ, ಎಚ್ಚರಿಕೆ ವಹಿಸುವ ಅಗತ್ಯವಿದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಮತ್ತು ವಿಶ್ರಾಂತಿ ರಹಿತ ಜೀವನಶೈಲಿಯಿಂದ ಅನೇಕ ರೀತಿಯ ರೋಗರುಜಿನಗಳು ಹೆಣ್ಣುಮಕ್ಕಳನ್ನು ಬಾಧಿಸುತ್ತಿವೆ. ಸರಿಯಾದ ಸಮಯಕ್ಕೆ ಅಗತ್ಯಚಿಕಿತ್ಸೆ ಲಭಿಸದೆ ಅನೇಕ ಮಧ್ಯವಯಸ್ಕ ಮಹಿಳೆಯರು ಕ್ಯಾನ್ಸರ್, ಹೃದಯಾಘಾತ, ರಕ್ತಹೀನತೆ, ರಕ್ತದೊತ್ತಡ, ಮಧುಮೇಹದಂತ ವಿವಿಧ ರೀತಿಯ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಧನಾತ್ಮಕ ಚಿಂತನೆ ಮತ್ತು ಸಂಗೀತ, ಸಾಹಿತ್ಯ ಆಸ್ವಾದನೆ, ಕಥೆ-ಕಾದಂಬರಿ ಓದು, ಮನರಂಜನೆ ಆಟಗಳು ಮಹಿಳಿಯರನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ ಎಂದು  ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ತಿಳಿಸಿದರು.

ಯಾವುದೇ ಒಂದು ಸಣ್ಣದಾದ ಗಿಡವನ್ನು ನೆಟ್ಟು ಅದಕ್ಕೆ ಸರಿಯಾಗಿ ನೀರು ಗೊಬ್ಬರವನ್ನು ಹಾಕಿದಾಗ ಮಾತ್ರ ಅದು ಬೆಳೆದು ಗಾಳಿ ನೆರಳು ನೀಡಲು ಸಹಾಯಕವಾಗಿದೆ ಹಾಗೇ ಮಹಿಳೆಯರಿಗೂ ಕೆಲವೊಂದು ಸೌಲಭ್ಯಗಳು ಇವೆ ಅವುಗಳನ್ನು  ಮಹಿಳೆಯರಿಗೆ ತಲುಪುವಂತೆ ಮಾಡಬೇಕು ಅದಕ್ಕೆ ತಕ್ಕದಾದ ವಾತಾವರಣವನ್ನು ನಿರ್ವಹಿಸಿ ಕೊಡುವುದು ಎಲ್ಲ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಭೇಟಿ ಬಚಾವೋ ಭೇಟಿ ಪಡಾವೋ ಜಾಗೃತಿಯ ಕಾರ್ಯಕ್ರಮವನ್ನು ಪ್ರತಿಯೊಂದು ಜಿಲ್ಲೆ ಮತ್ತು ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಿಂದ ಹೆಣ್ಣು ಮಕ್ಕಳ ತಾಯಂದಿರಿಗೆ ಮಾನಸಿಕ ಸಾಮರ್ಥ್ಯ, ಧೈರ್ಯ ತುಂಬಿಸುವಂತಹ ಒಂದು ಹಣಕಾಸಿನ ಯೋಜನೆಯಾಗಿ ಸುಕನ್ಯಾ ಸಮೃದ್ಧಿ ಬಂದು ನಿಂತೆದೆ. ಪ್ರತಿಯೊಬ್ಬರು ಇಂತಹ ಸರಕಾರಿ ಯೋಜನೆಗಳನ್ಬು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಆರ್ಥಿಕ ಸಭಲತೆ, ಸ್ವಾವಲಂಭತೆ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದರು.

ಮಹಿಳೆಯರ ಸುರಕ್ಷತೆ, ಸುಭದ್ರತೆಗೆ ಬರೀ ಕಾನೂನುಗಳು ಬಂದರೆ ಸಾಲದು. ಅದರ ಸದುಪಯೋಗವನ್ನು ಹೆಣ್ಣುಮಕ್ಕಳು ಪಡೆದುಕೊಳ್ಳುವಂತ ಸಾಮಾಜಿಕ ವಾತಾವರಣ ನಿರ್ಮಾಣವಾಗಬೇಜು. ಹೆಣ್ಣು ಮಕ್ಕಳಿಗೆ ಅವರು ಸ್ವಯಂ ಉದ್ಯೋಗಿಗಳಾಗಲು, ಸ್ವಾಲಂಭಿಗಳಾಗಲು  ಬೆಂಬಲಿಸಿಬೇಕೆಂದು ಅವರು ಹೇಳಿದರು.

ನಮ್ಮ ಸಾಧನೆಯ ಹಾದಿಯಲ್ಲಿ ಕಲ್ಲಿರಲಿ, ಮುಳ್ಳಿರಲಿ  ಹಿಮ್ಮೆಟ್ಟದೆ, ಮುಂದೆ ಸಾಗಿ ಗುರಿ ಮುಟ್ಟಬೇಕು. ಹಾಗೆ ದ್ವೇಷವನ್ನು ಬೆಳೆಸಿಕೊಂಡು ಬದುಕುವಷ್ಟು ಜೀವನ ದೊಡ್ಡದಿಲ್ಲ; ಕೇಡು ಬಯಸಿದವರಿಗೆ ಕ್ಷಮೆ ನೀಡಿ ಮುಂದೆ ಸಾಗಬೇಕೆಂದು ಅವರು ನುಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ಎಫ್.ದೊಡ್ಡಮನಿ ಮಾತನಾಡಿ, ಮೊದಲು ಮಹಿಳೆಯರಿಗೆ ಉದ್ಯೋಗ ಸೇರಿ ವಿಶೇಷ ವಲಯಗಳಲ್ಲಿ ಯಾವುದೇ ರೀತಿ ಅವಕಾಶವಿರಲಿಲ್ಲ. ಅವರ ಸಾಮರ್ಥ್ಯ ಶಕ್ತಿ ಎಷ್ಟು ಅಂತ ಗೊತ್ತಿರಲಿಲ್ಲ. ಸ್ವಾತಂತ್ರ್ಯದ ನಂತರದಲ್ಲಿ ಸಂವಿಧಾನದ ಮೂಲಕವಾಗಿ ಲಿಂಗತಾರತಮ್ಯವಿಲ್ಲದೆ, ಎಲ್ಲರಿಗೂ ಸಮಾನವಾದ ಅವಕಾಶಗಳು ಲಭಿಸಿವೆ ಎಂದರು.

ಇತ್ತೀಚಿನ ದಿನಗಳಲ್ಲಿ ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುತ್ತಿವೆ. ಇದರ ಪರಿಣಾಮವಾಗಿ ಮಕ್ಕಳು  ತಂದೆ-ತಾಯಿಯರ ಪ್ರೀತಿಯಿಂದ ವಂಚಿತರಾಗುತ್ತಿದ್ದಾರೆ. ಮಕ್ಕಳಲ್ಲಿ, ಕುಟುಂಬ ಸದಸ್ಯರಲ್ಲಿ, ಪ್ರತಿಯೊಬ್ಬರನ್ನು ಪ್ರೀತಿಯಿಂದ ಕಾಣುವ ಗುಣವನ್ನು ಮತ್ತು ಒಳ್ಳೆಯ ಸಂಬಂಧಗಳ ಜೊತೆ ಮಾನವೀಯ  ಮೌಲ್ಯಗಳನ್ನು ಬೆಳೆಸಬೇಕೆಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ  ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡಮಿ ಯೋಜನಾ ನಿರ್ದೇಶಕಿ ಭಾರತಿ ಶೆಟ್ಟರ ಮಾತನಾಡಿದರು.

ಡಿಮಾನ್ಸ್ ಸಂಸ್ಥೆಯ ಮನೋವೈಧ್ಯಕೀಯ ಸಮಾಜಕಾರ್ಯವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಡಿ.ಜೆ. ಅನಂತರಾಮ ಅವರು ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಅವರು ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ಅನುಪಮಾ ಅಂಗಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದಗಧಿ ಇಲಾಖೆಯ ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳು, ವಿವಿಧ ಇಲಾಖೆಗಳ ಮಹಿಳಾ ಅಧಿಕಾರಿ ಸಿಬ್ಬಂದಿಗಳು, ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಮುಂದೆ ಹೋಗುತ್ತಿದ್ದದ  ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು...

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಚಿತ್ರದುರ್ಗ | ಅಕ್ರಮ ಮದ್ಯ ಮಾರಾಟ ನಿಲ್ಲಿಸದಿದ್ದರೆ ಚುನಾವಣೆ ಬಹಿಷ್ಕಾರ; ಗ್ರಾಮಸ್ಥರ ಎಚ್ಚರಿಕೆ

ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ತಾಲೂಕಿನ ಬೆಳಗೆರೆ ಪಂಚಾಯಿತಿಯ ಭಾಗದ ಎಲ್ಲ ಗ್ರಾಮಗಳ...